More

    ಸುಪ್ರೀಂಕೋರ್ಟ್ ಆದೇಶ ನಿಜಕ್ಕೂ ದುರದೃಷ್ಟಕರ; ಇಲ್ಲಿ ನ್ಯಾಯಾಲಯವನ್ನು ದೂರುವಂತಿಲ್ಲ: ಎಚ್​ಡಿಕೆ

    ಬೆಂಗಳೂರು: ನೀರಾವರಿ ಬಗ್ಗೆ ಕನಿಷ್ಠ ಜ್ಞಾನ, ತಿಳುವಳಿಕೆ ಇಲ್ಲದವರು ಅಧಿಕಾರದಲ್ಲಿದ್ದರೆ ಏನಾಗುತ್ತದೆ ಎನ್ನುವುದಕ್ಕೆ ಕಾವೇರಿ ಬಿಕ್ಕಟ್ಟು ಸ್ಪಷ್ಟ ಉದಾಹರಣೆ. ಸುಪ್ರೀಂಕೋರ್ಟ್ ಆದೇಶ ನಿಜಕ್ಕೂ ದುರದೃಷ್ಟಕರ. ಆದರೆ, ಇಲ್ಲಿ ನ್ಯಾಯಾಲಯವನ್ನು ದೂರುವಂತಿಲ್ಲ ಎಂದು ಮಾಜಿ ಸಿಎಂ, ಜೆಡಿಎಸ್ ನಾಯಕ​ ಎಚ್​.ಡಿ. ಕುಮಾರಸ್ವಾಮಿ ಹೇಳಿದರು.

    ಇದನ್ನೂ ಓದಿ: ಅಪರೂಪದ ಸಮಸ್ಯೆಯಿಂದ ಬಳಲುತ್ತಿದ್ದ ಪಾಕಿಸ್ತಾನದ​ ಮಗುವಿಗೆ ಮರುಜೀವ ನೀಡಿದ ಬೆಂಗಳೂರು ವೈದ್ಯರು

    ಹೆಜ್ಜೆ ಹೆಜ್ಜೆಗೂ ತಪ್ಪು ಮಾಡಿದ್ದು, ಕಾಂಗ್ರೆಸ್​ ಸರ್ಕಾರ ಈ ಮಾತನ್ನು ನಾನು ಸರ್ವಪಕ್ಷ ಸಭೆಯಲ್ಲೇ ಒತ್ತಿ ಹೇಳಿದ್ದೆ. ಕಾವೇರಿ ಜಲ ನಿಯಂತ್ರಣ ಸಮಿತಿ ಹಾಗೂ ಪ್ರಾಧಿಕಾರದ ನಿರ್ದೇಶನ ಬರುವುದಕ್ಕೂ ಮೊದಲೂ ಹೇಳಿದ್ದೆ. ಹೇಳಿದ ಮಾತನ್ನು ಕೇಳಿಸಿಕೊಳ್ಳುವ ಸೌಜನ್ಯ, ಜನಪರ ಕಾಳಜಿ ಸರಕಾರಕ್ಕೆ ಇರಲೇ ಇಲ್ಲ ಎಂದು ಹೇಳಿದರು.

    ರಾಜ್ಯ ಸರಕಾರಕ್ಕೆ ಜನ ಹಿತಕ್ಕಿಂತ ರಾಜಕೀಯ ಹಿತವೇ ಮುಖ್ಯವಾಗಿದೆ. ತಮಿಳುನಾಡಿನ ಜತೆ ಆ ಪಕ್ಷದ ರಾಜಕೀಯ ಹಿತಾಸಕ್ತಿ ತಳುಕು ಹಾಕಿಕೊಂಡ ಕಾರಣಕ್ಕೆ ಕಾವೇರಿ ಹಿತವನ್ನು ವ್ಯವಸ್ಥಿತವಾಗಿ ಬಲಿ ಕೊಡಲಾಗಿದೆ. ಆ.10 ರಂದು ಕಾವೇರಿ ಜಲ ನಿಯಂತ್ರಣ ಸಮಿತಿ ಸಭೆ ನಡೆಯಿತು. ಮರುದಿನ ಕಾವೇರಿ ಜಲನಿರ್ವಹಣಾ ಪ್ರಾಧಿಕಾರ ಸಭೆ ಆಯಿತು. ಮುಂದಿನ 15 ದಿನ ತಮಿಳುನಾಡಿಗೆ 5000 ಕ್ಯೂಸೆಕ್ ನೀರು ಬಿಡಿ ಎಂದು ಪ್ರಾಧಿಕಾರ ರಾಜ್ಯಕ್ಕೆ ಸೂಚನೆ ನೀಡಿತು ಎಂದು ಮಾಜಿ ಸಿಎಂ ಹೇಳಿದರು.

    ಇದನ್ನೂ ಓದಿ:  12 ಕೋಟಿ ರೂ ವೆಚ್ಚದಲ್ಲಿ ಡಿಸಿಸಿ ಬ್ಯಾಂಕ್ ನೂತನ ಕಟ್ಟಡ ನಿರ್ಮಾಣ: ಶಾಸಕ ರವಿಕುಮಾರ್ ಗಣಿಗ ಮಾಹಿತಿ

    ತಕ್ಷಣವೇ ಸುಪ್ರೀಂಕೋರ್ಟಿಗೆ ತುರ್ತು ಅರ್ಜಿ ಸಲ್ಲಿಸಿ, ನ್ಯಾಯಾಲಯಕ್ಕೆ ವಾಸ್ತವ ಸ್ಥಿತಿ ಮನವರಿಕೆ ಮಾಡಿಕೊಡಬೇಕಿತ್ತು. ಸರಕಾರ ಹಾಗೆ ಮಾಡಲೇ ಇಲ್ಲ. ಕೋರ್ಟ್​ ಕಡೆ ಮುಖ ಮಾಡದೆ I.N.D.I.A ಮೈತ್ರಿಕೂಟಕ್ಕೆ ಶಕ್ತಿ ತುಂಬಲು ಪ್ರಾಧಿಕಾರದ ಆದೇಶವನ್ನೇ ನೆಪ ಮಾಡಿಕೊಂಡು ತಮಿಳುನಾಡಿಗೆ ನೀರು ಹರಿಸಲು ಆದೇಶಿಸಿತು. ತನ್ನ ತಲೆ ಮೇಲೆ ತಾನೇ ಚಪ್ಪಡಿ ಎಳೆದುಕೊಂಡು, ಅದೇ ಚಪ್ಪಡಿಯನ್ನು ಕನ್ನಡಿಗರ ಮೇಲೆಯೂ ಎಳೆದುಬಿಟ್ಟಿತು ಎಂದು ಹೇಳಿದರು.

    ಸರಕಾರ ಎಸಗಿದ ತಪ್ಪು ಇಷ್ಟೇ ಅಲ್ಲ, ನಿಯಂತ್ರಣ ಸಮಿತಿ ಹಾಗೂ ಪ್ರಾಧಿಕಾರದ ಸಭೆಗಳನ್ನು ಬಹಳ ಲಘುವಾಗಿ ಪರಿಗಣಿಸಿತು. ಸರ್ವಪಕ್ಷ ಸಭೆಯಲ್ಲಿ ವಿರೋಧ ಪಕ್ಷಗಳ ನಾಯಕರು ಕೊಟ್ಟ ಸಲಹೆಗಳನ್ನೂ ಗಾಳಿಗೆ ತೂರಿತು. ನಮ್ಮ ಸಲಹೆಗೆ ಕವಡೆ ಕಾಸಿನ ಕಿಮ್ಮತ್ತೂ ಕೊಡದೆ ಕನ್ನಡಿಗರ ಹಿತವನ್ನು ತನ್ನ ರಾಜಕೀಯ ಸ್ವಾರ್ಥಕ್ಕೆ ಬಲಿ ಮಾಡಿತು. ಕಾವೇರಿ ವಿಷಯ ಕೋರ್ಟಿನಲ್ಲಿ ಬಗೆಹರಿಯುವುದಿಲ್ಲ ಎಂದು ನಾನು ಹೇಳಿದ್ದೆ. ಈಗ ತಮಿಳುನಾಡಿಗೆ ಅನುಕೂಲವಾಗಿದೆ, ನಮಗೆ ಅನ್ಯಾಯವಾಗಿದೆ. ಈ ತಿಕ್ಕಾಟ ಸಾಗುತ್ತಿರುವ ದಿಕ್ಕು ನೋಡಿದರೆ ಒಕ್ಕೂಟ ವ್ಯವಸ್ಥೆಗೆ ಗೌರವ ಸಿಗುವಂತಿಲ್ಲ. ಬಹಳ ನೋವಿನಿಂದ ಈ ಮಾತು ಹೇಳುತ್ತಿದ್ದೇನೆ ಎಂದು ಬೇಸರ ವ್ಯಕ್ತಪಡಿಸಿದರು.

    ಇದನ್ನೂ ಓದಿ:  ಕಾವೇರಿ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಆಡುತ್ತಿರುವ ಕಪಟ ನಾಟಕ ಸಾಕು: ನಟ ನಿಖಿಲ್​ ಕುಮಾರಸ್ವಾಮಿ ಕಿಡಿ

    ರಾಜ್ಯಸಭೆಯಲ್ಲಿ ಎಚ್​.ಡಿ. ದೇವೇಗೌಡ ಅವರು ತಮ್ಮ ಇಳಿ ವಯಸ್ಸಿನಲ್ಲಿಯೂ ಕಾವೇರಿ ಬಗ್ಗೆ ದನಿ ಎತ್ತಿದರು. ಮಾನ್ಯ ಸಭಾಪತಿಗಳು ಕುಳಿತೇ ಮಾತನಾಡಿ ಎಂದರೂ ಅವರು ಎದ್ದು ನಿಂತು ರಾಜ್ಯದ ಪರ ಹಕ್ಕು ಮಂಡಿಸಿದರು. ಆದ್ರೆ, ರಾಜ್ಯದ ಇತರೆ ಸದಸ್ಯರು, ಅದರಲ್ಲಿಯೂ ಮಲ್ಲಿಕಾರ್ಜುನ ಖರ್ಗೆ ಅವರು ಮೌನವಾಗಿದ್ದರು! ಈ ಮೌನ ನನಗೆ ಅಚ್ಚರಿ ಉಂಟು ಮಾಡಿದೆ. ಅವರು ಕಾಂಗ್ರೆಸ್​ ಅಧ್ಯಕ್ಷರು ಹೌದು. ಕರ್ನಾಟಕದ ಹಿತದ ಬಗ್ಗೆ ಅವರ ನಿಲುವೇನು? ಎಂದು ಎಚ್​ಡಿಕೆ ಪ್ರಶ್ನಿಸಿದ್ದಾರೆ.

    ಖ್ಯಾತ ನಿರ್ಮಾಪಕನ ಜತೆ ಬಹುಭಾಷಾ ನಟಿ ತ್ರಿಷಾ ಮದುವೆ? ಶೀಘ್ರದಲ್ಲೇ ಘೋಷಣೆ ಸಾಧ್ಯತೆ

    ರಾಜ್ಯೋತ್ಸವ ರಸಪ್ರಶ್ನೆ - 21

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts