More

    ಈ ಸೂರಿ ಪಾಯಲ್ ಯಾರಪ್ಪಾ ಎಂದು ಕೇಳಿದ ಮಾಜಿ ಸಿಎಂ

    ಬೆಂಗಳೂರು: “ಯಾರೋ ಸೂರಿ ಪಾಯಲ್ ಅಂತೆ. ನಾನು ಇದೇ ಮೊದಲಿಗೆ ಈ ಹೆಸರು ಕೇಳಿದ್ದು. ನಾನು ಅದೆಂಥದೋ ಅವನ್ಯಾರೋ ಫಾರಿನರ್ ತರ ಇದ್ದಾನೆ ಅಂದುಕೊಂಡಿದ್ದೆ. ಅದೂ ಲೋಕಲ್ ಅನ್ನುವುದು ಆಮೇಲೆ ಗೊತ್ತಾಯಿತು” ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

    ಇದನ್ನೂ ಓದಿ: ಸಿದ್ದರಾಮಯ್ಯ ಸಿಎಂ ಆಗಿದ್ದಕ್ಕೆ ಸೌದಿಯಿಂದ ಬಂದು ಹರಕೆ ಸಲ್ಲಿಸಿದ ಅಭಿಮಾನಿ; ಚಿನ್ನಲೇಪಿತ ಬೆಳ್ಳಿಯ ನಾಗಾಭರಣ ಅರ್ಪಣೆ

    ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, “ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಹುಲುಸಾಗಿ ಮೇಯಲು ಮೇವು ಇದೆ. ಅದನ್ನು ಮೇಯಲು ಯಾರು ಯಾರನ್ನು ಬಿಟ್ಟಿದ್ದಾರೆ ಎಂಬುದು ಇವತ್ತಿನ ಪತ್ರಿಕೆಗಳಲ್ಲಿ ಬಂದಿದೆ. ಪರಿಸರ ಇಲಾಖೆಯಲ್ಲಿ ದಂಧೆ ಶುರುವಾಗಿದೆ’” ಎಂದು ಸರಕಾರವನ್ನು ತರಾಟೆಗೆ ತೆಗೆದುಕೊಂಡರು.

    “ಮಾತೆತ್ತಿದರೆ ಸರ್ವಜನಾಂಗದ ಶಾಂತಿಯ ತೋಟ ಅಂದರು. ಆದರೆ, ಅದು ಇವರು ಮೇಯುವ ಸಮೃದ್ಧಿಯ ತೋಟವಾಗಿದೆ. ಎಲ್ಲಿ ನೋಡಿದರೂ ಸ್ವಜನ ಪಕ್ಷಪಾತ, ವರ್ಗಾವಣೆ ದಂಧೆ ಜೋರಾಗಿ ನಡೆದಿದೆ” ಎಂದು ಕುಮಾರಸ್ವಾಮಿ ನೇರ ಆರೋಪ ಮಾಡಿದರು.

    ಇದನ್ನೂ ಓದಿ: ಪಿಎಸ್ ಐ ಪಿಸ್ತೂಲ್ ಜತೆಗೆ ಪರಾರಿಯಾಗಿ ಮರವೇರಿದ್ದ ಕುಖ್ಯಾತ ಕಳ್ಳನ ಹರಸಾಹಸ ಮಾಡಿ ಕೆಳಗಿಳಿಸಿದ ಪೊಲೀಸರು !

    “ಟ್ರಾನ್ಸ್‌ಫರ್ ದಂಧೆಯ ಬಗ್ಗೆ ನಾನೊಬ್ಬನೇ ಹೇಳುತ್ತಿಲ್ಲ. ಎಲ್ಲರೂ ಮಾತನಾಡುತ್ತಿದ್ದಾರೆ. ಅಧಿಕಾರಿಗಳು ಸೇರಿ ಪ್ರತಿಯೊಬ್ಬರೂ ಹಾದಿಬೀದಿಯಲ್ಲಿ ಮಾತನಾಡುತ್ತಿದ್ದಾರೆ. ವಿಧಾನಸಭೆಯಲ್ಲಿ ಸಿಎಂ, ವರ್ಗಾವಣೆ ದಂಧೆಯಲ್ಲಿ ತಾವು ತೊಡಗಿಲ್ಲ, ಯಾರಾದರೂ ತೊಡಗಿದ್ದರೆ ತಮಗೆ ಗೊತ್ತಿಲ್ಲ. ಗೊತ್ತಿಲ್ಲದೆ ಯಾರಾದರೂ ತೊಡಗಿದ್ದರೆ ಮಾಹಿತಿ ಇಲ್ಲ ಅಂದಿದ್ದಾರೆ. ಹೀಗೆ ಮುಖ್ಯಮಂತ್ರಿಗಳು ಮಾತನಾಡಿದರೆ ಅರ್ಥವೇನು?” ಎಂದು ಎಚ್​ಡಿಕೆ ಕಿಡಿಕಾರಿದರು.

    ವಾಲ್ಮೀಕಿ ಅಭಿವೃದ್ಧಿ ನಿಗಮದ ಕಥೆ ಬಿಚ್ಚಿಟ್ಟ ಮಾಜಿ ಸಿಎಂ ಎಚ್‌ಡಿಕೆ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts