

ಬೆಂಗಳೂರು: ಲೈಂಗಿಕ ದೌರ್ಜನ್ಯ ಕೇಸ್ನಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮಧ್ಯಂತರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದ ಬೆನ್ನೆಲ್ಲೇ ಹೆಚ್.ಡಿ. ರೇವಣ್ಣ ಅವರನ್ನು ವಿಶೇಷ ತನಿಖಾ ದಳದ ಅಧಿಕಾರಿಗಳು ಶನಿವಾರ ಸಂಜೆ ಬಂಧಿಸಿದರು.
ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಅವರ ನಿವಾಸದಿಂದ ರೇವಣ್ಣ ಅವರನ್ನು ವಶಕ್ಕೆ ಪಡೆದ ಅಧಿಕಾರಿಗಳು ನೇರವಾಗಿ ಎಸ್ಐಟಿ ಕಚೇರಿಗೆ ಕರೆದುಕೊಂಡು ಹೋಗಿದ್ದಾರೆ ಎನ್ನಲಾಗಿದೆ.
ಒಂದು ಲೈಂಗಿಕ ದೌರ್ಜನ್ಯ ಕೇಸ್, ಮತ್ತೊಂದು ಕಿಡ್ನಾಪ್ ಆರೋಪ. ಹೀಗೆ ಎರಡು ಕೇಸ್‌ಗಳಿಂದ ರೇವಣ್ಣ ಇಕ್ಕಟ್ಟಿಗೆ ಸಿಲುಕಿದ್ದಾರೆ. ಯಾವುದೇ ಕ್ಷಣದಲ್ಲಿ ಬಂಧನವಾದ್ರೂ ಅಚ್ಚರಿ ಇಲ್ಲ.