ಎಚ್​ಡಿಕೆ ಪರ ಯಡಿಯೂರಪ್ಪ ಬ್ಯಾಟಿಂಗ್​! ಸಿದ್ದರಾಮಯ್ಯಗೆ ಮಾತಿನಲ್ಲೇ ಚಾಟಿ ಬೀಸಿದ ಸಿಎಂ

HDK BSY siddu
Published on

ಬೆಂಗಳೂರು: ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಪರ ಇಂದು ವಿಧಾನಸಭೆ ಕಲಾಪದದಲ್ಲಿ ಸಿಎಂ ಯಡಿಯೂರಪ್ಪ ಭರ್ಜರಿ ಬ್ಯಾಟಿಂಗ್​ ಮಾಡಿದ್ದಾರೆ. ಎಚ್​ಡಿಕೆ ಸಿಎಂ ಆಗಿದ್ದ ವೇಳೆ ಅವರಿಗೆ ಸ್ವತಂತ್ರವಾಗಿ ಕೆಲಸ ಮಾಡಲು ಕಾಂಗ್ರೆಸ್ ಬಿಡಲಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಮಾತಿನಲ್ಲೇ ಚಾಟಿ ಬೀಸಿದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕೇವಲ 80 ಸ್ಥಾನ ಪಡೆಯಿತು. ಆದರೂ ಜೆಡಿಎಸ್ ಜತೆ ಸೇರಿಕೊಂಡು ಆಡಳಿತ ನಡೆಸಿತು. ಕಾಂಗ್ರೆಸ್​-ಜೆಡಿಎಸ್​ ಮೈತ್ರಿ ಸರ್ಕಾರದಲ್ಲಿ ಕುಮಾರಸ್ವಾಮಿಗೆ ಸಿಎಂ ಸ್ಥಾನ ಒಲಿಯಿತು. ಆದರೆ ಆ ಸಿಎಂಗೆ ಕಾಂಗ್ರೆಸ್​ನ ಹಲವರು ಕಿರುಕಳ‌ ನೀಡಿದ್ದಾರೆ. ಸರಿಯಾಗಿ ಕೆಲಸ ಮಾಡಲು ಸಾಧ್ಯವಾಗಲಿಲ್ಲ. ಈ ಬಗ್ಗೆ ಎಚ್​ಡಿಕೆ ಅವರೇ ಹೇಳಿದ್ದಾರೆ ಎಂದ ಯಡಿಯೂರಪ್ಪ, ಸಿಎಂ ಆಗಿದ್ದ ಎಚ್​ಡಿಕೆಗೆ ಸ್ವತಂತ್ರವಾಗಿ ಕೆಲಸ ಮಾಡಲು ಕಾಂಗ್ರೆಸ್ ಬಿಡಲಿಲ್ಲ ಎಂದರು. ಇದನ್ನೂ ಓದಿರಿ ತಾಲೂಕು ಪಂಚಾಯಿತಿಯನ್ನೇ ರದ್ದು ಮಾಡಲು ಸಿದ್ಧತೆ! ಕರ್ನಾಟಕದಲ್ಲಿ ಜಿಪಂ, ಗ್ರಾಪಂ ಮಾತ್ರ ಇರುತ್ತೆ…

ಇನ್ನು ಸಿಎಂ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ನೀಡುತ್ತಾರೆ ಎಂದು ಮಾತಿನಲ್ಲೇ ಕಾಲೆಳೆದ ಸಿದ್ದರಾಮಯ್ಯಗೆ ನಯವಾಗಿಯೇ ಕ್ಲಾಸ್​ ತೆಗೆದುಕೊಂಡ ಸಿಎಂ, ಎಲ್ಲಿಯವರೆಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಷಾ ಅವರ ಆಶೀರ್ವಾದ ಇರುತ್ತೋ ಅಲ್ಲಿಯವರೆಗೂ ಏನೂ ಆಗಲ್ಲ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ 150 ಸೀಟುಗಳನ್ನು ಗೆದ್ದು ಕಾಂಗ್ರೆಸ್ ಅನ್ನು ಶಾಶ್ವತವಾಗಿ ಪ್ರತಿಪಕ್ಷವಾಗಿ ಕೂರಿಸುತ್ತೇನೆ. ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಎಸಿಬಿ ರಚಿಸಿ ಎಷ್ಟು ಬಿ ರಿಪೋರ್ಟ್ ಹಾಕಿಸಿದ್ದಾರೆ? ಎಂದು ಪ್ರಶ್ನಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net