More

    ವಾಲ್ಮೀಕಿ ಅಭಿವೃದ್ಧಿ ನಿಗಮದ ಕಥೆ ಬಿಚ್ಚಿಟ್ಟ ಮಾಜಿ ಸಿಎಂ ಎಚ್‌ಡಿಕೆ!

    ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ವರ್ಗಾವಣೆಗೆ ಸಂಬಂಧಿಸಿದಂತೆ ನಡೆದ ವ್ಯವಹಾರಗಳನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಇಂದು ಸುದ್ದಿಗಾರರ ಎದುರು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ.

    ಇದನ್ನೂ ಓದಿ: ಪಿಎಸ್ ಐ ಪಿಸ್ತೂಲ್ ಜತೆಗೆ ಪರಾರಿಯಾಗಿ ಮರವೇರಿದ್ದ ಕುಖ್ಯಾತ ಕಳ್ಳನ ಹರಸಾಹಸ ಮಾಡಿ ಕೆಳಗಿಳಿಸಿದ ಪೊಲೀಸರು !

    ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, “ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅರುಣ್ ಕುಮಾರ್ ಎಂಬ ಅಧಿಕಾರಿಯನ್ನು ನೇಮಕ ಮಾಡಲಾಗಿತ್ತು. ಅವರನ್ನು ಅಕ್ರಮವಾಗಿ ತೆಗೆದು ರಾಜಶೇಖರ್ ಅನ್ನುವ ಅಧಿಕಾರಿಯನ್ನು ನೇಮಕ ಮಾಡಿತು ಈ ಸರಕಾರ. ಅಲ್ಲಿ ವ್ಯವಹಾರ ನಡೆದಿದೆ ಅಂತ ಯಾರೋ ನ್ಯಾಯಾಲಯಕ್ಕ ಹೋದರು. ಕೋರ್ಟ್ ಛೀಮಾರಿ ಹಾಕಿದ ಮೇಲೆ ಮತ್ತೆ ರಾಜಶೇಖರ್ ಅವರನ್ನೇ ಮರು ನೇಮಕ ಮಾಡಲಾಯಿತು. ಇದು ಈ ಸರಕಾರದ ದಂಧೆಯ ಒಂದು ಸ್ಯಾಂಪಲ್” ಎಂದು ಹೇಳಿದರು.

    ಇದನ್ನೂ ಓದಿ: ಲೋಕಸಭೆ ಚುನಾವಣೆಯಲ್ಲಿ ಯುಪಿಎ ಮಿತ್ರಪಕ್ಷಗಳಿಗೆ ಬಹುಮತ ಖಚಿತ: ಸಿದ್ದರಾಮಯ್ಯ

    “ಹಿಂದೆ 1,500 ಕೋಟಿ ರೂ. ಹಗರಣ ನಡೆದಿತ್ತು. ಕಮೀಷನ್ ಪಡೆದು ವರ್ಕ್ ಆರ್ಡರ್ ಕೊಟ್ಟ ಕಥೆ ಗೊತ್ತಿದೆ. ಸಂಬಂಧಪಟ್ಟ ಇಲಾಖೆಯ ಅನುಮತಿ ಇಲ್ಲದೆ 1,500 ಕೋಟಿ ರೂಪಾಯಿ ವರ್ಕ್ ಆರ್ಡರ್ ನೀಡಿದರು. ಆಗ ಎಚ್.ಸಿ. ಮಹದೇವಪ್ಪ ಅವರು ಆ ಇಲಾಖೆಯ ಮಂತ್ರಿ ಆಗಿದ್ದರು. ಉಳಿದದ್ದು ಎಲ್ಲರಿಗೂ ತಿಳಿದಿದೆ. ಇವರು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಾರೆ” ಎಂದು ಕಾಂಗ್ರೆಸ್ ವಿರುದ್ಧ ಹರಿಹಾಯ್ದರು.

    ಟೋಲ್ ಪಾವತಿಸಿ ಎಂದು ಹೇಳಿದ್ದೇ ತಪ್ಪಾಯ್ತ?; ಸಿಬ್ಬಂದಿ ಕೂದಲನ್ನು ಎಳೆದಾಡಿದ ಮಹಿಳೆ; ವಿಡಿಯೋ ವೈರಲ್​​!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts