ಗರ್ಭಪಾತ ಕಾನೂನು ರದ್ದುಗೊಳಿಸಿದ ಅಮೆರಿಕ ಸುಪ್ರೀಂಕೋರ್ಟ್​! ಹಲವು ವರ್ಷಗಳ ಹೋರಾಟಕ್ಕೆ ಜಯ

ವಾಷಿಂಗ್ಟನ್​: ಅಮೆರಿಕಾದಲ್ಲಿ ಈವರೆಗೂ ಜಾರಿಯಲ್ಲಿದ್ದ ಕಾನೂನುಬದ್ಧ ಗರ್ಭಪಾತದ ಹಕ್ಕನ್ನು ರದ್ದುಗೊಳಿಸಲಾಗಿದೆ ಎಂದು ಶನಿವಾರ ಅಮೆರಿಕಾದ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ಸತತ 50 ವರ್ಷಗಳಿಂದ ಈ ಕಾನೂನು ಜಾರಿಯಲ್ಲಿತ್ತು, ಅಮೆರಿಕದಲ್ಲಿ 1973 ರಲ್ಲಿ ರೋಯ್ ವಿ ವೇಡ್ ಪ್ರಕರಣದಲ್ಲಿ ಮಹಿಳೆಯರಿಗೆ ಗರ್ಭಪಾತ ಮಾಡುವ ಸಾಂವಿಧಾನಿಕ ಹಕ್ಕನ್ನು ನೀಡುವ  ತೀರ್ಪು ನೀಡಲಾಗಿತ್ತು. ಅಂದಿನಿಂದ ಅಲ್ಲಿ ಗರ್ಭಪಾತವನ್ನು ಕಾನೂನು ಬದ್ಧಗೊಳಿಸಲಾಗಿತ್ತು. ಗರ್ಭಪಾತಕ್ಕೆ ಸಂಬಂಧಿಸಿದಂತೆ ನಿರ್ಧಾರಗಳನ್ನು ತೆಗೆದುಕೊಳ್ಳುವ ಅಧಿಕಾರವು ಚುನಾಯಿತ ಪ್ರತಿನಿಧಿಗಳು, ಜನರಿಗೆ ಇರುತ್ತದೆ ಎಂದು ನ್ಯಾಯಾಲಯ ಹೇಳಿದೆ. ಅನಿಯಂತ್ರಿತ ಗರ್ಭಪಾತಗಳು … Continue reading ಗರ್ಭಪಾತ ಕಾನೂನು ರದ್ದುಗೊಳಿಸಿದ ಅಮೆರಿಕ ಸುಪ್ರೀಂಕೋರ್ಟ್​! ಹಲವು ವರ್ಷಗಳ ಹೋರಾಟಕ್ಕೆ ಜಯ