More

    ಸಮರ್ಪಕ ಪರೀಕ್ಷೆ, ಸೋಂಕಿತರಿಗೆ ಸೂಕ್ತ ಚಿಕಿತ್ಸೆ : ಅಧಿಕಾರಿಗಳಿಗೆ ಮಾಜಿ ಸಿಎಂ ಎಚ್‌ಡಿಕೆ ಸಲಹೆ ತಹಸೀಲ್ದಾರ್‌ಗಳ ಜತೆ ವರ್ಚುವಲ್ ಸಭೆ

    ರಾಮನಗರ :  ಕೋವಿಡ್ ಸ್ಥಿತಿಗತಿ ಕುರಿತು ಜಿಲ್ಲೆಯ ತಹಸೀಲ್ದಾರ್‌ಗಳ ಜತೆ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಶನಿವಾರ ವರ್ಚುವಲ್ ಸಭೆ ನಡೆಸಿದರು.
    ರಾಮನಗರ ಶಾಸಕಿ ಅನಿತಾ ಕುಮಾರಸ್ವಾಮಿ, ಮಾಗಡಿ ಶಾಸಕ ಎ.ಮಂಜು, ಜಿಲ್ಲೆಯ ನಾಲ್ಕು ತಾಲೂಕುಗಳು ತಹಸೀಲ್ದಾರ್‌ಗಳು ಸಭೆಯಲ್ಲಿ ಭಾಗವಹಿಸಿದ್ದರು. ಕ್ಷೇತ್ರಗಳ ಕರೊನಾ ಸ್ಥಿತಿಗತಿ ಬಗ್ಗೆ ಶಾಸಕರು ಸಂಬಂಧಪಟ್ಟ ತಹಸೀಲ್ದಾರ್‌ಗಳಿಂದ ಮಾಹಿತಿ ಪಡೆದರು.
    ಸಮರ್ಪಕ ಪರೀಕ್ಷೆ, ಸೂಕ್ತ ಚಿಕಿತ್ಸೆ, ಆಸ್ಪತ್ರೆಗಳಲ್ಲಿ ಶುಚಿತ್ವ ಕಾಪಾಡುವಂತೆ ಕುಮಾರಸ್ವಾಮಿ ಸಲಹೆ ನೀಡಿದರು. ಆರೈಕೆ ಕೇಂದ್ರಗಳಲ್ಲಿ ಆಹಾರಕ್ಕೆ ತೊಂದರೆಯಾಗದಂತೆ ಗಮನಹರಿಸುವಂತೆ ಸೂಚಿಸಿದರು.
    ರಾಮನಗರಕ್ಕೆ ಎರಡು ಆಂಬುಲೆನ್ಸ್: ರಾಮನಗರದಲ್ಲಿ ಆಂಬುಲೆನ್ಸ್ ಕೊರತೆ ಇರುವುದಾಗಿ ತಹಸೀಲ್ದಾರ್ ಹೇಳಿದರು. ಸೋಮವಾರದ ಒಳಗಾಗಿ ಆಂಬುಲೆನ್ಸ್ ಒದಗಿಸುವುದಾಗಿ ಕುಮಾರಸ್ವಾಮಿ ತಿಳಿಸಿದರು. ತಕ್ಷಣಕ್ಕೆ ಒಂದು ಆಂಬುಲೆನ್ಸ್ ಅಗತ್ಯವಿರುವುದಾಗಿ ತಹಸೀಲ್ದಾರ್ ಹೇಳಿದರು. ಎರಡು ಆಂಬುಲೆನ್ಸ್‌ಗಳನ್ನು ನೀಡುವುದಾಗಿ ಎಚ್‌ಡಿಕೆ ತಿಳಿಸಿದರು.
    ಬ್ಲ್ಯಾಕ್ ಫಂಗಸ್ ನಿಭಾಯಿಸಿ: ಜಿಲ್ಲೆಯಲ್ಲಿ ಎಷ್ಟು ಮಂದಿ ಬ್ಲ್ಯಾಕ್ ಫಂಗಸ್ ರೋಗಕ್ಕೆ ತುತ್ತಾಗಿರುವವರ ಬಗ್ಗೆ ಶಾಸಕಿ ಅನಿತಾ ಕುಮಾರಸ್ವಾಮಿ ಮಾಹಿತಿ ಪಡೆದರು. ಜಿಲ್ಲೆಯಲ್ಲಿ ಐದು ಸೋಂಕಿತರಿದ್ದು ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ಕಳಿಸಿರುವುದಾಗಿ ಅಧಿಕಾರಿಗಳು ತಿಳಿಸಿದರು. ಈ ವೇಳೆ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಮಾಡದೆ ತಕ್ಷಣವೇ ಸೋಂಕಿತರನ್ನು ಬೆಂಗಳೂರಿನ ಆಸ್ಪತ್ರೆಗಳಿಗೆ ಕಳುಹಿಸುವ ಮೂಲಕ ಚಿಕಿತ್ಸೆ ಕೊಡಿಸಿ ಹಾಗೂ ಪ್ರಾಣಾಪಾಯದಿಂದ ಕಾಪಾಡಿ ಎಂದು ಸೂಚನೆ ನೀಡಿದರು. ಪೊಲೀಸರ ನೆರವಿನೊಂದಿಗೆ ಜಿಲ್ಲೆಯಲ್ಲಿ ಲಾಕ್‌ಡೌನ್ ಕಟ್ಟುನಿಟ್ಟಾಗಿ ಜಾರಿಗೆ ತರುವಂತೆಯೂ ಅನಿತಾ ಕುಮಾರಸ್ವಾಮಿ ಸಲಹೆ ನೀಡಿದರು.

    ಪ್ರತ್ಯೇಕ ಆಂಬುಲೆನ್ಸ್ ಬಳಸಿ: ಪ್ರಸ್ತುತ ಸೋಂಕಿತರನ್ನು ಆಸ್ಪತ್ರೆಗೆ ಸಾಗಿಸಲು ಮತ್ತು ಗುಣಮುಖರಾದವರನ್ನು ಮನೆಗೆ ಕಳುಹಿಸಲು ಒಂದೇ ಆಂಬುಲೆನ್ಸ್ ಬಳಕೆ ಮಾಡುತ್ತಿರುವ ಬಗ್ಗೆ ಮಾಹಿತಿ ಇದೆ. ಆದರೆ, ಯಾವುದೇ ಕಾರಣಕ್ಕೂ ಗುಣಮುಖರಾದವರನ್ನು ಸೋಂಕಿತರನ್ನು ಸಾಗಿಸುವ ಆಂಬುಲೆನ್ಸ್‌ನಲ್ಲಿ ಕಳುಹಿಸದೆ ಪ್ರತ್ಯೇಕ ಆಂಬುಲೆನ್ಸ್‌ನಲ್ಲೇ ಕಳುಹಿಸಿಕೊಡುವಂತೆ ಶಾಸಕ ಮಂಜುನಾಥ್ ಅಧಿಕಾರಿಗಳಿಗೆ ಸೂಚಿಸಿದರು.
    ಬ್ಲ್ಯಾಕ್ ಫಂಗಸ್ ಔಷಧ ತರಿಸಿಕೊಳ್ಳಿ : 
    ರಾಮನಗರ ಜಿಲ್ಲೆಯಲ್ಲಿ ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ಅಗತ್ಯವಿರುವ ಆಂಫೊಟೆರಿಸಿನ್ ಬಿ ಔಷಧದ ಕೊರತೆ ಇರುವುದಾಗಿ ಅಧಿಕಾರಿಗಳು ತಿಳಿಸಿದರು. ಈ ವಿಚಾರವಾಗಿ ಸರ್ಕಾರದ ಮೇಲೆ ಒತ್ತಡ ಹೇರುತ್ತಿರುವುದಾಗಿ ಎಚ್‌ಡಿಕೆ ತಿಳಿಸಿದರು. ಅಲ್ಲದೆ, ಅಧಿಕಾರಿಗಳೂ ಒತ್ತಡ ಹಾಕಿ ಔಷಧ ತರಿಸಿಕೊಳ್ಳುವುದರ ಕಡೆಗೆ, ಅದನ್ನು ದಾಸ್ತಾನು ಮಾಡುವ ಬಗ್ಗೆ ಗಮನಹರಿಸಬೇಕಾಗಿ ತಿಳಿಸಿದರು. ಅಲ್ಲದೆ, ಯಾವುದೇ ಸಂದರ್ಭದಲ್ಲಿಯೂ ನೆರವಿನ ಅಗತ್ಯವಿದ್ದರೆ ದೂರವಾಣಿ ಮೂಲಕ ಸಂಪರ್ಕಿಸಿದರೆ ಖಂಡಿತವಾಗಿ ಸ್ಪಂದಿಸುವುದಾಗಿ ಭರವಸೆ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts