ಬೆಂಗಳೂರು: ಜಾತಿ ಗಣತಿಯನ್ನು ಮುಂದಿಟ್ಟುಕೊಂಡು ಸಿಎಂ ಸಿದ್ದರಾಮಯ್ಯ ಒಕ್ಕಲಿಗರು ಹಾಗೂ ಲಿಂಗಾಯತರನ್ನು ಡಿಗ್ರೇಡ್ ಮಾಡಲು ಹೊರಟ್ಟಿದ್ಧಾರೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಆರೋಪಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಟ್ಟಿಗೆ ಮಾತನಾಡಿದ ಎಚ್.ಡಿ. ಕುಮಾರಸ್ವಾಮಿ (HD Kumaraswamy), ಜಾತಿ ಜನಗಣತಿ ವರದಿಯನ್ನು ಸಂಪುಟದಲ್ಲಿ ಚರ್ಚೆ ಮಾಡುತ್ತಾರಂತೆ. ಇದು ಕೇವಲ ಎರಡು ಸಮುದಾಯಗಳ ಪ್ರಶ್ನೆ ಅಲ್ಲ. ಇಷ್ಟು ದಿನ ಅಧಿಕಾರದಲ್ಲಿದ್ದ ಸಿದ್ದರಾಮಯ್ಯ ಅವರು ಶೋಷಿತ ಸಮುದಾಯಗಳಿಗೆ ಏನು ಮಾಡಿದ್ದಾರೆ ಏನುವುದನ್ನು ಮೊದಲು ಹೇಳಬೇಕಿದೆ. ಯಾವ ಯಾವ ಜಾತಿಯಲ್ಲಿ ಎಷ್ಟು ಜನ ಇದ್ದಾರೆ ಎನುವುದಕ್ಕಿಂತ ಎಷ್ಟು ಜನ ಬಡವರು ಇದ್ದಾರೆ ಎಂಬುದನ್ನು ಗಮನಿಸಬೇಕು. ಇಷ್ಟು ದಿನ ಸರ್ಕಾರದ ಸೌಲಭ್ಯಗಳು ಯಾರಿಗೆ ಸಿಕ್ಕಿವೆ, ಯಾರಿಗೆ ಸಿಕ್ಕಿಲ್ಲ ಎಂಬುದರ ಮೇಲೆ ಸರ್ಕಾರ ಬೆಳಕು ಚೆಲ್ಲಬೇಕು ಎಂದು ಸಲಹೆ ನೀಡಿದ್ದಾರೆ.
ಇನ್ನೂ ವೆಂಡರ್ಸ್ ಆತ್ಮಹತ್ಯೆ ಪತ್ರಕ್ಕೆ ಸಂಬಂಧಿಸಿದಂತೆ, ಈ ಸರ್ಕಾರ ಗುತ್ತಿಗೆದಾರರು ಹಾಗೂ ವೆಂಡರ್ಸ್ ಗಳ ಬಿಲ್ ಪಾವತಿಸಲು ಮೀನಮೇಷ ಎಣಿಸುತ್ತಿದೆ. ಸರ್ಕಾರದ ಆಂತರ್ಯ ಏನೆಂಬುದು ಎಲ್ಲರೂ ಬಲ್ಲ ವಿಷಯ. ತಮಗೆ ಬಿಡುಗಡೆ ಆಗಬೇಕಿರುವ ಬಿಲ್ಗಳನ್ನು ಪಾವತಿಸಿ ಎಂದು ಗುತ್ತಿಗೆದಾರರು ಧೈರ್ಯದಿಂದ ಕೇಳಬೇಕು. ಅವರೇನೂ ಭಿಕ್ಷುಕರಲ್ಲ, ಸಣ್ಣ ಪ್ರಮಾಣದ ಗುತ್ತಿಗೆದಾರರು ತಮ್ಮ ಮನೆ ಹೆಣ್ಣುಮಕ್ಕಳ ಒಡವೆಗಳನ್ನು ಒತ್ತೆ ಇಟ್ಟು ಕಾಮಗಾರಿಗಳನ್ನು ಪೂರ್ಣಗೊಳಿಸಿದ್ದಾರೆ. ಮಾಡಿರುವ ಸಾಲಗಳನ್ನು ತೀರಿಸಲಾಗದೆ ಬೀದಿಗೆ ಬಂದಿದ್ದಾರೆ.
ಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಉಡಾಫೆ ಮಾತುಗಳನ್ನಾಡುವುದು ಬಿಟ್ಟು ಮೊದಲು ಕಿಯೋನಿಕ್ಸ್ ವೆಂಡರ್ಸ್ಗಳ ಬಾಕಿ ಬಿಲ್ಗಳನ್ನು ಚುಕ್ತಾ ಮಾಡಲಿ. ಎಲ್ಲರ ಮೇಲೆ ಬೇಕಾಬಿಟ್ಟಿ ಮಾತನಾಡುವ ಪ್ರಿಯಾಂಕ್ ಖರ್ಗೆ ಅವರು ಸಬೂಬು ಹೇಳುವುದು ಬಿಡಬೇಕು. ಈವರೆಗೆ ಗುತ್ತಿಗೆದಾರರ ಎನ್ಓಸಿಗಳನ್ನು ಬಿಡುಗಡೆ ಮಾಡುವುದಕ್ಕೆ ಈ ಸರ್ಕಾರಕ್ಕೆ ಸಾಧ್ಯವಾಗಿಲ್ಲ. ಸಚಿವರು ಹಿಂದಿನ ಸರಕಾರದ ಮೇಲೆ ಗೂಬೆ ಕೂರಿಸುವ ಬದಲು ಗುತ್ತಿಗೆದಾರರ ಬಾಕಿ ಮೊತ್ತವನ್ನು ಬಿಡುಗಡೆ ಮಾಡಬೇಕೆಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಆಗ್ರಹಿಸಿದ್ದಾರೆ.
ಹಿರಿಯ ನಟ Viji ಅವರ ಹೆಸರ ಮುಂದೆ ಸರಿಗಮ ಸೇರಿಕೊಂಡಿದ್ದು ಹೇಗೆ? ಇಲ್ಲಿದೆ ಕುತೂಹಲಕಾರಿ ಮಾಹಿತಿ
ಪತ್ನಿಯ ಎದುರಲ್ಲೇ ಪ್ರೇಯಸಿ ಜತೆ ಪತಿಯ ತುಂಟಾಟ; ಇಬ್ಬರು ಮಹಿಳೆಯರ ಪ್ಲ್ಯಾನ್ಗೆ ಸುಟ್ಟು ಕರಕಲಾದ Engineer