More

  ದೇವೇಗೌಡರಿಗೂ ತಟ್ಟಿದ ಎಚ್​ಡಿಕೆ ದಾರಿ ತಪ್ಪಿದ ಹೇಳಿಕೆ: ಕಾಂಗ್ರೆಸ್​ ಮಹಿಳಾ ಕಾರ್ಯಕರ್ತೆಯರ ಹೈಡ್ರಾಮಾ

  ತುಮಕೂರು: ಗ್ಯಾರಂಟಿಗಳಿಂದ ಹೆಣ್ಣು ಮಕ್ಕಳು ದಾರಿ ತಪ್ಪಿದ್ದಾರೆ ಎಂಬ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವ ಹೇಳಿಕೆ ಸಂಬಂಧ ಇದೀಗ ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡ ಕಾರ್ಯಕ್ರಮಕ್ಕೂ ಬಿಸಿ ತಟ್ಟಿದೆ.

  ಇದನ್ನೂ ಓದಿ: ಎಲ್ಲರೂ ಪಶ್ಚಾತ್ತಾಪ ಪಡುತ್ತಾರೆ: ಚುನಾವಣಾ ಬಾಂಡ್ ರದ್ದತಿ ಬಗ್ಗೆ ಪ್ರಧಾನಿ ಮೋದಿ ಟೀಕೆ

  ಮಾಜಿ ಪ್ರಧಾನಿ ದೇವೇಗೌಡರ ನೇತೃತ್ವದಲ್ಲಿ ಕುಂಚಿಟಿಗರ ಸಮುದಾಯ ಭವನದಲ್ಲಿ ನಡೆಯುತ್ತಿದ್ದ ಮೈತ್ರಿ ಸಮಾವೇಶದಲ್ಲಿ ಕಾಂಗ್ರೆಸ್ ಕಾರ್ಯಕರ್ತೆಯರಿಂದ ಹೈಡ್ರಾಮಾ ಮಾಡಲಾಗಿದೆ. ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ಸಭೆಗೆ ಇಬ್ಬರು ಕಾಂಗ್ರೆಸ್​ ಕಾರ್ಯಕರ್ತರು ಆಗಮಿಸಿ ಧಿಕ್ಕಾರ ಕೂಗುವ ಮೂಲಕ ಪ್ರಚಾರ ಸಭೆಯಲ್ಲಿ ಕೆಲ ಕಾಲ ಗೊಂದಲ ಉಂಟು ಮಾಡಿದರು.

  ಈ ಘಟನೆ ಕುರಿತು ತುಮಕೂರು ಮೈತ್ರಿ ಅಭ್ಯರ್ಥಿ ವಿ ಸೋಮಣ್ಣ ಮಾತನಾಡಿ, ಹತಾಶ ಮನೋಭಾವನೆಯಿಂದ ಹೀಗೆ ಮಾಡಿದ್ದಾರೆ, ಎಷ್ಟರ ಮಟ್ಟಿಗೆ ಸರಿ. ಮಾಜಿ ಸಿಎಂ H.D.ಕುಮಾರಸ್ವಾಮಿ ಅವರೇ ಬೆಳಗ್ಗೆಯೇ ಸ್ಪಷ್ಟನೆ ಕೊಟ್ಟಿದ್ದಾರೆ. ಯಾರೋ ಹೆಣ್ಣು ಮಕ್ಕಳನ್ನ ಕಳಿಸಿ ಹೀಗೆ ಮಾಡಿದ್ದಾರೆ ಅಸಮಾಧಾನ ವ್ಯಕ್ತಪಡಿಸಿದರು.

  ಮಾಜಿ ಪ್ರಧಾನಿ ದೇವೇಗೌಡ ಅವರಿಗೆ ಹೀಗೆ ಮಾಡಿದ್ದಾರೆ, ಇದೆಲ್ಲಾ ಆಗಬಾರದು. ಬೇಕೆಂತಲೇ ಮಹಿಳೆಯರನ್ನು ಕಳಿಸಿದಾಗ ಪೊಲೀಸರು ಏನು ಮಾಡೋಕ್ಕೆ ಸಾಧ್ಯ. ನಾವೂ ಎಚ್ಚರ ವಹಿಸುತ್ತೇವೆ, ಪೊಲೀಸರು ಈ ಬಗ್ಗೆ ಗಮನಹರಿಸಲಿ ಎಂದು ಹೇಳಿದರು.

  ಲೋಕಸಮರ: ಚುನಾವಣಾ ಆಯೋಗದಿಂದ ಈವರೆಗೆ ಒಟ್ಟು 4,650 ರೂ. ಕೋಟಿಗೂ ಅಧಿಕ ನಗದು, ವಸ್ತುಗಳು ಜಪ್ತಿ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts