ಹಿಂದು ಯುವಕರ ಹತ್ಯೆಯಾದಾಗ ಎಚ್‌ಡಿಕೆ ಈ ಶಬ್ದ ಬಳಸಿರಲಿಲ್ಲ: ಶ್ರೀರಾಮುಲು

ಚಿತ್ರದುರ್ಗ: ರಾಜ್ಯದ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಜವಾಬ್ದಾರಿ ಮರೆತು ಹೇಳಿಕೆ ನೀಡಿದ್ದಾರೆ. ಅವರ ಪಕ್ಷದ ಕಾರ್ಯಕರ್ತನ ಕೊಲೆಯಾಗಿದೆ ಎನ್ನುವ ಕಾರಣಕ್ಕೆ ಉದ್ವೇಗದಿಂದ ಶೂಟೌಟ್‌ ಮಾಡಿ ಎಂದಿದ್ದಾರೆ ಎಂದು ಬಿಜೆಪಿ ಶಾಸಕ ಶ್ರೀರಾಮುಲು ತಿಳಿಸಿದ್ದಾರೆ.

ವಾಲ್ಮೀಕಿ ಸಮುದಾಯದ ಸರ್ಕಾರಿ ನೌಕರರು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ರಾಜ್ಯದಲ್ಲಿ ನೂರಾರು ಹಿಂದು ಯುವಕರ ಹತ್ಯೆಯಾದಾಗ ಈ ಶಬ್ದ ಬಳಸಿರಲಿಲ್ಲ. ಕಾನೂನು ಸುವ್ಯವಸ್ಥೆ ಕಾಪಾಡಬೇಕಾದವರು ಈ ರೀತಿ ಮಾತನಾಡುವುದನ್ನು ಖಂಡಿಸುತ್ತೇನೆ ಎಂದು ಜೆಡಿಎಸ್ ಮುಖಂಡನ ಹತ್ಯೆಗೆ ಸಂಬಂಧಿಸಿದಂತೆ ಸಿಎಂ ಹೇಳಿಕೆಗೆ ರಾಮುಲು ಖಂಡನೆ ವ್ಯಕ್ತಪಡಿಸಿದರು.

ಸಮ್ಮಿಶ್ರ ಸರ್ಕಾರ ಪತನಕ್ಕೆ ಸಂಬಂಧಿಸಿದಂತೆ ನಾನು ಮಾತನಾಡುವುದಿಲ್ಲ. ಈ ಸಂಬಂಧ ಮಾಧ್ಯಮಗಳಿಗೆ ಹೇಳಿಕೆ ನೀಡದಂತೆ ನಮ್ಮ ನಾಯಕ ಬಿ.ಎಸ್. ಯಡಿಯೂರಪ್ಪ ಅವರು ನೀಡಿರುವ ಆದೇಶ ಪಾಲಿಸುತ್ತೇವೆ ಎಂದು ಹೇಳಿದರು. (ದಿಗ್ವಿಜಯ ನ್ಯೂಸ್)