More

    ಕನ್ನಡ ಧ್ವಜ ಹಾರಿಸಿದ ಕನ್ನಡ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಮರಾಠಿ ಪುಂಡರ ವಿರುದ್ಧ ಎಚ್​ಡಿಕೆ ಆಕ್ರೋಶ

    ಬೆಳಗಾವಿ: ಗೋಗಟೆ ಕಾಲೇಜಿನಲ್ಲಿ ನಿನ್ನೆ(ಬುಧವಾರ)ಕನ್ನಡ ಧ್ವಜ ಹಿಡಿದು ನೃತ್ಯ ಮಾಡಿದ್ದ ಕನ್ನಡ ವಿದ್ಯಾರ್ಥಿ ಮೇಲೆ ಮರಾಠಿ ಪುಂಡರು ಹಲ್ಲೆ ನಡೆಸಿದ್ದನ್ನು ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ತೀವ್ರವಾಗಿ ಖಂಡಿಸಿದ್ದು, ಈ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿದ್ದಾರ.

    ಸರಣಿ ಟ್ವೀಟ್​ ಮಾಡಿರುವ ಎಚ್​ಡಿಕೆ, ಬೆಳಗಾವಿಯ ತಿಲಕವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕನ್ನಡ ಬಾವುಟ ಹಾರಿಸಿದ ವಿದ್ಯಾರ್ಥಿ ಮೇಲೆ ನಡೆದಿರುವ ಹಲ್ಲೆಯನ್ನು ಉಗ್ರವಾಗಿ ಖಂಡಿಸುತ್ತೇನೆ. ದೂರು ಕೊಡಲು ಹೋದ ಆ ವಿದ್ಯಾರ್ಥಿ ಮೇಲೆ ಪೊಲೀಸರು ಕೂಡ ಅಮಾನುಷವಾಗಿ ಹಲ್ಲೆ ನಡೆಸಿರುವುದು ಕನ್ನಡಕ್ಕೆ, ಕರ್ನಾಟಕಕ್ಕೆ ಬಗೆದ ದೊಡ್ಡ ದ್ರೋಹ ಎಂದು ಅಸಮಾಧಾನ ಹೊರಹಾಕಿದ್ದಾರೆ.

    ಈ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ತಕ್ಷಣವೇ ಬಾಲಕನ ಮೇಲೆ ಹಲ್ಲೆ ನಡೆಸಿದ ಇತರೆ ಬಾಲಕರನ್ನು ವಶಕ್ಕೆ ಪಡೆದು, ಅವರಿಗೆ ಚಿತಾವಣೆ ನೀಡಿದವರನ್ನು ಬಂಧಿಸಬೇಕು ಹಾಗೂ ಕನ್ನಡ ಬಾವುಟ ಹಾರಿಸಿದ ಬಾಲಕನ ಮೇಲೆ ದುಂಡಾವರ್ತನೆ ತೋರಿದ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡಬೇಕು ಎಂದು ಆಗ್ರಹಿಸಿದ್ದಾರೆ.

    ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದ ಮೇಲೆ ಬೆಳಗಾವಿಯಲ್ಲಿ ಗೊಂದಲ ಹೆಚ್ಚಾಗುತ್ತಿದೆ. ಪ್ರತಿ ಸೂಕ್ಷ್ಮ ವಿಷಯವನ್ನು ರಾಜಕೀಯಕ್ಕೆ ಬಳಸಿಕೊಳ್ಳುವ ಬಿಜೆಪಿಯ ಕೈಯಲ್ಲಿ ಕನ್ನಡ ಮತ್ತು ಕನ್ನಡಿಗರು ಸುರಕ್ಷಿತವಾಗಿಲ್ಲ ಎನ್ನುವುದು ಸ್ಪಷ್ಟ. ಬೆಳಗಾವಿ ವಿಷಯ ಗಮನಿಸಿದರೆ ಅದು ಅರ್ಥವಾಗುತ್ತದೆ ಎಂದು ಎಚ್​ಡಿಕೆ ಕಿಡಿಕಾರಿದ್ದಾರೆ.

    ಮರಾಠಿ ಪುಂಡರಿಂದ ಹಲ್ಲೆಗೊಳಗಾದ ಕನ್ನಡಿಗ ವಿದ್ಯಾರ್ಥಿಗಳ ಮೇಲೆ ಪೊಲೀಸರಲೂ ಹಲ್ಲೆ ನಡೆಸಿದ್ದಾರೆ ಎಂಬ ಆರೋಪವನ್ನು ತಳ್ಳಿ ಹಾಕಿರುವ ಡಿಸಿಪಿ, ಎರಡೂ ಭಾಷಿಕ ವಿದ್ಯಾರ್ಥಿಗಳಿಗೆ ತಿಳಿಹೇದ್ದೇವೆ ಅಷ್ಟೇ ಎಂದಿದ್ದಾರೆ.

    ಕನ್ನಡಿಗ ವಿದ್ಯಾರ್ಥಿ ಮೇಲೆ ಹಲ್ಲೆ ನಡೆದಿದ್ದನ್ನು ಖಂಡಿಸಿ ಕಾಲೇಜಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕನ್ನಡಪರ ಸಂಘಟನೆಗಳನ್ನು ಪೊಲೀಸರು ತಡೆದ ಘಟನೆ ಗುರುವಾರ ನಡೆಯಿತು.

    ಶಾಮಿಯಾನದ ಕಂಬ ಮುಟ್ಟಿದ ವಿದ್ಯಾರ್ಥಿ ಸಾವು: ಈಜು ಸ್ಪರ್ಧೆಗೆ ರಾಮನಗರಕ್ಕೆ ಆಗಮಿಸಿದ್ದವ ದುರಂತ ಅಂತ್ಯ

    ಬಾಳು ಕೊಡ್ತೀನಿ… ಎಂದು ಪುಸಲಾಯಿಸಿ ಆಕೆಯ ಮನೆಯಲ್ಲೇ ಇದ್ದವ ಹೀಗಾ ಮಾಡೋದು? ಎಲ್ಲವನ್ನೂ ಕಳೆದುಕೊಂಡಾಕೆಯ ಗೋಳಿನ ಕಥೆ ಇದು

    ಕುಡಿದು ನಡುರಸ್ತೆಯಲ್ಲಿ ತೂರಾಡ್ತಿದ್ದವನನ್ನು ಹಿಂಬಾಲಿಸಿದ ಪೊಲೀಸರಿಗೆ ಶಾಕ್​! ಆತನ ಕೈಯಲ್ಲಿತ್ತು ಲಕ್ಷ ಲಕ್ಷ ಹಣ, ಕೆಜಿಗಟ್ಟಲೆ ಬಂಗಾರ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts