ಬೆಂಗಳೂರು: ರಾಜಧಾನಿಯ ನಿವಾಸಿಗಳು ಬದುಕುಳಿಯಬೇಕಾದರೆ ಈ ಕೂಡಲೇ ಕನಿಷ್ಠ 20 ದಿನ ಸಂಪೂರ್ಣ ಲಾಕ್ಡೌನ್ ಮಾಡಬೇಕು. ತಪ್ಪಿದಲ್ಲಿ ಬೆಂಗಳೂರು ಮತ್ತೊಂದು ಬ್ರೆಜಿಲ್ ಆಗಲಿದೆ ಎಂದು ರಾಜ್ಯದ ಮುಖ್ಯಮಂತ್ರಿಗೆ ಎಚ್ಚರಿಸಿದ್ದ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರಿಗೂ ಟ್ವೀಟ್ ಮಾಡಿದ್ದಾರೆ.
ದೇಶದಲ್ಲಿ ಕರೊನಾ ಪ್ರಕರಣ ಹೆಚ್ಚಾಗುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸುತ್ತಿರುವ ಎಚ್ಡಿಕೆ, ಜನರ ಆರೋಗ್ಯ ಮುಖ್ಯವೇ ಹೊರತು ಆರ್ಥಿಕತೆಯಲ್ಲ. 20 ದಿನ ದೇಶದಾದ್ಯಂತ ಮತ್ತೆ ಲಾಕ್ಡೌನ್ ಘೋಷಿಸಬೇಕು ಎಂದು ಪ್ರಧಾನಿ ಅವರಲ್ಲಿ ಮನವಿ ಮಾಡಿದ್ದಾರೆ. ಇದನ್ನೂ ಓದಿರಿ video/ ಕರೊನಾ ವಾರ್ಡಿನಲ್ಲಿ ‘ನರಕ’ ದರ್ಶನ, ಶೌಚಗೃಹದ ನೀರನ್ನೇ ಕುಡಿದ ಸೋಂಕಿತರು!
ಸರಣಿ ಟ್ವೀಟ್ ಮಾಡಿರುವ ಎಚ್ಡಿಕೆ, ಜನರ ಪ್ರಾಣದ ಜೊತೆ ಚೆಲ್ಲಾಟ ನಿಲ್ಲಿಸಿ. ಕೆಲವೇ ಪ್ರದೇಶಗಳಲ್ಲಿ ಸೀಲ್ಡೌನ್- ಲಾಕ್ಡೌನ್ ಮಾಡಿದರೆ ಪ್ರಯೋಜನವಿಲ್ಲ. ಲಾಕ್ಡೌನ್ ತೆರವುಗೊಳಿಸಿದ ಬಳಿಕ ದೇಶದಲ್ಲಿ ಕರೊನಾ ಪ್ರಕರಣ ಹೆಚ್ಚಾಗುತ್ತಿದೆ. ಹೀಗಾಗಿ ದೇಶದಲ್ಲಿ ಮತ್ತೆ 20 ದಿನ ಲಾಕ್ಡೌನ್ ಮಾಡಬೇಕು ಎಂದು ಸರ್ಕಾರಗಳನ್ನು ಆಗ್ರಹಿಸಿದ್ದಾರೆ.
I urge the Prime Minister to notice that the selective seal-down in containment zones has not served its purpose of arresting the pandemic and to impose a further 20 days national lock down. Lets not put economy ahead of peoples' safety.
3/4— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) June 23, 2020
ಕರೊನಾ ಪ್ರಕರಣ ಹೆಚ್ಚುತ್ತಿರುವ ದೇಶಗಳಲ್ಲಿ ಭಾರತವೂ ಒಂದು. ಬೆಂಗಳೂರನ್ನು ಮತ್ತೊಂದು ಬ್ರೆಜಿಲ್ ಆಗಲು ಬಿಡಬಾರದು. ಕರೊನಾ ಹರಡುವಿಕೆ ನಿಯಂತ್ರಿಸಲು ಲಾಕ್ಡೌನ್ ಆಗಬೇಕಿದೆ. ಬೆಂಗಳೂರನ್ನು ಕೂಡಲೇ ಸಂಪೂರ್ಣ ಲಾಕ್ಡೌನ್ ಮಾಡಬೇಕು. ದಿನಗೂಲಿ ಕಾರ್ಮಿಕರು, ಆಟೋ-ಕ್ಯಾಬ್ ಚಾಲಕರಿಗೆ 5000 ರೂ. ನೀಡುವ ಮೂಲಕ ಅವರ ಕುಟುಂಬಕ್ಕೆ ನೆರವಾಗಬೇಕು ಎಂದು ಸಿಎಂ ಬಿಎಸ್ವೈ ಅವರನ್ನೂ ಆಗ್ರಹಿಸಿದ್ದಾರೆ.