More

    ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸುವ ಕೆಲಸ ಮಾಡಬೇಕಿದೆ: ಎಚ್.ಡಿ. ದೇವೇಗೌಡ

    ಹಾಸನ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ನಾವು ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕಿದೆ. ಈಗಿನ ಸಂದರ್ಭದಲ್ಲಿ ಇದು ಅವಶ್ಯಕವಾಗಿದೆ ಎಂದು ಜೆಡಿಎಸ್​ ವರಿಷ್ಠ, ಮಾಜಿ ಪ್ರಧಾನಿ ಎಚ್​.ಡಿ. ದೇವೇಗೌಡ ಕರೆ ನೀಡಿದ್ದಾರೆ.

    ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನಲ್ಲಿ ಮಾತನಾಡಿದ ಅವರು, ವಿಧಾನಸಭಾ ಚುನಾವಣೆ ಲೋಕಸಭೆ ಮೇಲೆ ಪರಿಣಾಮ ಬೀರುವುದಿಲ್ಲ. ಇದು ನನ್ನ ರಾಜಕೀಯ ಅನುಭವದಲ್ಲಿ ಹೇಳುತ್ತಿದ್ದೇನೆ ಎಂದಿದ್ದಾರೆ.

    ಕಳೆದ ಲೋಕಸಭೆ ಚುನಾವಣೆಯಲ್ಲಿ ನಾವು ಬಿಜೆಪಿಯನ್ನು ಎದುರಿಸಿದ್ದೆವು. ಆದರೆ, ಈ ಬಾರಿ ಪರಿಸ್ಥಿತಿ ಬದಲಾಗಿದ್ದು, ಹಳೆಯದನ್ನೆಲ್ಲಾ ಮರೆತು ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸುವ ಅವಶ್ಯಕತೆಯಿದೆ. ಪಂಚ ರಾಜ್ಯಗಳ ಚುನಾವಣೆಯ ಎಕ್ಸಿಟ್ ಪೋಲ್ ರಿಪೋರ್ಟ್ ಬಂದಿದೆ. ಒಂದೆರಡು ಕಡೆ ಕಾಂಗ್ರೆಸ್, ಒಂದೆರಡು ಕಡೆ ಬಿಜೆಪಿ ಎಂದು ಸಮೀಕ್ಷೆ ಫಲಿತಾಂಶ ತಿಳಿಸಿದೆ. ವಿಧಾನಸಭಾ ಚುನಾವಣೆ ಲೋಕಸಭೆ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಹೇಳಿದ್ದಾರೆ.

    HDD PM Modi

    ಇದನ್ನೂ ಓದಿ: ಈ ಒಂದು ಸಿಂಪಲ್​ ಕೆಲಸ ಮಾಡಿದರೆ ನಿಮಗೆ ಸಿಗಲಿದೆ ಸಲಾರ್​ ಟಿಕೆಟ್​

    ಕೊನೆ ಕ್ಷಣದಲ್ಲಿ ಗ್ಯಾರಂಟಿ ಯೋಜನೆ ಕಾಂಗ್ರೆಸ್ ಅಧಿಕಾರ ಹಿಡಿಯಿತು. ಈಗ ದೇಶದ ಎಲ್ಲಾ ಕಡೆಯೂ ಗ್ಯಾರಂಟಿ ಶುರುವಾಗಿದೆ. ಗ್ಯಾರಂಟಿ ಯೋಜನೆಗಳ ಬಗ್ಗೆ ನಾನು ಈಗ ಹೆಚ್ಚು ಮಾತನಾಡುವುದಿಲ್ಲ. ನನಗೆ ರಾಜ್ಯಸಭೆ ಸದಸ್ಯನಾಗಿ ಇನ್ನೂ ಎರಡೂವರೆ ವರ್ಷ ಅವಕಾಶವಿದೆ. ಮಂಡಿ ನೋವು ಬಿಟ್ಟರೆ ಎಲ್ಲಾ ಕಡೆ ಕೆಲಸ ಮಾಡುವ ಸಾಮರ್ಥ್ಯವಿದೆ.

    ಮುಂದಿನ ಲೋಕಸಭೆಯಲ್ಲಿ ನಮಗೆ ಎಷ್ಟು ಸೀಟು ಹಂಚಿಕೆಯಾಗಲಿದೆ ಎಂಬುದು ಇನ್ನೂ ನಿರ್ಧಾರವಾಗಿಲ್ಲ. ಈ ಬಗ್ಗೆ ಪ್ರಧಾನಿ, ಬಿಜೆಪಿ ಅಧ್ಯಕ್ಷಕರು, ಜೆಡಿಎಸ್​ ರಾಜ್ಯಾಧ್ಯಕ್ಷರಾದ ಕುಮಾರಸ್ವಾಮಿ ಅವರು ತೀರ್ಮಾನ ಮಾಡಲಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್​.ಡಿ. ದೇವೇಗೌಡರು ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts