More

    ಬಾಯಿ ತೆರೆದರೆ ಭಗವದ್ಗೀತೆ! ಕೊನೆಗೆ ಝಣ ಝಣ ಕಾಂಚಾಣ; ಸಿಎಂ ವಿರುದ್ಧ ಎಚ್​ಡಿಕೆ ವ್ಯಂಗ್ಯ

    ಬೆಂಗಳೂರು: ಸರಣಿ ಟ್ವೀಟ್​ ಮುಖೇನ ಸಿಎಂ ಸಿದ್ದರಾಮಯ್ಯ ವಿರುದ್ಧ ವ್ಯಂಗ್ಯವಾಡಿದ ಮಾಜಿ ಮುಖ್ಯಮಂತ್ರಿ, ಜೆಡಿಎಸ್​ ರಾಜ್ಯಾಧ್ಯಕ್ಷ ಎಚ್​.ಡಿ. ಕುಮಾರಸ್ವಾಮಿ, “ಅಬ್ಬಬ್ಬಾ..ಬಾಯಿ ತೆರೆದರೆ ಭಗವದ್ಗೀತೆ, ನಾಲಿಗೆ ಮೇಲೆ ನೈತಿಕತೆಯ ನಾಟ್ಯ, ಮಾತು ಮಾತಿನಲ್ಲೂ ಮೌಲ್ಯಗಳದ್ದೇ ಮಥನ! ಕೊನೆಗೆ, ಝಣ ಝಣ ಕಾಂಚಾಣ. ಇದೇ ನೋಡಿ ಬಹಿರಂಗವಾದ ಸಿಎಂ ಸಾಹೇಬರ ಸದ್ಯದ ಅಂತರಂಗ ಶುದ್ಧಿ! ಥೂ. ನಾಚಿಕೆಯಾಗಬೇಕು” ಎಂದರು.

    ಇದನ್ನೂ ಓದಿ: ನಿದ್ದೆ ಮಂಪರಿನಲ್ಲಿ ವಾಹನ ಚಾಲನೆ; ಮದುವೆ ಮುಗಿಸಿ ವಾಪಸ್​ ಆಗುತ್ತಿದ್ದವರು ಸೇರಿದ್ದು ಮಸಣಕ್ಕೆ

    “ಕರ್ನಾಟಕದ ಕಲೆಕ್ಷನ್‌ ಪ್ರಿನ್ಸ್‌ ವಿಡಿಯೋದಲ್ಲಿ ನುಸುಳಿದ್ದ ವಿವೇಕಾನಂದ, 48 ಗಂಟೆಗಳ ಒಳಗಾಗಿಯೇ ವರ್ಗದ ಪಟ್ಟಿಯಲ್ಲಿ ಒಳನುಸಳಿದ್ದು ಹೇಗೆ?
    ಓಹ್, ಒಂದು ಸರಕಾರ, ವಿಸ್ಮಯಗಳ ಆಗರ. ಡೂಪ್ಲಿಕೇಟ್‌ ಸಿಎಂ-DCM ಸಲಹೆ ಮೇರೆಗೆ ಕಾಸಿಗಾಗಿ ಹುದ್ದೆ ವಿಡಿಯೋಗೆ ಸಿಎಸ್​ಆರ್​ ಕಥೆ ಕಟ್ಟಿದ್ದ ಮುಖ್ಯಮಂತ್ರಿಗಳ ನೈತಿಕತೆಗೆ ನಯಗಾರಿಕೆಗೆ ನೂರೆಂಟು ನಮನ” ಎಂದು ಹೇಳಿದರು.

    “ವಿಡಿಯೋ ವಿವೇಕಾನಂದ, ಗುಪ್ತವಾರ್ತೆಯಿಂದ ಮೈಸೂರು ವಿ.ವಿ.ಪುರಂಗೆ ಪೋಸ್ಟಿಂಗ್‌ ಪಡೆದಿದ್ದು ಹೇಗೆ? ‘ಬರ್ಮುಡಾ ಟ್ರ್ಯಾಂಗಲ್’ ರಹಸ್ಯವನ್ನೇ ಮೀರಿಸಿದೆ ಈ ಚಿದಂಬರ ರಹಸ್ಯ. ಪ್ರಶ್ನೆ ಕೇಳುವುದು ನನ್ನ ವಿಧಿ, ಉತ್ತರ ಹೇಳಲೇಬೇಕು. ಅದು ನಿಮ್ಮ ದುರ್ವಿಧಿ. ಆನ್ಸರ್‌ ಮಾಡಿ ಸಿದ್ದರಾಮಯ್ಯನವರೇ?” ಎಂದು ಪ್ರಶ್ನಿಸಿದರು.

    ಇದನ್ನೂ ಓದಿ:  success story; ಒಂದು ಕಾಲದಲ್ಲಿ ವಾಚ್‌ಮ್ಯಾನ್ ಈಗ ಖ್ಯಾತ ಬಾಲಿವುಡ್ ನಟ

    “ಕುಮಾರಸ್ವಾಮಿಗೆ ಹೊಟ್ಟೆಕಿಚ್ಚು. ದ್ವೇಷದಿಂದ ಮಗನ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದಲ್ಲವೇ ನೀವು ಹೇಳಿದ್ದು. ಹಾಗಾದರೆ 71 ಪೊಲೀಸ್‌ ಇನಸ್ಪೆಕ್ಟರ್‌ಗಳ ವರ್ಗದ ಈ ಯಾದಿಯ 4ನೇ ಹೆಸರಿನಲ್ಲೇ ಅಡಗಿದೆಯಲ್ಲಾ ನಿಮ್ಮ ‘ಸುಲಿಗೆಪುತ್ರ’ನ ಕೆಚ್ಚು. ಕ್ಷೇತ್ರತ್ಯಾಗದ ತ್ಯಾಗಮಯಿ, ಈಗ ವರುಣಾಕ್ಕೆ ವಕ್ಕರಿಸಿದ ಕೆಡಿಪಿ ಕಲಿ. ಏನಂತೀರಿ?” ಎಂದರು.

    “ಈ ಪಾಪದ ಕಾಸಿನ ಕಮಟು ದುರ್ನಾತ ಅಸಹ್ಯಕರ. ‘ವರ್ಗಾವರ್ಗಿ ಬಜೆಟ್‌’ನಲ್ಲಿ ನಿಮ್ಮ ಪಟಾಲಂದು ಶಿಖರಸಾಧನೆ. 6 ತಿಂಗಳ ಭರ್ಜರಿ ಅತೀಂದ್ರೀಯ ಅಟ್ಟಹಾಸ. ‘ಕಾಸಿಗಾಗಿ ಹುದ್ದೆ ಮತ್ತು ಕಾಂಗ್ರೆಸ್‌ ಹುಂಡಿ ಎಂಬ ಸಿನಿಮಾವನ್ನೂ ಮಾಡಿ, ಕೆಡಿಪಿ ಕಲಿಯೇ ನಾಯಕ, ಟೆಂಪರರಿ ಸಿಎಂ-TCM ನಿರ್ಮಾಪಕ, ಡೂಪ್ಲಿಕೇಟ್‌ ಸಿಎಂ-DCM ನಿರ್ದೇಶಕ.. ಹೇಗಿದೆ?” ಎಂದು ಲೇವಡಿ ಮಾಡಿದರು.

    ಇದನ್ನೂ ಓದಿ: ನೂರಾರು ಉದ್ಯೋಗಿಗಳನ್ನು ವಜಾ ಮಾಡಲು ಹೊರಟ ಅಮೆಜಾನ್; ಇದರ ಎಫೆಕ್ಟ್ ಭಾರತದ ಮೇಲೂ ಬೀರುತ್ತಾ?

    “ಸತ್ಯ ಹೇಳಿದರೆ ಗುಂಪುಗುಂಪಾಗಿ ಮೇಲೆ ಬೀಳುತ್ತೀರಿ. ಬೆದರಿಸುತ್ತೀರಿ. ಕುಮಾರಸ್ವಾಮಿಯದು ಹಿಟ್‌ ಅಂಡ್​ ರನ್‌ ಅಂತೀರಿ, ಸುಳ್ಳು ಎನ್ನುತ್ತೀರಿ. ಕಣ್ಮುಂದೆ ವಿಡಿಯೋ ಸಾಕ್ಷ್ಯವಿದೆ. ರಾಜ್ಯದ ಜನ ನೋಡಿದ್ದಾರೆ. ಪಲಾಯನಕ್ಕೆ ಅವಕಾಶವೇ ಇಲ್ಲ. ನಿಮ್ಮ ಕೌರವ ದುರ್ನೀತಿ ನನ್ನ ಮುಂದೆ ನಡೆಯಲ್ಲ. ನಾನು ಒಬ್ಬನೇ ಒಬ್ಬ, ಅಂಜಿಕೆ ನನ್ನ ರಕ್ತದಲ್ಲೇ ಇಲ್ಲ” ಎಂದ ಎಚ್​ಡಿಕೆ ಸರಣಿ ಟ್ವೀಟ್​ ಮಾಡಿ ಸಿಎಂ ವಿರುದ್ಧ ವ್ಯಂಗ್ಯವಾಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts