

IND vs ENG: ಪ್ರಸಕ್ತ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ 1-2 ಅಂತರದಲ್ಲಿ ಹಿನ್ನಡೆ ಅನುಭವಿಸಿದೆ. ಜು.23ರಿಂದ ನಡೆಯಲಿರುವ ನಾಲ್ಕನೇ ಟೆಸ್ಟ್ನಲ್ಲಿ ಗೆಲುವಿನ ಅನಿವಾರ್ಯತೆ ಎದುರಾಗಿದ್ದು, ಗಿಲ್ ಪಡೆಯಲ್ಲಿ ಮಹತ್ವದ ಬದಲಾವಣೆಗಳು ಕೂಡ ನಡೆದಿವೆ. ಈ ಮಧ್ಯೆ ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಅಚ್ಚರಿ ಹೇಳಿಕೆಯೊಂದನ್ನು ನೀಡಿದ್ದಾರೆ.
ಶುಭಮನ್ ಗಿಲ್ ನಾಯಕತ್ವದಲ್ಲಿ ಸರಣಿ ಗೆಲ್ಲಲು ಎದುರುನೋಡುತ್ತಿರುವ ಭಾರತ ತಂಡದಲ್ಲಿ ಗಿಲ್, ರಿಷಭ್ ಪಂತ್, ಕೆ.ಎಲ್. ರಾಹುಲ್, ಮೊಹಮ್ಮದ್ ಸಿರಾಜ್, ಜಸ್ಪ್ರಿತ್ ಬುಮ್ರಾ ಸೇರಿದಂತೆ ಕೆಲವರು ತಂಡದ ಪರ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ಇನ್ನು ನಾಲ್ಕನೇ ಟೆಸ್ಟ್ನಲ್ಲಿ ಭರ್ಜರಿ ಆಲ್ರೌಂಡ್ ಪ್ರದರ್ಶನದ ಜೊತೆಗೆ ಗೆಲುವಿಗಾಗಿ ಕಾಯುತ್ತಿರುವ ಟೀಮ್ ಇಂಡಿಯಾಗೆ ಈತನೇ ಬೆನ್ನೆಲುಬು ಎಂದು ರೈನಾ ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ.
"ನನ್ನ ಪ್ರಕಾರ, ಟೀಮ್ ಇಂಡಿಯಾ ಟೆಸ್ಟ್ ತಂಡಕ್ಕೆ ರಿಷಭ್ ಪಂತ್ ಬೆನ್ನೆಲುಬು. ಸತತವಾಗಿ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿರುವ ಪಂತ್, ಸ್ಟಂಪ್ಸ್ ಹಿಂದೆಯೂ ಅದ್ಭುತವಾಗಿದ್ದಾರೆ. ಇದು ಎದುರಾಳಿ ಬ್ಯಾಟರ್ಗಳಿಗೆ ಸವಾಲಾಗಿ ಪರಿಣಮಿಸಿದೆ. ಬ್ಯಾಟ್ ಮತ್ತು ಗ್ಲೌಸ್ನಿಂದ ತಂಡಕ್ಕೆ ಹೆಚ್ಚುವರಿ ಕೊಡುಗೆ ನೀಡುತ್ತಿರುವ ರಿಷಭ್, ನಿಜಕ್ಕೂ ಪ್ರಸ್ತುತ ಟೆಸ್ಟ್ ಟೀಮ್ಗೆ ದೊಡ್ಡ ಶಕ್ತಿಯಾಗಿದ್ದಾರೆ. ಅವರ ಉತ್ತಮ ಬ್ಯಾಟಿಂಗ್, ಕೀಪಿಂಗ್ ಪ್ರದರ್ಶನ ಟೀಮ್ ಇಂಡಿಯಾದ ಯಶಸ್ಸಿಗೂ ಕಾರಣವಾಗಿದೆ" ಎಂದಿದ್ದಾರೆ.
ಭಾರತ: ಶುಭಮನ್ ಗಿಲ್ (ನಾಯಕ), ರಿಷಬ್ ಪಂತ್ (ಉಪನಾಯಕ, ವಿಕೆಟ್ ಕೀಪರ್), ಯಶಸ್ವಿ ಜೈಸ್ವಾಲ್, ಕೆ.ಎಲ್. ರಾಹುಲ್, ಸಾಯಿ ಸುದರ್ಶನ್, ಅಭಿಮನ್ಯು ಈಶ್ವರನ್, ಕರುಣ್ ನಾಯರ್, ರವೀಂದ್ರ ಜಡೇಜಾ, ಧ್ರುವ್ ಜುರೆಲ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಆಕಾಶ್ ದೀಪ್, ಕುಲದೀಪ್ ಯಾದವ್, ಅಂಶುಲ್ ಕಾಂಬೋಜ್.
ಇಂಗ್ಲೆಂಡ್: ಬೆನ್ ಸ್ಟೋಕ್ಸ್ (ನಾಯಕ), ಜೋಫ್ರಾ ಆರ್ಚರ್, ಗಸ್ ಅಟ್ಕಿನ್ಸನ್, ಜಾಕೋಬ್ ಬೆಥೆಲ್, ಹ್ಯಾರಿ ಬ್ರೂಕ್, ಬ್ರೈಡನ್ ಕಾರ್ಸೆ, ಝಾಕ್ ಕ್ರಾಲಿ, ಲಿಯಾಮ್ ಡಾಸನ್, ಬೆನ್ ಡಕೆಟ್, ಆಲಿ ಪೋಪ್, ಜೋ ರೂಟ್, ಜೇಮಿ ಸ್ಮಿತ್ (ವಿಕೆಟ್ ಕೀಪರ್), ಜೋಶ್ ಟಂಗ್, ಕ್ರಿಸ್ ವೋಕ್ಸ್.