More

    ಅಕ್ರಮ ಮದ್ಯ ಮಾರಾಟದಂಧೆಗೆ ಕಡಿವಾಣ ಹಾಕಲು ಆಗದಿದ್ದರೆ ಕೆಲಸ ಬಿಟ್ಟು ಮನೆಗೆ ಹೋಗಿ ಎಂದು ಗುಡುಗಿದ ಎಚ್.ಡಿ.ರೇವಣ್ಣ

    ಹಾಸನ: ಗ್ರಾಮೀಣ ಪ್ರದೇಶದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುವವರನ್ನು ನಾನೇ ಹಿಡಿದುಕೊಡುತ್ತೇನೆ. ಈ ದಂಧೆಗೆ ನಿಮ್ಮಿಂದ ಕಡಿವಾಣ ಹಾಕಲು ಆಗದಿದ್ದರೆ ಕೆಲಸ ಬಿಟ್ಟು ಮನೆಗೆ ಹೋಗಿ ಎಂದು ಹೊಳೆನರಸೀಪುರ ಕ್ಷೇತ್ರದ ಶಾಸಕ ಎಚ್.ಡಿ.ರೇವಣ್ಣ ಅಬಕಾರಿ ಇಲಾಖೆ ಅಧಿಕಾರಿಗಳ ವಿರುದ್ಧ ಗುಡುಗಿದರು.

    ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣದಲ್ಲಿ ಗುರುವಾರ ಸಂಜೆ ಹಾಸನ ತಾಲೂಕು ಪಂಚಾಯಿತಿ ತ್ರೈಮಾಸಿಕ ಪ್ರಗತಿ ಪರೀಶಿಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಹಳ್ಳಿಗಳಲ್ಲಿನ ಪೆಟ್ಟಿಗೆ ಅಂಗಡಿಗಳಲ್ಲಿ ಟೀ, ಕಾಫಿಗಿಂತಲೂ ಅಕ್ರಮ ಮದ್ಯ ಮಾರಾಟವೇ ಹೆಚ್ಚಾಗಿದೆ. ನಕಲಿ ಮದ್ಯ ಸೇವನೆಯಿಂದ ಜನರ ಆರೋಗ್ಯವೂ ಹಾಳಾಗುತ್ತಿದೆ. ಹಾಸನ ತಾಲೂಕು ಒಂದರಲ್ಲಿಯೇ ಲಕ್ಷಾಂತರ ರೂಪಾಯಿ ಅಬಕಾರಿಇಲಾಖೆಗೆ ನಷ್ಟ ಉಂಟಾಗಿದೆ. ಇದಕ್ಕೆಲ್ಲ ಯಾರು ಹೊಣೆ ಎಂದು ಗರಂ ಆದರು.

    ಅಬಕಾರಿ ಇಲಾಖೆ ಅಧಿಕಾರಿಗಳು ತಕ್ಷಣವೇ ಕಾರ್ಯಪ್ರವೃತ್ತರಾಗಿ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಬೇಕು. ಆಗದವರು ಕೆಲಸ ಬಿಟ್ಟು ಹೋಗಬಹುದು ಎಂದು ಎಚ್ಚರಿಸಿದರು. ಗ್ರಾಮ ಪಂಚಾಯಿತಿಗೆ ನೀಡಿರುವ 14 ಮತ್ತು 15ನೇ ಹಣಕಾಸು ಯೋಜನೆ ಅನುದಾನವನ್ನು ಫೆ. 28ರ ಒಳಗೆ ಖರ್ಚು ಮಾಡಿ ಶೇ. 100 ಪ್ರಗತಿ ಸಾಧಿಸಬೇಕು. ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದಲ್ಲಿ ಪ್ರಸ್ತಾವನೆ ಸಲ್ಲಿಸಿ ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು.

    ಈಗಾಲೇ ಕಾರ್ಯಾರಂಭಿಸಿರುವ ಭತ್ತ, ರಾಗಿ ಖರೀದಿ ಕೇಂದ್ರಗಳಲ್ಲಿ ರೈತರಿಗೆ ಮೋಸ ಆಗದಂತೆ ಎಚ್ಚರಿಕೆ ವಹಿಸಬೇಕು ಎಂದು ಕೃಷಿ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts