ಬೆಂಗಳೂರು: ಮರ್ಯಾದೆಗೇಡಿ, ಕಿಡಿಗೇಡಿ ನನ್ನ ಮೇಲೆ ಮತ್ತೆ ವಿಷ ಕಕ್ಕಿರುವುದು ಹತಾಶೆ ಅಷ್ಟೇ. ಆಕಾಶಕ್ಕೆ ಉಗಿದರೆ ಮುಖದ ಮೇಲೆಯೇ ಬೀಳುತ್ತದೆ ಮಂಕೆ. ಇಷ್ಟೂ ಸಾಮಾನ್ಯಜ್ಞಾನವೂ ಇಲ್ಲವೇ? ಕುಂಬಳಕಾಯಿ ಕಳ್ಳನಿಗೆ ಕೋಪ ಬಂದಿದೆ ಎಂದು ಮಾಜಿ ಸಿಎಂ, ಕೇಂದ್ರ ಸಚಿವರಾದ ಎಚ್ಡಿ ಕುಮಾರಸ್ವಾಮಿ ಪರೋಕ್ಷವಾಗಿ ವ್ಯಂಗ್ಯವಾಡಿದ್ದಾರೆ.
ಇದನ್ನೂ ಓದಿ: ಗ್ರಾಮಸಭೆಯಲ್ಲಿ ಶಾಲಾ ಸಮವಸ ಚರ್ಚೆ – ೨೦ ಸಾವಿರದಲ್ಲಿ ಶಾಲೆಗಳಿಗೆ ತಲುಪಿಸಲಾಗುತ್ತಿಲ್ಲ ಎಂದು ಅಽಕಾರಿ ಅಸಹಾಯಕತೆ
ಈ ಕುರಿತಂತೆ ಟ್ವೀಟ್ ಮಾಡಿರುವ ಎಚ್ಡಿಕೆ, “ಅಹೋರಾತ್ರಿಯೂ ದ್ರೋಹ ಚಿಂತನೆ, ವಿಶ್ವಾಸದ್ರೋಹ, ಉಂಡ ಮನೆಗೆ ಕನ್ನ, ಸ್ವಪಕ್ಷೀಯರಿಗೇ ಗುನ್ನ. ಇದೂ ಒಂದು ಬದುಕೇ? ರಾಜಕೀಯ ವಿರೋಧಿಗಳನ್ನು ಹತ್ತಿಕ್ಕಲು ಕ್ರಿಮಿನಲ್ ಕೃತ್ಯಗಳಲ್ಲಿ ತೊಡಗಿರುವ ವಿಷಸರ್ಪ ನನ್ನಡೆಗೆ ನಾಲಿಗೆ ಚಾಚಿದೆ. ಇಂಥ ಕ್ರಿಮಿನಲ್ ಒಬ್ಬ ಕೆಟ್ಟ ಅಲೋಚನೆಗಳಲ್ಲಿ ದಿನಪೂರ್ತಿ ಮುಳುಗಿರುವುದು ಸಹಜ. ಕ್ರಿಮಿನಲ್ನ ಚಾಳಿಯೇ ಧಮ್ಕಿ ಹಾಕುವುದು. ವಿಷಕ್ರಿಮಿಯ ಕೆಲಸ ಎಲ್ಲರನ್ನೂ ಕಚ್ಚುವುದು. ಇದರಲ್ಲಿ ನನಗೇನೂ ಅಚ್ಚರಿ ಇಲ್ಲ” ಎಂದರು.
“ನಾನು ಭೂ ಒತ್ತುವರಿ ಮಾಡಿದ್ದೇನೋ ಇಲ್ಲವೋ ಕಾನೂನು ವ್ಯಾಪ್ತಿಯಲ್ಲಿ ತೀರ್ಮಾನವಾಗುತ್ತದೆ. ಈಗ ನನ್ನ ಮರ್ಯಾದೆ ವಿಷಯ ಇರಲಿ, ಇವತ್ತು ಸ್ವಪಕ್ಷೀಯರೇ ಈ ಮರ್ಯಾದೆಗೇಡಿಯ ಮಾನವನ್ನು ವಿಧಾನಸೌಧದಲ್ಲಿಯೇ ಹರಾಜು ಹಾಕಿದ್ದಾರೆ. ಅದಕ್ಕೆ ಉತ್ತರವೇನು?” ಎಂದು ಟ್ವೀಟ್ನಲ್ಲಿ ಪ್ರಶ್ನಿಸಿದ್ದಾರೆ.
ಮಾಟ ಮಂತ್ರ, ಕುತಂತ್ರ! ಪುತ್ರಿಯ ಮಾತು ತಿಳಿಲಿಲ್ಲ; ಪಾಪಿಗಳನ್ನು ಗಲ್ಲಿಗೇರಿಸಲು ಸೌರಭ್ ತಾಯಿ ಪಟ್ಟು | Murder Case