More

    ಒಂದು ಸರ್ಕಾರ, ಹತ್ತಾರು ಮುಖ್ಯಮಂತ್ರಿಗಳು; ರಾಜ್ಯ ಸರ್ಕಾರದ ವಿರುದ್ಧ ಎಚ್​ಡಿಕೆ ವಾಗ್ದಾಳಿ!

    ಬೆಂಗಳೂರು: ಕಾಂಗ್ರೆಸ್ ಸರ್ಕಾರದಲ್ಲಿ ಈಗಾಗಲೇ ಆಡಳಿತ ಹಳಿತಪ್ಪಿದೆ. ಒಂದು ಸರಕಾರ, ಹತ್ತಾರು ಮುಖ್ಯಮಂತ್ರಿಗಳು ಎಂದು ಹೇಳುವಂತ ಪರಿಸ್ಥಿತಿ ಸೃಷ್ಟಿಯಾಗಿದೆ. ಸಿದ್ದರಾಮಯ್ಯ (Siddaramaiah) ಅವರು ಒಬ್ಬರೇ ಮುಖ್ಯಮಂತ್ರಿ ಅಲ್ಲ. ಇಲಾಖೆಗೆ ಒಬ್ಬ ಸಿಎಂ ಇದ್ದಾರೆ. ಒಬ್ಬೊಬ್ಬರು ಕೂಡ ಸಿಎಂ ರೀತಿಯಲ್ಲೇ ಹೇಳಿಕೆ ನೀಡುತ್ತಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ (HD Kumarswamy) ತೀವ್ರ ವಾಗ್ದಾಳಿ ನಡೆಸಿದ್ದಾರೆ.

    ಇದನ್ನೂ ಓದಿ: ಮಹಾರಾಷ್ಟ್ರ ರಾಜಕೀಯ; ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪ್ರಮಾಣ ವಚನ ಸ್ವೀಕಾರ

    “ಇಲ್ಲಿ ಸಿದ್ದರಾಮಯ್ಯ ಒಂದು ಹೇಳುತ್ತಾರೆ, ಸತೀಶ್ ಜಾರಕಿಹೊಳಿ ಇನ್ನೊಂದು ಹೇಳುತ್ತಾರೆ. ಹಾಗಾದರೆ, ಇಲ್ಲಿ ಎಷ್ಟು ಜನ ಮುಖ್ಯಮಂತ್ರಿಗಳು ಇದ್ದಾರೆ? ಇದನ್ನು ಸರ್ಕಾರ ಅಂತ ಕರೆಯಬೇಕಾ? ಇಲ್ಲೇನಾದರೂ ಪಾರದರ್ಶಕತೆ ಅನ್ನೋದು ಇದೆಯಾ?” ಎಂದು ಹೇಳಿದರು.

    “ಬೆಂಗಳೂರಿನಲ್ಲಿ ನಡೆಯಲಿರುವ ಬಿಜೆಪಿ (BJP) ವಿರೋಧ ಪಕ್ಷಗಳ ಸಭೆಗೆ ನಮ್ಮ ಪಕ್ಷಕ್ಕೆ ಆಹ್ವಾನ ಕೊಟ್ಟಿಲ್ಲ, ನಮ್ಮನ್ನು ಯಾರೂ ಕರೆದಿಲ್ಲ. ಹಾಗಾಗಿ ಆ ಸಭೆಗೆ ನಾವು ಹೋಗುವುದಿಲ್ಲ. ನಮ್ಮದು ಸಣ್ಣ ಪಕ್ಷ, ಅದನ್ನು ಬೆಳೆಸುತ್ತೇವೆ. ಆ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ. ಅದಕ್ಕಾಗಿ ಸರಣಿ ಸಭೆಗಳನ್ನು ಹಮ್ಮಿಕೊಂಡಿದ್ದೇವೆ” ಎಂದು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts