More

    ‘ವಿಪಕ್ಷ ನಾಯಕ ಸಿದ್ದರಾಮಯ್ಯ ಈ ಶತಮಾನದ ಮಹಾ ಸುಳ್ಳುಗಾರ…’

    ಬೆಂಗಳೂರು: ‘ಬಿಜೆಪಿ ಸರ್ಕಾರದ ವಿರುದ್ಧ ಅವಿಶ್ವಾಸ ಮಂಡನೆ ಸಂಬಂಧ ಜೆಡಿಎಸ್​ ಜತೆ ಚರ್ಚೆ ನಡೆಸಿದ್ದೆವು ಎನ್ನುವ ಮೂಲಕ “ಈ ಶತಮಾನದ ಮಹಾ ಸುಳ್ಳುಗಾರ” ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ವಯಂ ಘೋಷಿಸಿಕೊಂಡಿದ್ದಾರೆ’ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಟಾಂಗ್​ ಕೊಟ್ಟಿದ್ದಾರೆ.

    ‘ಅವಿಶ್ವಾಸ ಮಂಡನೆಗೆ ಮಣ್ಣಿನ ಮಕ್ಕಳು ಎಂದು ಹೇಳಿಕೊಳ್ಳುವವರಿಂದ ಬೆಂಬಲ ಸಿಗಲಿಲ್ಲವೆಂದು ಸಿದ್ದರಾಮಯ್ಯ ಹಸಿಸುಳ್ಳು ಹೇಳಿದ್ದಾರೆ. ಕಳೆದ ಶತಮಾನದಲ್ಲಿ ಕಾಂಗ್ರೆಸ್​ ಮಾಜಿ ಮುಖ್ಯಮಂತ್ರಿ ಒಬ್ಬರಿಗೆ ಅಂಟಿದ್ದ “ಮಹಾನ್​ ಸುಳ್ಳುಗಾರ” ಎಂಬ ಕಳಂಕವನ್ನು ತಾನಾಗಿಯೇ ಕಸಿದುಕೊಂಡಿರುವ ಸಿದ್ದರಾಮಯ್ಯ ಈ ಶತಮಾನದ ಮಹಾನ್​ ಸುಳ್ಳುಗಾರರಾಗಿ ಹೊರಹೊಮ್ಮಿದ್ದಾರೆ’ ಎಂದು ಎಚ್​ಡಿಕೆ ಲೇವಡಿ ಮಾಡಿದ್ದಾರೆ. ‘ಜೆಡಿಎಸ್​ನೊಂದಿಗೆ ಯಾವುದೇ ಮಾತುಕತೆ ನಡೆಸದೆ ಸಿದ್ದರಾಮಯ್ಯ ಹಸಿಸುಳ್ಳು ಹೇಳುವ ಮೂಲಕ “ಕೇಡುಗಾಲಕ್ಕೆ ನಾಯಿ ಮೊಟ್ಟೆ ಇಟ್ಟಂತೆ” ಎಲುಬಿಲ್ಲದ ನಾಲಿಗೆಯನ್ನು ಹರಿಯಬಿಟ್ಟು ನಗೆಪಾಟಲಿಗೆ ಈಡಾಗಿದ್ದಾರೆ. ಬಾಯಿ ಚಪಲಕ್ಕೆ ಸುಳ್ಳುಗಳನ್ನು ಹೇಳುವ ಚಾಳಿಯನ್ನು ಸಿದ್ದರಾಮಯ್ಯ ಇನ್ನಾದರೂ ಬಿಡಬೇಕು’ ಎಂದು ಸರಣಿ ಟ್ವೀಟ್​ ಮಾಡಿದ್ದಾರೆ.

    'ವಿಪಕ್ಷ ನಾಯಕ ಸಿದ್ದರಾಮಯ್ಯ ಈ ಶತಮಾನದ ಮಹಾ ಸುಳ್ಳುಗಾರ...'ಸಂತೆ ಭಾಷಣದ ಸಿದ್ದರಾಮಯ್ಯ: ರೈತರ ಪರ ಕಾಳಜಿ, ಬದ್ಧತೆಯನ್ನು ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್​ ನಾಯಕರಿಂದ ಜೆಡಿಎಸ್​ ಕಲಿಯಬೇಕಾದದ್ದು ಏನೂ ಇಲ್ಲ. ಸಂತೆ ಭಾಷಣ ಮಾಡುವ ಸಿದ್ದರಾಮಯ್ಯ ವಿದೂಷಕನಂತೆ ಜೆಡಿಎಸ್​ ವಿರುದ್ಧ ಹರಿಹಾಯುತ್ತಿರುವುದು ಪ್ರತಿಪಕ್ಷದ ನಾಯಕನಿಗೆ ಭೂಷಣವಲ್ಲ ಎಂದು ಕುಮಾರಸ್ವಾಮಿ ಟೀಕಿಸಿದ್ದಾರೆ.

    ಮಂಡ್ಯದ ಮೂಲಕ ಇಂಡಿಯಾ ಹಿಡಿಯುವ ಹಗಲು ಕನಸು ಕಾಣುತ್ತಿರುವ ಕಾಂಗ್ರೆಸ್ಸಿಗರು ಅನ್ನದಾತನ ಅಸ್ತ್ರ ಬಳಸಿದರೆ ಮಂಡ್ಯದ ಮಣ್ಣಿನ ಮಕ್ಕಳು ತಕ್ಕ ಪಾಠ ಕಲಿಸಲಿದ್ದಾರೆ. ಅನ್ನದಾತರ ಬಗೆಗಿನ ಬದ್ಧತೆ ಬಗ್ಗೆ ನಿಮ್ಮೆಲ್ಲರಿಗಿಂತ ಹೆಚ್ಚಿನ ಕರುಳಬಳ್ಳಿಯ ಸಂಬಂಧ ಜೆಡಿಎಸ್​ಗಿದೆ ಎಂದು ಎಚ್​ಡಿಕೆ ತಿರುಗೇಟು ನೀಡಿದ್ದಾರೆ.

    ಅನ್ನದಾತನಿಗೆ ಮಂಕುಬೂದಿ: ಸಿದ್ದರಾಮಯ್ಯ ಅವರ ಕಾಲದಲ್ಲಿ ಮಾಡಿದ ಸಾಲ ಮನ್ನಾದಲ್ಲಿ ಲೋಪದೋಷಗಳು ಇದ್ದವು. ನಾನು ಮಾಡಿದ 25 ಸಾವಿರ ಕೋಟಿ ರೂ. ಸಾಲಮನ್ನಾದಲ್ಲಿ ಅಂತಹ ಅನ್ಯಾಯಗಳನ್ನು ಸರಿಪಡಿಸಿದ್ದೆ. ಇದರಲ್ಲಿ ಹುಳುಕು ಹುಡುಕುವ ಕಾಂಗ್ರೆಸ್​ ನಾಯಕರು ಅನ್ನದಾತನಿಗೆ ಮಂಕು ಬೂದಿ ಎರಚಲು ಯತ್ನಿಸುತ್ತಿದ್ದಾರೆ ಎಂದು ಹರಿಹಾಯ್ದಿದ್ದಾರೆ.

    ಇದನ್ನೂ ಓದಿರಿ ಎಚ್​ಡಿಕೆ ಜಾತಿ ಕಾರ್ಡ್​ ವರ್ಕೌಟ್​ ಆಗಲ್ಲ; ಸಿದ್ದರಾಮಯ್ಯ ಲೇವಡಿ

    ಅಹಿಂದ ರಾಮಯ್ಯ ಆಗಿದ್ದು ಏಕೆ?: ನಾನು ಚುನಾವಣೆ ಬಂದಾಗ ಜಾತಿ ಕಾರ್ಡ್​ ಪ್ಲೇ ಮಾಡುತ್ತೇನೆ ಎಂದು ಮೂದಲಿಸುವ ಸಿದ್ದರಾಮಯ್ಯ “ಅಹಿಂದ’ ರಾಮಯ್ಯ ಆಗಿದ್ದು ಏಕೆ? ನಕಲಿ ಸಮಾಜವಾದಿಯ “ಅಹಿಂದ” ಮುಖವಾಡ ಇಡೀ ನಾಡಿಗೆ ಗೊತ್ತಿದೆ ಎಂದು ಮಾತಿನಲ್ಲೇ ತಿವಿದಿರುವ ಕುಮಾರಸ್ವಾಮಿ, ತೋರಣಕ್ಕೆ ತಂದ ತಳಿರ ಮೇಯಿತು, ಕೊಂದಹರೆಂಬುದನರಿಯದೆ, ಬೆಂದ ಒಡಲ ಹೊರೆವುತ್ತಲದೆ, ಅದಂದೆ ಹುಟ್ಟಿತ್ತು, ಅದಂದೆ ಹೊಂದಿತ್ತು, ಕೊಂದವರುಳಿವರೆ ಕೂಡಲಸಂಗಮದೇವಾ ಎಂದು ಬಸವಣ್ಣನವರ ವಚನ ಉಲ್ಲೇಖಿಸಿ ಚಾಟಿ ಬೀಸಿದ್ದಾರೆ.

    ನಿವೇಶನದ ಸುತ್ತಲೂ 8 ಅಡಿ ಎತ್ತರದ ಕಾಂಪೌಂಡ್​ ನಿರ್ಮಿಸಿ ಗಾಂಜಾ ಬೆಳೆದರು!

    ಹಿಂದು ಎಂಬುದು ಧರ್ಮವೇ ಅಲ್ಲ; ಮತ್ತೊಂದು ವಿವಾದದ ಕಿಡಿ ಹಚ್ಚಿದ ಪ್ರೊ.ಭಗವಾನ್​

    ಬಿಜೆಪಿಗೆ ಬಹುಮತ ಇಲ್ಲದಿದ್ದರೂ ಪದೇಪದೆ ಈ ಗುಲಾಬಿಯೇ ಅಧ್ಯಕ್ಷೆ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts