ಆಪರೇಷನ್​ ಕಮಲ ತನಿಖೆ ವಿಚಾರ: ಹುಬ್ಬಳ್ಳಿಯಲ್ಲಿ ಹೊಸ ಬಾಂಬ್​ ಸಿಡಿಸಿದ ಮಾಜಿ ಸಚಿವ ಎಚ್​.ಡಿ. ರೇವಣ್ಣ

Latest News

ಶಾಸಕ ತನ್ವೀರ್​ ಸೇಠ್​ಗೆ ಭದ್ರತೆ ಹೆಚ್ಚಳ ಮಾಡಿದ ಸರ್ಕಾರ: 24 ತಾಸು 3 ಪಾಳಿಗಳಲ್ಲಿ ಗನ್​ಮ್ಯಾನ್​ ಭದ್ರತೆ

ಮೈಸೂರು: ತೀವ್ರ ಹಲ್ಲೆ ಹಿನ್ನೆಲೆಯಲ್ಲಿ ಶಾಸಕ ತನ್ವೀರ್​ ಸೇಠ್​ಗೆ ಒದಗಿಸಿದ್ದ ಭದ್ರತೆಯನ್ನು ಮೂರುಪಟ್ಟು ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ದಿನದ 24 ತಾಸು...

ಸಿನಿಮಾದಂತೆ ರಾಜಕೀಯದಲ್ಲೂ ಮೋಡಿ ಮಾಡಲು ರಜಿನಿ-ಕಮಲ್​ ಸಜ್ಜು: ತ.ನಾಡು ಪಾಲಿಟಿಕ್ಸ್​ ಬಗ್ಗೆ ಮಹತ್ತರ ಸುಳಿವು ನೀಡಿದ ನಟದ್ವಯರು!

ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಭಾರಿ ಬದಲಾವಣೆಯಾಗುವ ಮುನ್ಸೂಚನೆ ಕಾಣುತ್ತಿದೆ. ಅದಕ್ಕೆ ಕಾರಣ ನಟನೆಯಿಂದ ರಾಜಕೀಯಕ್ಕೂ ಹೊರಳಿರುವ ರಜನಿಕಾಂತ್​ ಮತ್ತು ಕಮಲ್​ ಹಾಸನ್​ ಎಂಬುದೇ...

ಕೆಪಿಎಲ್​ ಮ್ಯಾಚ್​ ಫಿಕ್ಸಿಂಗ್ ಹಗರಣ: ಇಂದು 7 ತಂಡಗಳ ಮಾಲೀಕರ ವಿಚಾರಣೆ ನಡೆಸಲಿರುವ ಸಿಸಿಬಿ

ಬೆಂಗಳೂರು: ಕರ್ನಾಟಕ ಪ್ರಿಮೀಯರ್​ ಲೀಗ್​ ಕ್ರಿಕೆಟ್​ ಮ್ಯಾಚ್​ ಫಿಕ್ಸಿಂಗ್​ ಹಗರಣದ ವಿಚಾರಣೆಗೆ 7 ತಂಡಗಳ ಮಾಲೀಕರು ಇಂದು ಹಾಜರಾಗಲಿದ್ದಾರೆ. ಕೆಪಿಎಲ್​ನ 7 ತಂಡಗಳ ಮಾಲೀಕರು...

ವಿವಸ್ತ್ರಗೊಳಿಸಿ ಕ್ರಿಶ್ಚಿಯನ್​ ದಂಪತಿ ಮೇಲೆ ದೌರ್ಜನ್ಯ: ವೈರಲ್​ ಫೋಟೋ ಹಿಂದಿನ ಅಸಲಿಯತ್ತು ಫ್ಯಾಕ್ಟ್​ಚೆಕ್​ನಲ್ಲಿ ಬಹಿರಂಗ!

ನವದೆಹಲಿ: ಸಾರ್ವಜನಿಕ ಸ್ಥಳವೊಂದರಲ್ಲಿ ದಂಪತಿಯು ಮಗುವನ್ನು ಹಿಡಿದುಕೊಂಡು ಬೆತ್ತಲೆಯಾಗಿ ನಿಂತಿರುವ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಕೆಲ ದಿನಗಳಿಂದ ವೈರಲ್​ ಆಗಿದೆ. ಇದರ ಬಗ್ಗೆ...

ಉಪ ಚುನಾವಣೆ ರಣತಂತ್ರ ರೂಪಿಸಲು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿಂದು ಬಿಜೆಪಿ ಮಹತ್ವದ ಸಭೆ

ಬೆಂಗಳೂರು: ಉಪ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಗೆಲ್ಲಲು ಅನುಸರಿಸಬೇಕಾದ ತಂತ್ರಗಳ ಬಗ್ಗೆ ಬಿಜೆಪಿ ಕಚೇರಿಯಲ್ಲಿ ಇಂದು ಮಹತ್ವದ ಸಭೆ ನಡೆಯಲಿದೆ. ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರ...

ಹುಬ್ಬಳ್ಳಿ: ಆಪರೇಷನ್​ ಕಮಲದ ಬಗ್ಗೆ ತನಿಖೆ ಮಾಡಬೇಡಿ ಎಂದು ಬಸವರಾಜ್​ ಬೊಮ್ಮಾಯಿ ಅವರು ಮನವಿ ಮಾಡಿದರು. ಹೀಗಾಗಿ ನಾವು ತನಿಖೆ ಮಾಡಲಿಲ್ಲ ಎಂದು ಮಾಜಿ ಸಚಿವ ಎಚ್​.ಡಿ. ರೇವಣ್ಣ ಹೊಸ ಬಾಂಬ್​ ಸಿಡಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಫೋನ್ ಕದ್ದಾಲಿಕೆ ಪ್ರಕರಣದಲ್ಲಿ ಸಿಬಿಐ ತನಿಖೆ ಬಗ್ಗೆ ನಾವು ತಲೆ ಕೆಡಿಸಿಕೊಂಡಿಲ್ಲ. ಯಾವುದೇ ತನಿಖೆಗೂ ನಾವು ತಲೆಕೆಡಿಸಿಕೊಳ್ಳಲ್ಲ. ಆಪರೇಷನ್ ಕಮಲ ವಿಚಾರ ಕುರಿತಂತೆ ಬಸವರಾಜ ಬೊಮ್ಮಾಯಿ ಸೇರಿ ಮೂರ್ನಾಲ್ಕು ಜನ ತನಿಖೆ ಮಾಡಬೇಡಿ‌ ಎಂದು ಮನವಿ ಮಾಡಿದ್ದರು. ಹೀಗಾಗಿ ನಾವು ಅದರ ತನಿಖೆ ಮಾಡಲಿಲ್ಲ ಎಂದು ಹೇಳಿದರು.

ರಾಜ್ಯದಲ್ಲಿ ಕಳೆದ ಇಪ್ಪತ್ತು ದಿನಗಳಿಂದ ಕಂಡರಿಯದಂತ ಪ್ರವಾಹ ಉಂಟಾಗಿದೆ. ಲಕ್ಷಾಂತರ ಕುಟುಂಬಗಳು ಬೀದಿಗೆ ಬಂದಿವೆ. ನಾವು ಯಾವುದೇ ದ್ವೇಷದ ರಾಜಕೀಯ ಮಾಡುವುದಿಲ್ಲ. ಉತ್ತರ ಕರ್ನಾಟಕ ಭಾಗದ ಕುಟುಂಬಗಳು ಸಂಕಷ್ಟ ಅನುಭವಿಸುತ್ತಿವೆ. ಅವರ ಸಂಕಷ್ಟಕ್ಕೆ ಸ್ಪಂದಿಸುವ ಕೆಲಸ ಮಾಡಬೇಕು. ರಾಜ್ಯ ಸರ್ಕಾರ ಈ ಬಗ್ಗೆ ಗಮನ ಹರಿಸಬೇಕು. ಇಷ್ಟೆಲ್ಲ ಪ್ರವಾಹ ಸಂಭವಿಸಿದರೂ ಕೇಂದ್ರದಿಂದ ಈವರೆಗೂ ಬಿಡಿಗಾಸು ಬಿಡುಗಡೆ ಮಾಡಿಲ್ಲ. ಅನೇಕ ಸಂಘ-ಸಂಸ್ಥೆಗಳು ನೆರೆ ಪರಿಹಾರ ಒದಗಿಸಿವೆ. ರಾಜ್ಯ ಸರ್ಕಾರ ರಾಜ್ಯದಲ್ಲಿ ಈವರೆಗೂ ಯಾವುದೇ ಅಭಿವೃದ್ದಿ ಕಾಮಗಾರಿಗಳನ್ನು ಕೈಗೆತ್ತಿಕೊಂಡಿಲ್ಲ. ಸಿಎಂ ಯಡಿಯೂರಪ್ಪ ಅವರು ಉತ್ತರ ಕರ್ನಾಟಕದಲ್ಲಿ ಏಕಾಂಗಿಯಾಗಿ ಪ್ರವಾಸ ಮಾಡಿದರು. ಅದೇನು ಮಾಡಿದರೋ ನನಗೆ ಗೊತ್ತಿಲ್ಲ. ಕೇಂದ್ರದಿಂದ ನೆರೆ ಪರಿಹಾರ ಮಾತ್ರ ಬಿಡುಗಡೆಯಾಗಲಿಲ್ಲ. ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿಯವರದ್ದೇ ಸರ್ಕಾರವಿದೆ. ರಾಜ್ಯದಲ್ಲಿ ಪ್ರವಾಹದಿಂದ ಬೀದಿಗೆ ಬಿದ್ದಿರುವ ಬಡಜನರಿಗೆ ಮೊದಲು ಸಹಾಯ ಒದಗಿಸಬೇಕು ಎಂದು ಆಗ್ರಹಿಸಿದರು.

ಜೆಡಿಎಸ್ ಪಕ್ಷವನ್ನು ಮುಳುಗಿಸುವ ಪ್ರಯತ್ನ ನಡೆದಿದೆ. ಆದರೆ, ದಡ ಸೇರಲು ನಾವು ಯಾವ ತಯಾರಿ ಬೇಕೋ ಅದನ್ನು ಮಾಡುತ್ತಿದ್ದೇವೆ. ಕುಮಾರಸ್ವಾಮಿ ಅವರನ್ನು ಕೇವಲ ಮಂಡ್ಯ, ಹಾಸನ ಹಾಗೂ ತುಮಕೂರು ಜಿಲ್ಲೆಗಷ್ಟೇ ಸೀಮಿತ ಎಂದು ಹೇಳುತ್ತಿದ್ದರು. ಆದರೆ, ಯಡಿಯೂರಪ್ಪ ಈಗೇನು ಮಾಡಿದ್ದಾರೆ? ಕೇವಲ ಇಪ್ಪತ್ತು ದಿನಗಳಲ್ಲಿ ಯಡಿಯೂರಪ್ಪ ಅವರು ಶಿಕಾರಿಪುರಕ್ಕೆ 2 ಸಾವಿರ ಕೋಟಿ ಬಿಡುಗಡೆ ಮಾಡಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಹಣ ಬಿಡುಗಡೆ ಕುರಿತ ದಾಖಲೆ ಬಿಡುಗಡೆ ಮಾಡಿ ತಿರುಗೇಟು ನೀಡಿದರು. (ದಿಗ್ವಿಜಯ ನ್ಯೂಸ್​)

- Advertisement -

Stay connected

278,614FansLike
572FollowersFollow
610,000SubscribersSubscribe

ವಿಡಿಯೋ ನ್ಯೂಸ್

VIDEO: ಹೆಬ್ಬಾವು-ಚಿರತೆ ನಡುವಿನ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...

VIDEO| ಜೆಎನ್​ಯು ವಿದ್ಯಾರ್ಥಿಗಳ...

ನವದೆಹಲಿ: ಪಾಕಿಸ್ತಾನದ ಲಾಹೋರ್​​ನಲ್ಲಿ ನಡೆದಿದ್ದ ಫೈಜ್​ ಸಾಹಿತ್ಯೋತ್ಸವದಲ್ಲಿ ವಿದ್ಯಾರ್ಥಿಗಳು ಕೂಗಿದ್ದ "ಆಜಾದಿ" ಘೋಷಣೆಯ ವಿಡಿಯೋವನ್ನು ದೆಹಲಿಯ ಜವಹರ್​ಲಾಲ್​ ನೆಹರು ವಿಶ್ವವಿದ್ಯಾಲಯ(ಜೆಎನ್​ಯು)ದ ವಿದ್ಯಾರ್ಥಿಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಶೇರ್​ ಮಾಡಲಾಗಿದೆ. "ಜೆಎನ್​ಯು...

VIDEO| ಮೀಮ್ಸ್​ ವಿಡಿಯೋ...

ಬೆಳಗಾವಿ: ಗೋಕಾಕ್​ ಕ್ಷೇತ್ರದ ಉಪಚುನಾವಣೆಯ ಕದನ ತೀವ್ರ ಕುತೂಹಲ ಮೂಡಿಸಿದೆ. ಸಹೋದರರ ನಡುವಿನ ಜಿದ್ದಾಜಿದ್ದಿಯೇ ಅದಕ್ಕೆ ನೇರ ಕಾರಣವಾಗಿದೆ. ಕಾಂಗ್ರೆಸ್​ಗೆ ಗುಡ್​ಬೈ ಹೇಳಿ ಬಿಜೆಪಿ ಸೇರಿಕೊಂಡಿರುವ ಸೋದರ ರಮೇಶ್​ ಜಾರಕಿ...

VIDEO| ಶಾಸಕ ತನ್ವೀರ್​...

ಮೈಸೂರು: ಕಾಂಗ್ರೆಸ್​ ಶಾಸಕ ಹಾಗೂ ಮಾಜಿ ಸಚಿವ ತನ್ವೀರ್‌ ಸೇಠ್ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದ ಪೊಲೀಸ್​ ವಿಚಾರಣೆಯ ವೇಳೆ ಸ್ಪೋಟಕ ಮಾಹಿತಿಗಳು ಬಹಿರಂಗವಾಗುತ್ತಿದೆ. ತನ್ವೀರ್‌ ಸೇಠ್ ಹತ್ಯೆಗೆ ಈ ಹಿಂದೆ...

VIDEO: ಗೋಕಾಕ್​ ಕ್ಷೇತ್ರದಲ್ಲಿ...

ಗೋಕಾಕ್​: ಡಿಸೆಂಬರ್​ 5ಕ್ಕೆ ಉಪಚುನಾವಣೆ ನಡೆಯಲಿದ್ದು ಮೂರು ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಬಹುತೇಕ ಅನರ್ಹರೆಲ್ಲ ತಮ್ಮ ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ. ಆದರೆ ಇವತ್ತು ಕುತೂಹಲ ಮೂಡಿಸಿದ್ದು ಗೋಕಾಕ್​ ಕ್ಷೇತ್ರ. ಇಲ್ಲಿ ಬಿಜೆಪಿಯಿಂದ ರಮೇಶ್​...

ಕೇಂದ್ರ ಪರಿಸರ ಸಚಿವ...

ಬೆಂಗಳೂರು: ದೆಹಲಿಯಲ್ಲಿ ಮಿತಿಮೀರಿದ ವಾಯುಮಾಲಿನ್ಯ ನಿಯಂತ್ರಣಕ್ಕೆ ನಾನಾ ಕ್ರಮಗಳನ್ನು ಸರ್ಕಾರ ತೆಗೆದುಕೊಂಡಿದೆ. ಆದರೂ, ವೈಯಕ್ತಿಕವಾಗಿ ಏನು ಮಾಡಬಹುದು ಎಂಬುದನ್ನು ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ ಜಾವಡೇಕರ್ ತೋರಿಸಿದ್ದಾರೆ. ಅವರು...

ಜಗತ್ತಿನ ಮೊದಲ ಫೋಲ್ಡೆಬಲ್​...

ಬೀಜಿಂಗ್​: ಕಂಪ್ಯೂಟರ್ ಜಗತ್ತಿನಲ್ಲಿ ನಿತ್ಯವೂ ಹೊಸ ಹೊಸ ಉತ್ಪನ್ನಗಳು ಗ್ರಾಹಕರಿಗೆ ಪರಿಚಯಿಸಲ್ಪಡುತ್ತಲೇ ಇವೆ. ವರ್ಷದ ಹಿಂದೆ ಖರೀದಿಸಿದ ಉತ್ಪನ್ನ ಇಂದಿಗೆ ಔಟ್​ಡೇಟೆಡ್​ ಎನ್ನುವ ಮಟ್ಟಿಗೆ ಇದೆ ಈ ಬದಲಾವಣೆಯ ವೇಗ....

VIDEO| ಲೋಕಸಭಾಧ್ಯಕ್ಷ ಓಂ...

ಜೈಪುರ: ಬಾಲಿವುಡ್​ ನಟಿ ರಾಣಿ ಮುಖರ್ಜಿ ಅವರ ಮುಂದಿನ ಚಿತ್ರ ಮರ್ದಾನಿ-2ಗೆ ಬಿಡುಗಡೆ ಮುನ್ನವೇ ವಿರೋಧದ ಕೂಗು ಕೇಳಿಬಂದಿದೆ. ಚಿತ್ರದ ವಿರುದ್ಧ ರಾಜಸ್ಥಾನದ ಕೋಟಾ ನಗರದ ನಿವಾಸಿಗಳು ಲೋಕಸಭಾ ಸ್ಪೀಕರ್​...

VIDEO| ಭಾರಿ ಭದ್ರತೆಯೊಂದಿಗೆ...

ಶಬರಿಮಲೆ: ವಿವಾದದ ನಡುವೆಯೇ ಭಾರಿ ಭದ್ರತೆಯೊಂದಿಗೆ ಅಯ್ಯಪ್ಪ ದೇವಸ್ಥಾನದ ಮುಖ್ಯ ದ್ವಾರವನ್ನು ಶನಿವಾರ ಸಂಜೆ ತೆರೆಯಲಾಯಿತು. ಸುದೀರ್ಘ ಎರಡು ತಿಂಗಳ ಮಂಡಲ-ಮಕರವಿಳಕ್ಕು ಪೂಜೆಗಾಗಿ ದೇವಸ್ಥಾನ ಬಾಗಿಲನ್ನು ಇಂದು ತೆರೆಯಲಾಗಿದೆ. ದೇವಸ್ಥಾನದ ಪ್ರಧಾನ...

VIDEO| ಹಿರಿಯ ಗಾಯಕಿ...

ಬೆಂಗಳೂರು: ಹಿರಿಯ ಗಾಯಕಿ ಲತಾ ಮಂಗೇಶ್ಕರ್ (90) ಅನಾರೋಗ್ಯದಿಂದ ಬಳಲುತ್ತಿದ್ದು ಕಳೆದ ಆರು ದಿನಗಳಿಂದ ಮುಂಬೈನಲ್ಲಿರುವ ಬ್ರೀಚ್​ ಕ್ಯಾಂಡಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ನಡುವೆ ಕಳೆದೆರಡು ದಿನಗಳಿಂದ...