93 ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಎಚ್​ಡಿಕೆ: ರಾಮನಗರ ಸೇರಿ ಹಲವು ಕ್ಷೇತ್ರಗಳು ನಿಗೂಢ

hdk devegowda
Published on

ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಶತಾಯಗತಾಯ ಗೆಲ್ಲಲೇಬೇಕು, ಸ್ವತಂತ್ರವಾಗಿ ಅಧಿಕಾರದ ಚುಕ್ಕಾಣಿ ಹಿಡಿಯಲೇಬೇಕೆಂದು ಪಣತೊಟ್ಟಿರುವ ದಳಪತಿಗಳು ಅಳೆದು-ತೂಗಿ, ಒಳ್ಳೆಯ ಮುಹೂರ್ತದಲ್ಲಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಇಂದು(ಸೋಮವಾರ) ಬಿಡುಗಡೆ ಮಾಡಿದರು.

ಮಗನಿಗಾಗಿ ಕ್ಷೇತ್ರ ತ್ಯಾಗ ಮಾಡಿರುವುದಾಗಿ ಶನಿವಾರ ರಾಮನಗರದಲ್ಲಿ ನಡೆಯುತ್ತಿದ್ದ ಪಂಚರತ್ನ ರಥಯಾತ್ರೆಯಲ್ಲಿ ರಾಮನಗರಕ್ಕೆ ನಿಖಿಲ್​ ಕುಮಾರಸ್ವಾಮಿಯೇ ಅಭ್ಯರ್ಥಿ ಎಂದು ಅನಿತಾಕುಮಾರಸ್ವಾಮಿ ಘೋಷಿಸಿದ್ದರು. ಆದರೆ, ಇಂದು ಎಚ್​.ಡಿ.ಕುಮಾರಸ್ವಾಮಿ ಮತ್ತು ಜೆಡಿಎಸ್​ ಪಕ್ಷದ ಅಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರು ಬಿಡುಗಡೆ ಮಾಡಿದ ಮೊದಲ ಪಟ್ಟಿಯಲ್ಲಿ ನಿಖಿಲ್​ ಹೆಸರು ಮತ್ತು ರಾಮನಗರ ಕ್ಷೇತ್ರಕ್ಕೆ ಅಭ್ಯರ್ಥಿ ಯಾರೆಂದು ಇಲ್ಲ.

ಹಾಸನ ಜಿಲ್ಲೆಯಲ್ಲಿ ಭವಾನಿ ರೇವಣ್ಣ ಟಿಕೆಟ್​ ಆಕಾಂಕ್ಷಿಯಾಗಿದ್ದು, ಮತ್ತೊಂದೆಡೆ ಶಿವಲಿಂಗೇಗೌಡ ಪಕ್ಷ ಬಿಡುವ ವದಂತಿ ಇದೆ. ಹಾಸನ ಜಿಲ್ಲೆಯ ಅಭ್ಯರ್ಥಿಗಳ ಘೋಷಣೆಯನ್ನು ಎಚ್​ಡಿಕೆ ಕಾಯ್ದಿರಿಸಿದ್ದಾರೆ.

ಒಟ್ಟು 93 ಕ್ಷೇತ್ರಗಳಿಗೆ ಅಭ್ಯರ್ಥಿಗಳು ಅಂತಿಮವಾಗಿದೆ. ಜೆಡಿಎಸ್​ ವರಿಷ್ಠ ಎಚ್​.ಡಿ.ದೇವೇಗೌಡರ ಅನುಮೋದನೆ ಮೇರೆಗೆ ಸಿಎಂ ಇಬ್ರಾಹಿಂ ಸಮ್ಮುಖದಲ್ಲಿ ಕುಮಾರಸ್ವಾಮಿ ಪಟ್ಟಿ ಬಿಡುಗಡೆ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net