ಕ್ರಿಕೆಟಿಗ ಮೊಹಮ್ಮದ್ ಶಮಿಯನ್ನು ಬಂಧಿಸುವಂತೆ ಸುಪ್ರೀಂ ಮೊರೆ ಹೋದ ಪತ್ನಿ ಹಸೀನ್

Cricketer Mohammad Shami
Published on

ನವದೆಹಲಿ : ಕ್ರಿಕೆಟಿಗ ಮೊಹಮ್ಮದ್ ಶಮಿ ವಿರುದ್ಧ ಪತ್ನಿ ಹಸೀನ್ ಜಹಾನ್ ಶಮಿ ಗಂಭೀರ ಆರೋಪ ಮಾಡಿ ಬಂಧಿಸುವಂತೆ ಸುಪ್ರೀಂಕೋರ್ಟ್​ಗೆ ಮೊರೆ ಹೋಗಿದ್ದಾರೆ.

ಕ್ರಿಕೆಟಿಗ ಮೊಹಮ್ಮದ್ ಶಮಿ ಅವರ ವಿಚ್ಛೇದಿತ ಪತ್ನಿ ಹಸಿನ್ ಜಹಾನ್ ಅವರು ಶಮಿ ವಿರುದ್ಧ ಸ್ಥಳೀಯ ನ್ಯಾಯಾಲಯ ಹೊರಡಿಸಿದ್ದ ಬಂಧನದ ವಾರೆಂಟ್‌ಗೆ ತಡೆಯಾಜ್ಞೆ ತೆರವು ಮಾಡುವಂತೆ ಕೋರಿ ಕಲ್ಕತ್ತಾ ಹೈಕೋರ್ಟ್‌ನ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಭಾರತೀಯ ಕ್ರಿಕೆಟ್ ತಂಡದ ಆಟಗಾರ ಮೊಹಮ್ಮದ್ ಶಮಿ ಅವರ ಪತ್ನಿ ಮಾರ್ಚ್ 28, 2023ರ ಕೋಲ್ಕತ್ತಾ ಹೈಕೋರ್ಟ್​ ಆದೇಶವನ್ನು ಪ್ರಶ್ನಿಸಿದ್ದಾರೆ. ಹಾಗೆಯೇ ಪಶ್ಚಿಮ ಬಂಗಾಳದ ಸೆಷನ್ಸ್​ ಕೋರ್ಟ್​ ಶಮಿ ವಿರುದ್ಧ ಹೊರಡಿಸಿದ್ದ ಬಂಧನ ವಾರಂಟ್​ಗೆ ತಡೆ ನೀಡಿತ್ತು, ಸೆಷನ್ಸ್​ ನ್ಯಾಯಾಲಯದ ಆದೇಶವನ್ನು ರದ್ದುಗೊಳಿಸುವಂತೆ ಮಾಡಿದ್ದ ಮನವಿಯನ್ನು ಹೈಕೋರ್ಟ್​ನಲ್ಲಿ ವಜಾಗೊಳಿಸಲಾಗಿದೆ.

ಅರ್ಜಿ ಪ್ರಕಾರ 2019 ಆಗಸ್ಟ್ 9 ರಂದು ಅಲಿಪುರದ ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರು ಶಮಿ ವಿರುದ್ಧ ಬಂಧನದ ವಾರಂಟ್ ಹೊರಡಿಸಿದ್ದರು. ಶಮಿ ಆ ಆದೇಶವನ್ನು ಸೆಷನ್ಸ್​ ನ್ಯಾಯಾಲಯದ ಮುಂದೆ ಪ್ರಶ್ನಿಸಿದರು, ಇದು 2019 ಸೆಪ್ಟೆಂಬರ್ 9 ರಂದು ಬಂಧನ ವಾರಂಟ್ ಮತ್ತು ಕ್ರಿಮಿನಲ್ ವಿಚಾರಣೆಯ ಸಂಪೂರ್ಣ ಪ್ರಕ್ರಿಯೆಗಳಿಗೆ ತಡೆ ನೀಡಿದೆ. ಹೀಗಾಗಿ ಶಮಿ ಪತ್ನಿ ಕೋಲ್ಕತ್ತಾ ಹೈಕೋರ್ಟ್​ನಲ್ಲಿ ಅವರ ಪರವಾಗಿ ಯಾವುದೇ ಆದೇಶ ಪಡೆಯಲು ವಿಫಲರಾದ ಹಿನ್ನೆಲೆಯಲ್ಲಿ ಕೋಲ್ಕತ್ತಾ ಕೋರ್ಟ್​ ಆದೇಶದ ವಿರುದ್ಧ ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದಾರೆ.

ಶಮಿ ತನ್ನಿಂದ ವರದಕ್ಷಿಣೆ ಕೇಳುತ್ತಿದ್ದರು ಮತ್ತು ಇಂದಿನವರೆಗೂ ಅವರು ವಿವಾಹೇತರ ಸಂಬಂಧಗಳನ್ನು ಮುಂದುವರೆಸಿದ್ದಾರೆ ಎಂದು ಹಸೀನ್ ಆರೋಪಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net