More

    ರೇವಣ್ಣ ನಮ್ಮ ಪಕ್ಷದ ಜ್ಯೋತಿಷಿ… ಎನ್ನುತ್ತಲೇ ಇಂದು ನಡೆಯಬೇಕಿದ್ದ ಬಹುನಿರೀಕ್ಷಿತ ಕಾರ್ಯವನ್ನು ಮುಂದೂಡಿದ ಎಚ್​ಡಿಕೆ!

    ಮೈಸೂರು: ರೇವಣ್ಣ ನಮ್ಮ ಪಕ್ಷದ ಜ್ಯೋತಿಷಿ, ಅವರ ಮಾತಿನಂತೆ ಇಂದು ಜೆಡಿಎಸ್​ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡ್ತಿಲ್ಲ ಎಂದು ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಹೇಳಿದರು.

    “ನವ ಕರ್ನಾಟಕ ನವ ನಿರ್ಮಾಣಕ್ಕಾಗಿ’ ಜೆಡಿಎಸ್​ ಆಯೋಜಿಸಿರುವ ಪಂಚರತ್ನ ರಥಯಾತ್ರೆ ಬೃಹತ್​ ಸಮಾವೇಶ ಕೋಲಾರ ಮುಳಬಾಗಿಲಿನಲ್ಲಿ ಇಂದು(ಶುಕ್ರವಾರ) ಮಧ್ಯಾಹ್ನ ಆರಂಭವಾಗಲಿದೆ. ಇದಕ್ಕೂ ಮುನ್ನ ಬೆಳಗ್ಗೆಯೇ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಎಚ್​ಡಿಕೆ, ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಎಚ್.ಡಿ.ರೇವಣ್ಣ ತಕರಾರು ತೆಗೆದಿದ್ದಾರೆ ಎಂದರು.

    ಮುಂಬರುವ ವಿಧಾನಸಭಾ ಚುನಾವಣೆಗೆ ಜೆಡಿಎಸ್​ನ 100 ಅಭ್ಯರ್ಥಿಗಳ ಪಟ್ಟಿ ಈಗಾಗಲೇ ಸಿದ್ಧವಾಗಿದೆ. ಇಂದೇ ಪಟ್ಟಿ ಬಿಡುಗಡೆ ಮಾಡಲು ಸಿದ್ಧತೆ ನಡೆದಿತ್ತು. ಆದರೆ ಇದಕ್ಕೆ ರೇವಣ್ಣ ತಕರಾರು ತೆಗೆದಿದ್ದಾರೆ. ಅವರು ನಮ್ಮ ಪಕ್ಷದ ಜ್ಯೋತಿಷಿ. ಇಂದು ಸಮಯ ಪ್ರಸಕ್ತವಾಗಿಲ್ಲ ಎಂದು ತಕರಾರು ತೆಗೆದಿದ್ದಾರೆ. ಹಾಗಾಗಿ ಮುಂದಿನ ದಿನಗಳಲ್ಲಿ ಸೂಕ್ತ ಸಮಯ ನೋಡಿಕೊಂಡು ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಎಚ್‌.ಡಿ‌ ದೇವೇಗೌಡರ ನೇತೃತ್ವದಲ್ಲಿ ಬಿಡುಗಡೆ ಮಾಡುತ್ತೇವೆ ಎಂದರು.

    ಮಳೆಯ ಸಮಸ್ಯೆಯಿಂದ ಪಂಚರತ್ನ ಯಾತ್ರೆಯನ್ನು ಮುಂದೂಡಲಾಗಿತ್ತು. ಇನ್ಮುಂದೆ ಯಾವುದೇ ಸಮಸ್ಯೆಯಾಗದಿರಲಿ ಎಂದು ನಂಜುಡೇಶ್ವರ ಹಾಗೂ ಚಾಮುಂಡಿ ತಾಯಿಯ ಆಶೀರ್ವಾದ ಪಡೆದಿದ್ದೇನೆ. ಇಂದಿನಿಂದ 36 ದಿನಗಳ ಕಾಲ‌ ಮೊದಲ‌ ಹಂತದ ಯಾತ್ರೆ ಆರಂಭವಾಗಲಿದೆ. ಚಾಮುಂಡೇಶ್ವರಿ ಕ್ಷೇತ್ರದಲ್ಲೇ ಪಂಚರತ್ನ ಸಮಾರೋಪ ಸಮಾರಂಭ ಮಾಡುತ್ತೇವೆ. ಮಾರ್ಚ್​ನಲ್ಲಿ ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮ ಮಾಡುತ್ತೇವೆ. ರಾಜಕಾರಣದಲ್ಲಿ ಮುಂದಿನ ದಿನಗಳಲ್ಲಿ ರಾಜಕೀಯ ಸಮೀಕರಣ ಆಗಬಹುದು. ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ಜನತಾ ಪರಿವಾರದಿಂದ ಹೋದವರೇ ಇದ್ದಾರೆ. ಮನಪರಿವರ್ತನೆಯಾಗಿ ಮತ್ತೆ ಪಕ್ಷಕ್ಕೆ ಬರಬಹುದು. ಬಂದಾಗ ಏನು ತೀರ್ಮಾನ ಮಾಡಬೇಕು ನೋಡೋಣ ಎಂದರು.

    ಪಂಚರತ್ನ ರಥಯಾತ್ರೆ ಬೃಹತ್​ ಸಮಾವೇಶಕ್ಕೆ ಕ್ಷಣಗಣನೆ: ಚಾಮುಂಡಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ಎಚ್​ಡಿಕೆ

    ಕುಕ್ಕೆಯಲ್ಲಿ ನ.20ರಂದು ಮಧ್ಯಾಹ್ನವರೆಗೆ ದೇವರ ದರ್ಶನವಿಲ್ಲ

    ಇಂತಹ ಹೆಂಗಸು ನನಗೆ ಬೇಡ, ಮಗನೇ ನಿನ್ನ ಅಮ್ಮ ಸರಿಯಿಲ್ಲ, ಆಕೆ ಜತೆ ಇರಬೇಡ… ಎಂದು ಮನದ ನೋವು ಬಿಚ್ಚಿಟ್ಟು ದುರಂತ ಅಂತ್ಯ ಕಂಡ ತಂದೆ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts