More

    ಪಟಾಕಿ ಸಿಡಿಸಿ ಸಂಭ್ರಮಿಸಿದ ಎಚ್.ಡಿ.ರೇವಣ್ಣ ಅಭಿಮಾನಿಗಳು

    ಹೊಳೆನರಸೀಪುರ: ಮಾಜಿ ಸಚಿವ ಎಚ್.ಡಿ.ರೇವಣ್ಣಗೆ ಜಾಮೀನು ಮಂಜೂರು ಹಿನ್ನೆಲೆಯಲ್ಲಿ ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಾಚರಿಸಿದರು.


    ಪಟ್ಟಣದ ಜಯಚಾಮರಾಜೇಂದ್ರ ವೃತ್ತದಲ್ಲಿ ಪಟಾಕಿ ಸಿಡಿಸಿದ ಎಚ್.ಡಿ.ರೇವಣ್ಣ ಅಭಿಮಾನಿಗಳು ಹಾಗೂ ಜೆಡಿಎಸ್ ಕಾರ್ಯಕರ್ತರು ಜೈಕಾರ ಹಾಕಿ ಸಂಭ್ರಮಪಟ್ಟರು.


    ನಾವಿಕನಿಲ್ಲದ ದೋಣಿಯಂತಾಗಿದ್ದ ಶಾಸಕರ ಮನೆ ಮುಂದೆ ನೀರವ ಮೌನ ಮನೆ ಮಾಡಿತ್ತು. ಜಾಮೀನು ಮಂಜೂರಾದ ತಕ್ಷಣ ಕಾದು ಕುಳಿತಿದ್ದ ಅಭಿಮಾನಿಗಳು ಎಚ್.ಡಿ.ದೇವೇಗೌಡ, ಎಚ್.ಡಿ.ರೇವಣ್ಣ ಅವರಿಗೆ ಜೈಕಾರ ಕೂಗಿದರು.


    ಪಟಾಕಿ ಸಿಡಿಸುತ್ತಿದ್ದ ಸ್ಥಳಕ್ಕೆ ಆಗಮಿಸಿದ ಡಿವೈಎಸ್‌ಪಿ ಅಶೋಕ್ ಹಾಗೂ ಹೊಳೆನರಸೀಪುರ ನಗರ ಪೊಲೀಸ್ ಠಾಣೆ ಸಬ್‌ಇನ್ಸ್‌ಪೆಕ್ಟರ್ ಅಜಯ್‌ಕುಮಾರ್ ವೃತ್ತದಲ್ಲಿ ಸಂಭ್ರಮಾಚರಣೆಗೆ ತೊಡಗಿದ್ದ ಜನರನ್ನು ನೀತಿ ಸಂಹಿತೆ ಹಿನ್ನೆಲೆಯಲ್ಲಿ ಪಟಾಕಿ ಒಡೆಯುವುದು ನಿಷೇಧ ಇರುವುದರಿಂದ ಗುಂಪು ಸೇರದಂತೆ ಜಮಾಯಿಸಿದ್ದ ಕಾರ್ಯಕರ್ತರನ್ನು ಚದುರಿಸಿದರು. ಬಳಿಕ ವೃತ್ತದಲ್ಲಿ ಪೊಲೀಸ್ ನಾಕಾಬಂಧಿ ಹಾಕಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts