ಜೆಡಿಎಸ್​ ಅಧಿಕಾರಕ್ಕೆ ಬಂದರೆ ವಿದ್ಯಾರ್ಥಿನಿಯರಿಗೆ ಉಚಿತ ಎಲೆಕ್ಟ್ರಿಕ್​​ ಸ್ಕೂಟರ್​: ಎಚ್​.ಡಿ.ಕುಮಾರಸ್ವಾಮಿ ಘೋಷಣೆ

HDK
Published on

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಪಕ್ಷ ಅಧಿಕಾರಕ್ಕೆ ಬಂದರೆ ವಿದ್ಯಾರ್ಥಿನಿಯರಿಗೆ ಉಚಿತ ಎಲೆಕ್ಟ್ರಿಕ್​ ಸ್ಕೂಟರ್​ಗಳನ್ನು ಕೊಡಲಾಗುವುದು ಎಂದು ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಘೋಷಿಸಿದ್ದಾರೆ.

ವಿದ್ಯಾರ್ಥಿನಿಯರಿಗೆ ಸ್ಕೂಟರ್​

ಯಶವಂತಪುರ ವಿಧಾನಸಭಾ ಕ್ಷೇತ್ರದ ಕೆಂಚೇನಹಳ್ಳಿಯಲ್ಲಿ ಪಂಚರತ್ನ ರಥಯಾತ್ರೆ ಕಾರ್ಯಕ್ರವನ್ನು ಉದ್ದೇಶಿಸಿ ಮಾತನಾಡಿದ ಎಚ್​.ಡಿ.ಕೆ ಈ ಬಾರಿಯ ಚುನಾವಣೆಯಲ್ಲಿ ಗೆದ್ದು ಜೆಡಿಎಸ್​ ಅಧಿಕಾರಕ್ಕೆ ಬಂದರೆ ವಿದ್ಯಾರ್ಥಿನಿಯರಿಗೆ ಉಚಿತವಾಗಿ ಎಲೆಕ್ಟ್ರಿಕ್​ ಸ್ಕೂಟರ್​ಗಳನ್ನು ಸರ್ಕಾರದ ವತಿಯಿಂದ ಕೊಡಲಾಗುವುದು ಎಂದು ಹೇಳಿದ್ದಾರೆ.

ನಾನು ಬಿಸಲಿನಲ್ಲೇ ಇದ್ದೇನೆ

ಎರಡು ರಾಷ್ಟ್ರೀಯ ಪಕ್ಷ್ಗಳ ವಿರುದ್ಧ ನಾನು ಏಕಾಂಗಿಯಾಗಿ ಹೋರಾಟ ಮಾಡುತ್ತಿದ್ದೇನೆ. ಪಂಚರತ್ನ ಕಾರ್ಯಕ್ರಮಗಳನ್ನು ನಾನು ಜಾರಿಗೆ ತರಲು ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತೇನೆ.

ಚುನಾವಣೆ ಕುರಿತ ಕೆಲಸ ಇದ್ದ ಕಾರಣ ನಾನು ಬರಲು ಸ್ವಲ್ಪ ತಡವಾಯಿತು ಎಂದು ಭಾಷಣ ಮಾಡುವ ವೇಳೆ ಬಿಸಿಲು ಜಾಸ್ತಿ ಇದ್ದ ಕಾರಣ ಪ್ರಚಾರದ ವಾಹನವನ್ನು ಚಾಲಕ ನೆರಳಿಗೆ ನಿಲ್ಲಿಸಲು ಮುಂದಾದರು. ಈ ವೇಳೆ ಕಳೆದ ನಾಲ್ಕು ತಿಂಗಳ ಬಿಸಿಲಿನಲ್ಲಿಯೇ ಇದ್ದೇನೆ ನೆರಳಿಗೆ ಹಾಕಬೇಡಿ ಏನು ಆಗಲ್ಲ ಎಂದು ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net