More

    ಮುಂಬೈ ವಿರುದ್ಧ ‘ಸೂಪರ್​’ ಗೆಲುವು ಸಾಧಿಸಿದ ರಾಯಲ್ ಚಾಲೆಂಜರ್ಸ್

    ದುಬೈ: ಕಳೆದ ಪಂದ್ಯದಲ್ಲಿ ಹೀನಾಯ ಸೋಲು ಕಂಡಿದ್ದ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ ಇಂದು ಮುಂಬೈ ತಂಡ ಇಂಡಿಯನ್ಸ್ ತಂಡದ ವಿರುದ್ಧ ಸೂಪರ್ ಓವರ್​ ಜಯ ಸಾಧಿಸಿತು.

    ದುಬೈ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ಸೋಮವಾರ ನಡೆದ ಪಂದ್ಯದಲ್ಲಿ ನಿಗದಿತ 20 ಓವರ್​ಗಳಲ್ಲಿ ಉಭಯ ತಂಡಗಳು ಸಮಬಲ ಸಾಧಿಸಿದ ಹಿನ್ನೆಲೆಯಲ್ಲಿ ಫಲಿತಾಂಶ ನಿರ್ಣಾಯಕ್ಕಾಗಿ ಸೂಪರ್ ಓವರ್ ಮೊರೆ ಹೋಗಲಾಯಿತು. ಈ ವೇಳೆ ಮುಂಬೈ ತಂಡ 7 ರನ್ ಪೇರಿಸಿದರೆ, ಪ್ರತಿಯಾಗಿ ನಾಯಕ ವಿರಾಟ್ ಕೊಹ್ಲಿ ಹಾಗೂ ಎಬಿ ಡಿವಿಲಿಯರ್ಸ್ ಜೋಡಿ 11 ರನ್ ಗಳಿಸಿ ತಂಡಕ್ಕೆ ಜಯ ತಂದುಕೊಟ್ಟಿತು.

    ಟಾಸ್​ ಸೋತ ಆರ್​ಸಿಬಿ ಪಾಲಿಗೆ ಮೊದಲು ಬ್ಯಾಟಿಂಗ್​ ಅವಕಾಶ ಸಿಕ್ಕಿತ್ತು. ದೇವದತ್ ಪಡಿಕಲ್ (54ರನ್, 40 ಎಸೆತ, 5 ಬೌಂಡರಿ, 2 ಸಿಕ್ಸರ್), ಆರಂಭಿಕ ಆರನ್ ಫಿಂಚ್ (52 ರನ್, 35 ಎಸೆತ, 7 ಬೌಂಡರಿ, 1 ಸಿಕ್ಸರ್) ಹಾಗೂ ಅನುಭವಿ ಎಬಿ ಡಿವಿಲಿಯರ್ಸ್ (55*ರನ್, 24 ಎಸೆತ, 4 ಬೌಂಡರಿ, 4 ಸಿಕ್ಸರ್) ಬಿರುಸಿನ ಬ್ಯಾಟಿಂಗ್ ಫಲವಾಗಿ 3 ವಿಕೆಟ್​ಗೆ 201 ರನ್ ಕಲೆಹಾಕಿತು. ನಂತರ ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್​ ಕೂಡ  ಇಶಾನ್ ಕಿಶನ್ (99ರನ್, 58 ಎಸೆತ, 2 ಬೌಂಡರಿ, 9 ಸಿಕ್ಸರ್) ಹಾಗೂ ಸ್ಪೋಟಕ ಬ್ಯಾಟ್ಸ್​ಮನ್ ಕೈರಾನ್ ಪೊಲ್ಲಾರ್ಡ್ (60*ರನ್, 24 ಎಸೆತ, 3 ಬೌಂಡರಿ, 5 ಸಿಕ್ಸರ್) ಜೋಡಿ 5 ವಿಕೆಟ್​ಗೆ 201 ರನ್​ ಗಳಿಸಿತು.  ಪರಿಣಾಮ ಸೂಪರ್​ ಓವರ್​ ಮೊರೆ ಹೋಗಬೇಕಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts