More

    ಎಚ್‌ಡಿಕೆ, ಡಿಕೆಶಿ ಅವರದ್ದು ಎಣ್ಣೆ ಸಿಗೇಕಾಯಿ ಸಂಬಂಧ: ಕಾರಜೋಳ


    ಹೂವಿನಹಡಗಲಿ: ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರದ್ದು ಎಣ್ಣೆ ಸಿಗೇಕಾಯಿ ಸಂಬಂಧ. ಅವರಿಬ್ಬರೂ ಎಂದೂ ಒಂದಾಗಲು ಸಾಧ್ಯವೇ ಇಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು.

    ಜಿಲ್ಲೆಯಲ್ಲಿ ಬರ ಅಧ್ಯಯನ ಪ್ರವಾಸ ಕೈಗೊಂಡಿರುವ ಅವರು ಪಟ್ಟಣದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಲು ಜೆಡಿಎಸ್ ಶಾಸಕರ ಬೆಂಬಲ ನೀಡುವುದಾಗಿ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರಲ್ಲ ಎಂಬ ಪತ್ರಕರ್ತರ ಪ್ರಶ್ನೆಗೆ ಮೇಲಿನಂತೆ ಉತ್ತರಿಸಿದರು.

    ಡಿ.ಕೆ.ಶಿವಕುಮಾರ್ ಮತ್ತು ಎಚ್.ಡಿ.ಕುಮಾರಸ್ವಾಮಿ ಅವರ ವ್ಯಕ್ತಿತ್ವಗಳು ತದ್ವಿರುದ್ಧವಾಗಿವೆ. ಅವರೆಂದೂ ಒಂದಾಗಲಾರರು. ಕುಮಾರಸ್ವಾಮಿ ವ್ಯಂಗ್ಯವಾಗಿ ಹೇಳಿದ್ದಾರೆ.

    ರಾಜ್ಯದಲ್ಲಿ ಬರ ಅಧ್ಯಯನಕ್ಕೆ ಆಗಮಿಸಿದ್ದ ಕೇಂದ್ರ ತಂಡಕ್ಕೆ ನೈಜ ಸ್ಥಿತಿಯನ್ನು ತೋರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಹಸಿರು ಜಾಗವನ್ನು ತೋರಿಸಿದರೆ, ಪರಿಹಾರ ನಿರೀಕ್ಷಿಸಲು ಸಾಧ್ಯವೇ? ಈ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ನಾಯಕರು ೧೭ ತಂಡಗಳಲ್ಲಿ ರಾಜ್ಯವನ್ನು ಸುತ್ತುತ್ತಿದ್ದಾರೆ. ರೈತರ ಸಮಸ್ಯೆ, ಕುಡಿಯುವ ನೀರು, ಜಾನುವಾರುಗಳ ಮೇವುಮತ್ತು ಗೋಶಾಲೆ ಸೇರಿದಂತೆ ಸಮಗ್ರ ಅಂಶಗಳನ್ನು ಒಳಗೊಂಡಿರುವ ವರದಿಯನ್ನು ಆದಷ್ಟು ಬೇಗ ಕೇಂದ್ರ ಸರ್ಕಾರಕ್ಕೆ ಸಲ್ಲಿಸುತ್ತೇವೆ.
    ಕೇಂದ್ರ ಅಧ್ಯಯನ ತಂಡದಿಂದ ಬರ ಪರಿಸ್ಥಿತಿಯನ್ನು ಮರೆಮಾಚಿ, ಬಳಿಕ ಕೇಂದ್ರದ ವಿರುದ್ಧ ಆರೋಪ ಮಾಡುವುದು ತರವಲ್ಲ. ಆಡಳಿತ ಎಂದರೆ ಗಿಮಿಕ್ ಮಾಡುವುದಲ್ಲ. ಈ ಬಗ್ಗೆ ಯಾವುದೇ ರೀತಿಯ ಆಕ್ಷೇಪಣೆಗಳಿದ್ದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿಯನ್ನು ಭೇಟಿ ಮಾಡಿ, ಪರಿಹಾರ ಕೇಳಲಿ ಎಂದು ಸಲಹೆ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts