More

    ಇಂಗು ತಿಂದ ಮಂಗನಂತಾದ ರಾಜ್ಯ ಸರ್ಕಾರ: ಕುಮಾರಸ್ವಾಮಿ ಟೀಕೆ

    ಬೆಂಗಳೂರು: ಮೂರು ತಿಂಗಳಿಂದ ಮುಖ್ಯಮಂತ್ರಿ ಮತ್ತು ಸಚಿವರು ಮಾತಿನ ಮಂಟಪ ಕಟ್ಟುವುದರಲ್ಲಿ ಕಾಲ ಕಳೆದು, ಕರೊನಾ ನಿರ್ವಹಣೆಯ ವಿಷಯದಲ್ಲಿ ಈಗ ಇಡೀ ಸರ್ಕಾರ ಇಂಗು ತಿಂದ ಮಂಗನಂತಾಗಿದೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಟೀಕಿಸಿದ್ದಾರೆ.

    ಸೋಂಕಿತರ ಸಂಖ್ಯೆಯ ಗಣನೀಯ ಏರಿಕೆಯನ್ನು ತಡೆಯಲು ಸರ್ಕಾರ ಪೇಚಾಡುತ್ತಿದೆ. ಕರೊನಾ ಸೋಂಕು ಪೀಡಿತರು ಬೆಡ್‌ಗಳಿಲ್ಲದೆ, ಚಿಕಿತ್ಸೆ ಇಲ್ಲದೆ ಮನೆಯಲ್ಲೇ ನರಳಿ ಸಾಯುತ್ತಿದ್ದಾರೆ. ಆರಂಭಿಕ ಹಂತದಲ್ಲೇ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ. ನೆರೆಯ ಕೇರಳ ಸರ್ಕಾರ ಕರೊನಾ ತಡೆಗೆ ಕೈಗೊಂಡ ಕ್ರಮಗಳ ಸಿದ್ಧ ಮಾದರಿ ಕಣ್ಣೆದುರಿಗಿದೆ. ರಾಜ್ಯದ ಸಚಿವರಲ್ಲಿ ಸಮನ್ವಯವಿಲ್ಲ, ಒಬ್ಬೊಬ್ಬರದು ಒಂದೊಂದು ನಿಲುವು. ಇವರ ತಿಕ್ಕಾಟದಲ್ಲಿ ರಾಜ್ಯದ ಜನತೆ ಹೈರಾಣಾಗಿದ್ದಾರೆ ಎಂದು ಆರೋಪಿಸಿದ್ದಾರೆ.

    ಇದನ್ನೂ ಓದಿ: ಟೆಸ್ಟ್ ಪಂದ್ಯದ ವೇಳೆ ಮೈದಾನದಲ್ಲೇ ಪತ್ರಿಕೆ ಓದಿದ್ದ ಫೀಲ್ಡರ್! ಕಾರಣವೇನು ಗೊತ್ತೇ?

    ಕರೊನಾ ಸೋಂಕು ಶರವೇಗದಲ್ಲಿ ಎಲ್ಲೆಡೆ ವ್ಯಾಪಿಸುತ್ತಿರುವ ಪ್ರಸಕ್ತ ಸನ್ನಿವೇಶದಲ್ಲಿ ರಾಜ್ಯದಾದ್ಯಂತ ಸೋಂಕಿತರು ಚಿಕಿತ್ಸೆಯಿಲ್ಲದೆ ಸಾಯುತ್ತಿರುವ ಘಟನೆಗಳು ಕರುಳು ಹಿಂಡುತ್ತಿವೆ. ಸರ್ಕಾರ ಇನ್ನೂ ಮೈಮರೆತರೆ ಸೋಂಕಿತರು ಬೀದಿ ಬೀದಿಯಲ್ಲಿ ಸಾಯುವ ಸ್ಥಿತಿ ನಿರ್ಮಾಣವಾಗುತ್ತದೆ. ಕರೊನಾ ಸಮರ್ಪಕ ನಿರ್ವಹಣೆಗೆ ನಾನು ಕೊಟ್ಟ ಹತ್ತಾರು ಸಲಹೆಗಳನ್ನು ಲಘುವಾಗಿ ಪರಿಗಣಿಸಿದ ರಾಜ್ಯ ಸರ್ಕಾರ ಇನ್ನಾದರೂ ಎಚ್ಚೆತ್ತು ಕಾರ್ಯಪ್ರವೃತ್ತವಾಗಲಿ ಎಂದು ಹೇಳಿದ್ದಾರೆ.

    ಶಾಲಾ-ಕಾಲೇಜು ಆರಂಭ ಯಾವಾಗ?: ಶಿಕ್ಷಣ ಸಚಿವ ಸುರೇಶ್​ ಕುಮಾರ್​ ಹೇಳಿದ್ದು ಹೀಗೆ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts