26.8 C
Bangalore
Friday, December 13, 2019

ಸೌಕೂರು ಜ್ಯೋತಿಷಿ ಭೇಟಿಯಾದ ಎಚ್‌ಡಿಕೆ

Latest News

ಶಬರಿಮಲೆ ವಿಚಾರದಲ್ಲಿ ಸದ್ಯ ಯಾವುದೇ ಆದೇಶವನ್ನು ಹೊರಡಿಸಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್​

ನವದೆಹಲಿ: ಪೊಲೀಸ್​ ರಕ್ಷಣೆಯೊಂದಿಗೆ ಶಬರಿಮಲೆ ಅಯ್ಯಪ್ಪನ ಸನ್ನಿಧಿಯನ್ನು ಮಹಿಳೆಯರು ಸುರಕ್ಷಿತವಾಗಿ ಪ್ರವೇಶಿಸಲು ಕೇರಳ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಇಬ್ಬರು ಮಹಿಳಾ ಕಾರ್ಯಕರ್ತರು ಸಲ್ಲಿಸಿದ್ದ...

ತುಮಕೂರು ಸ್ಮಾರ್ಟ್‌ಸಿಟಿ ಜೆಎಂಡಿ ಎತ್ತಂಗಡಿ!

ತುಮಕೂರು: ಸ್ಮಾರ್ಟ್‌ಸಿಟಿ ಲಿಮಿಟೆಡ್ ಜಂಟಿ ವ್ಯವಸ್ಥಾಪಕ ನಿರ್ದೇಶಕ ವಿ.ಅಜಯ್ ಅವರನ್ನು ಎತ್ತಂಗಡಿ ಮಾಡಲಾಗಿದೆ. 3 ತಿಂಗಳ ಹಿಂದೇ ಸ್ಮಾರ್ಟ್‌ಸಿಟಿ ಎಂಡಿ ಜವಾಬ್ದಾರಿ ಹೊಣೆ ಹೊತ್ತಿದ್ದ ಮಹಾನಗರ...

ಕುಪ್ಪೂರು ಶ್ರೀ ಮರುಳಸಿದ್ದೇಶ್ವರ ಜಾತ್ರೆಗೆ ಸಿಎಂ ಯಡಿಯೂರಪ್ಪ ಚಾಲನೆ

ಚಿಕ್ಕನಾಯಕನಹಳ್ಳಿ: ಸುಕ್ಷೇತ್ರ ಕುಪ್ಪೂರು ಶ್ರೀಮರುಳಸಿದ್ದೇಶ್ವರ ಗದ್ದುಗೆ ಜಾತ್ರೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಗುರುವಾರ ಚಾಲನೆ ನೀಡಿದ್ದು, ನಾಡಿನ ವಿವಿಧೆಡೆಯಿಂದ ಸಾವಿರಾರು ಭಕ್ತರು ಜಾತ್ರೆಗೆ ಬಂದಿದ್ದರು. ಶ್ರೀಮಠದ ಆವರಣದಲ್ಲಿ ಗುರುವಾರ...

ಬಲರಾಮ್ ಕುಣಿಗಲ್ ಬಿಜೆಪಿ ಅಧ್ಯಕ್ಷ

ಕುಣಿಗಲ್: ತಾಲೂಕು ಬಿಜೆಪಿ ನೂತನ ಅಧ್ಯಕ್ಷರಾಗಿ ತಾಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಎಸ್.ಬಲರಾಮ್ ಗುರುವಾರ ಅವಿರೋಧ ಆಯ್ಕೆಯಾದರು. ಪಟ್ಟಣದ ದಿಶಾ ಪಾರ್ಟಿ ಹಾಲ್‌ನಲ್ಲಿ ರಾಜ್ಯ ಬಿಜೆಪಿ...

ಭಾರತದ ಪ್ರಗತಿಗೆ ಬೇಕು ವೈಜ್ಞಾನಿಕ ಶಿಕ್ಷಣ: ಡಾ.ಡಿ.ವಿ.ಗೋಪಿನಾಥ್

ದಾವಣಗೆರೆ: ಭಾರತದ ಪ್ರಗತಿಗೆ ವೈಜ್ಞಾನಿಕ ಶಿಕ್ಷಣ ಅತ್ಯವಶ್ಯ ಎಂದು ಮುಂಬೈನ ಭಾಭಾ ಅಣು ಸಂಶೋಧನಾ ಕೇಂದ್ರದ ಜೀವ ವೈದ್ಯಕೀಯ ವಿಭಾಗದ ನಿವೃತ್ತ ನಿರ್ದೇಶಕ ಡಾ.ಡಿ.ವಿ.ಗೋಪಿನಾಥ್ ಹೇಳಿದರು. ಪಾರ್ವತಮ್ಮ...

< ಐಟಿ ದಾಳಿ ಮಾನಸಿಕ ಒತ್ತಡ ನಿವಾರಣೆಗಾಗಿ ದ್ವಾರಕಾನಾಥ್ ಸಲಹೆ ಪಾಲನೆ>

ಕುಂದಾಪುರ: ಮೈತ್ರಿ ಪಕ್ಷದ ಅಭ್ಯರ್ಥಿಗಳ ಮೇಲೆ ಮಾನಸಿಕ ಒತ್ತಡ ಕೊಡುವ ಉದ್ದೇಶದಲ್ಲಿ ಬಿಜೆಪಿ ಕೃಪಾಪೋಷಿತ ಐಟಿ ದಾಳಿ ನಡೆಯುತ್ತಿದ್ದು, ದ್ವಾರಕನಾಥ್ ಸಲಹೆ ಮೇರೆಗೆ ಸೌಕೂರು ಜ್ಯೋತಿಷಿಯನ್ನು ಭೇಟಿಯಾಗಿರುವುದಾಗಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಸೌಕೂರಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸೌಕೂರು ಬೀದಿ ಮನೆಯ ಜ್ಯೋತಿಷಿ ಸೊಕ್ಕೊಟ್ಟು ಮಂಜುನಾಥಯ್ಯ (ಹೆಬ್ಬಾರ್) ಅವರ ಮನೆಗೆ ಗುರುವಾರ ರಾತ್ರಿ ಭೇಟಿ ನೀಡಿದ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

1985ರಲ್ಲಿ ತಂದೆ ಎಚ್.ಡಿ.ದೇವೇಗೌಡರು ಸೌಕೂರಿನ ಸೊಕ್ಕೊಟ್ಟು ಮಂಜುನಾಥಯ್ಯ ಅವರ ಮನೆಗೆ ಭೇಟಿ ನೀಡಿದ್ದರು. ಅವರ ಆಶೀರ್ವಾದ ಪಡೆದುಕೊಳ್ಳಲು ಆಗಮಿಸಿದ್ದೇನೆ. ಈ ಭೇಟಿಗೆ ಯಾವುದೇ ವಿಶೇಷ ಅರ್ಥ ಕಲ್ಪಿಸುವುದು ಬೇಡ ಎಂದು ಹೇಳಿದರು.

ಜ್ಯೋತಿಷಿ ಸೊಕ್ಕೊಟ್ಟು ಮಂಜುನಾಥಯ್ಯ ಮಾತನಾಡಿ, ಬೆಂಗಳೂರು ಪ್ರಸಿದ್ಧ ಜ್ಯೋತಿಷಿ ರಾಜಗುರು ದ್ವಾರಕನಾಥ ಹಾಗೂ ನಾವು ಹಲವು ವರ್ಷಗಳಿಂದ ಪರಿಚಿತರಾಗಿದ್ದು, ಧರ್ಮ ಸೂಕ್ಷ್ಮ ವಿಚಾರಗಳನ್ನು ನಾವು ಪರಸ್ಪರ ಚರ್ಚಿಸುತ್ತೇವೆ. ಅವರ ಸಲಹೆಯಂತೆ ಮುಖ್ಯಮಂತ್ರಿ ನಮ್ಮಲ್ಲಿಗೆ ಆಗಮಿಸಿದ್ದಾರೆ ಎಂದು ತಿಳಿಸಿದರು.
ವಿಧಾನಪರಿಷತ್ ಸದಸ್ಯ ಎಸ್.ಎಲ್.ಭೋಜೇ ಗೌಡ, ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ, ಕಿಶೋರ ಬಲ್ಲಾಳ್ ಕುಂದಾಪುರ, ಸಬ್ಲಾಡಿ ಮಂಜಯ್ಯ ಶೆಟ್ಟಿ ಇದ್ದರು.

ವಾಮಮಾರ್ಗದಿಂದ ಪ್ರತಿಪಕ್ಷಗಳ ಮಣಿಸುವ ಯತ್ನ: ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ನಮ್ಮ ಕುಟುಂಬ ಸದಸ್ಯರು ಹಾಗೂ ಮೈತ್ರಿ ಪಕ್ಷದ ಅಭ್ಯರ್ಥಿಗಳ ಮಾನಸಿಕ ಸ್ಥೈರ್ಯ ಕುಂದಿಸಲು ಬಿಜೆಪಿ ಸರ್ಕಾರ ನಿರಂತರವಾಗಿ ಐಟಿ ದಾಳಿ ಸಂಘಟಿಸುತ್ತಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಇರುವ ಇಲಾಖೆಗಳನ್ನು ಬಳಸಿಕೊಂಡು ಅಧಿಕಾರ ದುರುಪಯೋಗ ಮಾಡಿಕೊಂಡು ನಮ್ಮನ್ನು ಧೃತಿಗೆಡಿಸುವ ಯಾವ ಪ್ರಯತ್ನಗಳು ಯಶಸ್ಸು ಕಾಣುವುದಿಲ್ಲ ಎಂದು ಸಿಎಂ ಕುಮಾರಸ್ವಾಮಿ ಹೇಳಿದರು.

ವ್ಯವಸ್ಥಿತ ದಾಳಿಯಿಂದ ಯಾವುದೇ ರೀತಿಯ ಆತಂಕಕ್ಕೆ ಒಳಗಾಗಿಲ್ಲ. ಕಳೆದ ಒಂದು ತಿಂಗಳಿಂದ ಚುನಾವಣಾ ಕಾರ್ಯಗಳಿಗಾಗಿ ಹೆಲಿಕಾಪ್ಟರ್ ಬಳಕೆಗೆ ಅನುಮತಿ ಕೇಳುತ್ತಿದ್ದರೂ ವಿಪಕ್ಷ ನಾಯಕರಿಗೆ ಹೆಲಿಕಾಪ್ಟರ್ ದೊರಕುತ್ತಿಲ್ಲ. ಕೇವಲ ಕರ್ನಾಟಕದಲ್ಲಿ ಮಾತ್ರವಲ್ಲ ಆಂಧ್ರ ಪ್ರದೇಶದಲ್ಲಿಯೂ ಇದೇ ಪರಿಸ್ಥಿತಿ ಇದೆ. ಕೇಂದ್ರದ ಇಲಾಖೆಗಳನ್ನು ಬಳಸಿಕೊಂಡು ಪ್ರಜಾಪ್ರಭುತ್ವ ವಿರೋಧಿ ನೀತಿಯಿಂದ ವಿಪಕ್ಷವನ್ನು ಮಣಿಸಬಹುದು ಎಂಬ ಬಿಜೆಪಿ ಪಕ್ಷಕ್ಕೆ ಕಾಲವೇ ಉತ್ತರ ನೀಡಲಿದೆ ಎಂದರು.

ಇಲೆಕ್ಟ್ರಾನಿಕ್ಸ್ ಮಾಧ್ಯಮಗಳ ವೈಭವೀಕರಣದಿಂದಾಗಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಹೈ ವೋಲ್ಟೇಜ್ ಚುನಾವಣೆ ಎಂದು ಬಿಂಬಿಸಲಾಗುತ್ತಿದೆ. ಚಿತ್ರನಟರ ಉಪಸ್ಥಿತಿಗಳಿಗೆ ವಿಪರೀತ ಪ್ರಚಾರ ನೀಡಲಾಗುತ್ತಿದೆ. ಆದರೆ ಅಲ್ಲಿನ ವಾಸ್ತವ ಸ್ಥಿತಿ ಬೇರೆ ಇದೆ. ಜನ ಪ್ರತಿ ಬಾರಿಯ ಚುನಾವಣೆಯಂತೆ ಈ ಬಾರಿಯ ಚುನಾವಣೆ ನೋಡುತ್ತಿದ್ದಾರೆ. ಮಂಡ್ಯ, ಹಾಸನ, ತುಮಕೂರು ಸೇರಿದಂತೆ ಜೆಡಿಎಸ್ ಅಭ್ಯರ್ಥಿಗಳು ಸ್ಪರ್ಧಿಸುವ ಹಾಗೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸುತ್ತಿರುವ ಕ್ಷೇತ್ರಗಳಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿಗಳ ಕುರಿತು ಒಲವು ಹೆಚ್ಚುತ್ತಿರುವುದರಿಂದ ಬಿಜೆಪಿ ವಾಮಮಾರ್ಗದಿಂದ ಚುನಾವಣೆ ಗೆಲ್ಲುವ ಹುನ್ನಾರ ನಡೆಸಿದೆ ಎಂದು ಆರೋಪಿಸಿದರು.

ನಾಡಿದ್ದು ಸಿಎಂ ಸುಳ್ಯಕ್ಕೆ:  ದ.ಕ. ಲೋಕಸಕ್ಷಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಮಿಥುನ್ ರೈ ಪರ ಏ.7ರಂದು ಸಂಜೆ ಸುಳ್ಯದಲ್ಲಿ ಪ್ರಚಾರ ಸಮಾವೇಶ ನಡೆಯಲಿದ್ದು, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭಾಗವಹಿಸಲಿದ್ದಾರೆ ಎಂದು ಸಚಿವ ಯು.ಟಿ. ಖಾದರ್ ಸುದ್ದಿಗಾರರಿಗೆ ತಿಳಿಸಿದರು.

Stay connected

278,748FansLike
588FollowersFollow
626,000SubscribersSubscribe

ವಿಡಿಯೋ ನ್ಯೂಸ್

VIDEO| ಬರೋಬ್ಬರಿ 20 ಕೆ.ಜಿ. ತೂಕದ ಹೆಬ್ಬಾವು ಸೆರೆಹಿಡಿದ ಮಹಿಳೆ:...

ತಿರುವನಂತಪುರ: ಮಹಿಳೆಯೊಬ್ಬರು ಸುಮಾರು 20 ಕೆ.ಜಿ. ತೂಗುವ ಬೃಹದಾಕಾರದ ಹೆಬ್ಬಾವನ್ನು ಸೆರೆಹಿಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಮೆಚ್ಚುಗೆ ಮಹಾಪೂರ ಹರಿದುಬಂದಿದೆ. ವಿಡಿಯೋದಲ್ಲಿರುವ ಮಹಿಳೆಯನ್ನು ಕೊಚ್ಚಿ ಮೂಲದ ವನ್ಯಜೀವಿ ಸಂರಕ್ಷಕಿ...

ಅತ್ಯಾಚಾರ ಪ್ರಕರಣ ಕುರಿತು ರಾಹುಲ್​ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ಗದ್ದಲ:...

ನವದೆಹಲಿ: ಅತ್ಯಾಚಾರ ಪ್ರಕರಣ ಕುರಿತು ಗುರುವಾರ ಜಾರ್ಖಂಡ್​ ಸಮಾವೇಶದಲ್ಲಿ ಕಾಂಗ್ರೆಸ್​ ಮಾಜಿ ಅಧ್ಯಕ್ಷ ಹಾಗೂ ವಯನಾಡಿನ ಹಾಲಿ ಸಂಸದ ರಾಹುಲ್​ ಗಾಂಧಿ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ....

VIDEO: 8 ಅಡಿ ಉದ್ದದ ಹೆಬ್ಬಾವನ್ನು ರಕ್ಷಿಸಲು 40 ಅಡಿ...

ತ್ರಿಶೂರ್​: ಇಲ್ಲೋರ್ವ ಯುವಕ ಬಾವಿಯಲ್ಲಿ ಬಿದ್ದಿದ್ದ ಹೆಬ್ಬಾವನ್ನು ರಕ್ಷಿಸಲು ಹಗ್ಗದ ಮೂಲಕ ಕೆಳಗೆ ಇಳಿದು ಬಳಿಕ ಅಪಾಯಕ್ಕೆ ಸಿಲುಕಿದ ವಿಡಿಯೋವೊಂದು ವೈರಲ್​ ಆಗಿದೆ. ಈ ಘಟನೆ ನಡೆದಿದ್ದು ಕೇರಳದ ತ್ರಿಶೂಲ್​ನಲ್ಲಿ ಎನ್ನಲಾಗಿದೆ. ವಿಡಿಯೋದಲ್ಲಿ ಇರುವ...

VIDEO| ಲಕ್ಷ್ಯದ ಜೊತೆಯಲಿ ಅನಿರುದ್ಧ್; ಡೈಲಾಗ್​ ಟೀಸರ್​ ಬಿಡುಗಡೆ

ಬೆಂಗಳೂರು: ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಕನ್ನಡಿಗರ ಮನೆಮನ ಗೆದ್ದಿರುವ ನಟ ಅನಿರುದ್ಧ್ ಈಗ ‘ಲಕ್ಷ್ಯ’ಗೆ ಜತೆಯಾಗಿದ್ದಾರೆ. ಅಂದರೆ ‘ಲಕ್ಷ್ಯ’ ಸಿನಿಮಾದ ಡೈಲಾಗ್ ಟೀಸರ್ ಬಿಡುಗಡೆ ಮಾಡುವ ಮೂಲಕ ಅವರು ಚಿತ್ರತಂಡದ ಜತೆ...

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....