More

    ಮೀಸಲಾತಿ ವಿಚಾರದಲ್ಲಿ ಎಚ್‌ಡಿಡಿ ಪಾತ್ರ ದೊಡ್ಡದು

    ಚನ್ನರಾಯಪಟ್ಟಣ: ಭಾರತದ ಮೊಟ್ಟ ಮೊದಲ ಮಹಾಕಾವ್ಯ ರಾಮಾಯಣ ಮಹಾಕಾವ್ಯ ಜಗತ್ತಿನಲ್ಲಿ ಸತ್ವಯುತ ಮತ್ತು ಮೌಲ್ಯಯುತವಾದ ಸಾಹಿತ್ಯ ಸೃಷ್ಟಿಗೆ ಪ್ರೇರಣೆಯಾಗಿದೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಅಭಿಪ್ರಾಯಪಟ್ಟರು.

    ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ಪುರಸಭೆ ಹಾಗೂ ತಾಲೂಕು ವಾಲ್ಮೀಕಿ ನಾಯಕ ಸಂಘದ ಸಹಯೋಗದಲ್ಲಿ ಪಟ್ಟಣದ ಮಿನಿ ವಿಧಾನಸೌಧ ಆವರಣದಲ್ಲಿ ಶನಿವಾರ ಆಯೋಜಿಸಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವದಲ್ಲಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪುಷ್ಪಾಂಜಲಿ ಸಲ್ಲಿಸಿ ಮಾತನಾಡಿದರು.

    ರಾಮಾಯಣವು ಭಾರತೀಯರ ಜೀವನಚರಿತ್ರೆ ಮತ್ತು ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಮಹಾಕಾವ್ಯ. ಇದರ ಕರ್ತೃ ವಾಲ್ಮೀಕಿ ಅನಾದಿ ಕಾಲದಿಂದ ವರ್ತಮಾನದವರೆಗೂ ನಿರಂತರವಾಗಿ ಅಪಾರ ಜನಪ್ರಿಯತೆ ಹೊಂದಿದ್ದು, ಜನಮಾನಸದಲ್ಲಿ ಶಾಶ್ವತ ಸ್ಥಾನ ಪಡೆದಿದ್ದಾರೆ. ಹೀಗಾಗಿ ಅವರ ತತ್ವ ಮತ್ತು ಆದರ್ಶಗಳನ್ನು ಪಾಲಿಸಬೇಕು ಎಂದು ಸಲಹೆ ನೀಡಿದರು.

    ತುಳಿತಕ್ಕೆ ಒಳಪಟ್ಟ ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಸಮುದಾಯಕ್ಕೆ ಮೀಸಲಾತಿ ಬೇಡಿಕೆ, ಆತ್ಮಗೌರವ, ಸಮಾನ ಅವಕಾಶ ಹಾಗೂ ಸ್ವಾಭಿಮಾನದ ಬದುಕು ಕಲ್ಪಿಸುವ ನಿಟ್ಟಿನಲ್ಲಿ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರು ಮುಖ್ಯ ಪಾತ್ರ ವಹಿಸಿದ್ದರು. ತಾಲೂಕಿನಲ್ಲಿ ವಾಲ್ಮೀಕಿ ಸಂಘದ ಕಾರ್ಯ ಚಟುವಟಿಕೆಗಳಿಗೆ ಅನುಕೂಲವಾಗಲೆಂದು ಭವನ ನಿರ್ಮಾಣಕ್ಕೆ ಸೂಕ್ತ ನಿವೇಶನ ನೀಡಿದ್ದು ಸಂಘದ ವತಿಯಿಂದ ಹೆಚ್ಚುವರಿ ನಿವೇಶನಕ್ಕೆ ಬೇಡಿಕೆ ಸಲ್ಲಿಸಲಾಗಿದೆ. ಮುಂದಿನ ದಿನಗಳಲ್ಲಿ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದೆಂದು ತಿಳಿಸಿದರು.

    ಕಾರ್ಯಕ್ರಮದಲ್ಲಿ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಸಂಪನ್ಮೂಲ ವ್ಯಕ್ತಿ, ಶಿಕ್ಷಕ ಶಿವಶಂಕರಪ್ಪ, ತಹಸೀಲ್ದಾರ್ ಬಿ.ಎಂ.ಗೋವಿಂದರಾಜು, ತಾಲೂಕು ಪಂಚಾಯಿತಿ ಇಒ ಜಿ.ಆರ್.ಹರೀಶ್, ಡಿವೈಎಸ್ಪಿ ಪಿ.ರವಿಪ್ರಸಾದ್, ಸಮಾಜ ಕಲ್ಯಾಣ ಇಲಾಖೆಯ ಗ್ರೇಡ್-2 ಸಹಾಯಕ ನಿರ್ದೇಶಕ ಎಚ್.ಎಲ್. ಶಂಕರ್‌ಮೂರ್ತಿ, ಟಿಎಪಿಸಿಎಂಎಸ್ ಅಧ್ಯಕ್ಷ ರಮೇಶ್ ಕುಂಬಾರಹಳ್ಳಿ, ಎಪಿಎಂಸಿ ಮಾಜಿ ಅಧ್ಯಕ್ಷ ವಳಗೇರಹಳ್ಳಿ ಮಂಜುನಾಥ್, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಟಿ.ಮಂಜಪ್ಪ, ತಾಲೂಕು ವಾಲ್ಮೀಕಿ ನಾಯಕ ಸಂಘದ ಅಧ್ಯಕ್ಷ ನಾಗೇಶ್, ಜಿಲ್ಲಾ ವಾಲ್ಮೀಕಿ ನಾಯಕ ಸಂಘದ ಸಲಹೆಗಾರ ಅಶೋಕ್, ಮುಖಂಡರಾದ ಬೆಳಗಿಹಳ್ಳಿ ಪುಟ್ಟಸ್ವಾಮಿ, ದಂಡೋರು ಮಂಜುನಾಥ್, ದಿಂಡಗೂರು ಗೋವಿಂದರಾಜು ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts