More

    ಮದ್ಯದಂಗಡಿ ಓಪನ್​, ಸಾಂತ್ವನ ಕೇಂದ್ರ ಕ್ಲೋಸ್​!- ಇದ್ಯಾವ ನ್ಯಾಯ? ಎಚ್​ಡಿಕೆ ಪ್ರಶ್ನೆ

    ಬೆಂಗಳೂರು: ಮಹಿಳೆಯರು ಮತ್ತು ಮಕ್ಕಳ ವಿಷಯದಲ್ಲಿ ಸರ್ಕಾರ ಮಾತು ತಪ್ಪಿದೆ. ನೊಂದ ಮಹಿಳೆಯರಿಗೆ ಆಸರೆಯಾಗಿದ್ದ ಸಾಂತ್ವನ ಕೇಂದ್ರಗಳನ್ನು ಮುಂದುವರಿಸುವುದಾಗಿ ಹೇಳಿದ್ದ ರಾಜ್ಯ ಸರ್ಕಾರ ಈ ಬಗ್ಗೆ ಮೌನಕ್ಕೆ ಶರಣಾಗಿದೆ ಎಂದು ಟೀಕಿಸಿದ ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ, ಸಾಂತ್ವನ ಕೇಂದ್ರಗಳನ್ನು ಯಾವುದೇ ಕಾರಣಕ್ಕೂ ಮುಚ್ಚಬಾರದು. ಅವುಗಳಿಗೆ ಈ ಕೂಡಲೇ ಅನುದಾನ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

    ಮಹಿಳೆಯರಿಗೆ ಆಸರೆಯಾಗಿದ್ದ ಸಾಂತ್ವನ ಕೇಂದ್ರಗಳಿಗೆ ಸರ್ಕಾರ ಬೀಗ ಜಡಿಯಲ್ಲ ಎಂದಿದ್ದ ಮುಖ್ಯಮಂತ್ರಿ ಇದುವರೆಗೂ ಸಾಂತ್ವನ ಕೇಂದ್ರಗಳಿಗೆ ಒಂದು ನಯಾಪೈಸೆ ಬಿಡುಗಡೆ ಮಾಡದಿರುವುದು ಕರೊನಾ ಸಂಕಷ್ಟದಲ್ಲಿ ಸ್ತ್ರೀಯರಿಗೆ ಮತ್ತೊಂದು ಬರೆ ಎಳೆದಂತಾಗಿದೆ. ಕೌಟುಂಬಿಕ ಹಿಂಸಾಚಾರ ನಿಯಂತ್ರಿಸಿ ಮಹಿಳೆಯರು ಮತ್ತು ಮಕ್ಕಳಿಗೆ ರಕ್ಷಣೆ ಒದಗಿಸುವ ವಿಶ್ವಸಂಸ್ಥೆಯ ಆಶಯ ಬದಿಗೊತ್ತಿರುವುದು ಖಂಡನೀಯ. ಎರಡು ದಶಕಗಳಿಂದ ಸಾಂತ್ವನ ಯೋಜನೆ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿದ್ದು, ಜಿಲ್ಲೆ ಮತ್ತು ತಾಲ್ಲೂಕು ಮಟ್ಟದಲ್ಲಿನ ಸಾಂತ್ವನ ಕೇಂದ್ರಗಳು ಮಹಿಳೆಯರ ಸಮಸ್ಯೆಗಳಿಗೆ ಧ್ವನಿಯಾಗಿ, ಆತ್ಮವಿಶ್ವಾಸ ಮೂಡಿಸುತ್ತಿವೆ ಎಂದು ತಿಳಿಸಿದ್ದಾರೆ.

    ಇದನ್ನೂ ಓದಿ: VIDEO| ಆ ಏರಿಯಾ ಪೂರ್ತಿ ಆಕೆಯದ್ದೇ ದರ್ಬಾರ್! ಯಾರಾದ್ರು ಹೋದ್ರೆ ಏನ್​ ಮಾಡ್ತಾಳೆ ಗೊತ್ತಾ?

    ಲಾಕ್‌ಡೌನ್ ಕಾಲದಲ್ಲಿ ಸಾಂತ್ವನ ಕೇಂದ್ರಗಳನ್ನು ಮುಚ್ಚಿ, ಮದ್ಯದಂಗಡಿಗಳನ್ನು ತೆರೆದು ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚಳಕ್ಕೆ ಸರ್ಕಾರವೇ ಅವಕಾಶ ಮಾಡಿಕೊಟ್ಟಿದೆ ಎಂದು ಆರೋಪಿಸಿದ ಅವರು, ರಾಜ್ಯದ ಪ್ರತಿ ಜಿಲ್ಲೆ ಹಾಗೂ ತಾಲ್ಲೂಕುಗಳಲ್ಲಿ ಆರಂಭಗೊಂಡಿದ್ದ ಸಾಂತ್ವನ ಕೇಂದ್ರಗಳ ಸಿಬ್ಬಂದಿಗೂ ವೇತನ ನೀಡಿಲ್ಲ. ದೂರು-ದುಮ್ಮಾನ ಪರಿಹರಿಸುವವರು ಯಾರು? ಎಂದು ಪ್ರಶ್ನಿಸಿದ್ದಾರೆ.

    1,200 ಕಿ.ಮೀ. ಚೇಸ್ ಮಾಡಿ ಕರ್ನಾಟಕದಲ್ಲಿ ಅರೆಸ್ಟ್​ ಮಾಡಿದ್ರು ಮುಂಬಯಿ ಪೊಲೀಸ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts