More

    ಅತ್ಯಂತ ಪ್ರಭಾವಿ ವ್ಯಕ್ತಿಯಾಗಿದ್ದರು

    ಸರಗೂರು: ಭಾರತದ ಇತಿಹಾಸದಲ್ಲಿ ಅಂಬೇಡ್ಕರ್ ಪ್ರಮುಖ ವ್ಯಕ್ತಿಯಾಗಿದ್ದರು. ದಲಿತ ಕುಟುಂಬದಲ್ಲಿ ಜನಿಸಿದ ಕಾರಣ ಹಲವು ಸವಾಲುಗಳನ್ನು ಎದುರಿಸುತ್ತಿದ್ದರೂ ಅತ್ಯಂತ ಪ್ರಭಾವಿ ವ್ಯಕ್ತಿ ಎನಿಸಿಕೊಂಡರು ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಸಹಾಯಕ ನಿರ್ದೇಶಕ ವೈ.ಡಿ.ರಾಜಣ್ಣ ಹೇಳಿದರು.

    ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ಭಾನುವಾರ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಬಾಬಾ ಸಾಹೇಬ್ ಅಂಬೇಡ್ಕರ್ ಅವರ 133ನೇ ಜನ್ಮ ದಿನಾಚರಣೆ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿ, ಸಂವಿಧಾನ ರಚನೆ ಮಾಡುವ ಮೂಲಕ ದೇಶದ ಪ್ರತಿಯೊಬ್ಬ ನಾಗರಿಕನಿಗೂ ಮೂಲಭೂತ ಹಕ್ಕುಗಳು ಲಭಿಸುವಂತೆ ಮಾಡಿದರು.

    ಆದಿಕರ್ನಾಟಕ ಮಹಾಸಭಾ ಅಧ್ಯಕ್ಷ ಸರಗೂರು ಶಿವಣ್ಣ ಮಾತನಾಡಿ, ಸಮಾಜದಲ್ಲಿ ಬದಲಾವಣೆ ತರುವ ಸಲುವಾಗಿ ಅಂಬೇಡ್ಕರ್ ಅವರು ತಮ್ಮ ಜೀವನದುದ್ದಕ್ಕೂ ಹೋರಾಟ ನಡೆಸಿದರು ಎಂದರು.

    ತಹಸೀಲ್ದಾರ್ ಕೃಷ್ಣಮೂರ್ತಿ ಅಧ್ಯಕ್ಷತೆ ವಹಿಸಿದ್ದರು. ಸಂವಿಧಾನ ಸಂರಕ್ಷಣಾ ಸಮಿತಿ ಪ್ರಧಾನ ಕಾರ್ಯದರ್ಶಿ ಕುರ್ಣೇಗಾಲ ಬೆಟ್ಟಸ್ವಾಮಿ, ದಸಂಸ ಜಿಲ್ಲಾ ಸಂಚಾಲಕ ಇಟ್ನ ರಾಜಣ್ಣ, ಜಿಪಂ ಮಾಜಿ ಸದಸ್ಯ ಚಿಕ್ಕವೀರನಾಯಕ ಮಾತನಾಡಿದರು. ಈ ಗ್ರೇಡ್-2 ತಹಸೀಲ್ದಾರ್ ಪರಶಿವಮೂರ್ತಿ, ಶಿರಸ್ತೇದಾರ್ ಗುರುರಾಜ್, ದಸಂಸ (ಅಂಬೇಡ್ಕರ್ ವಾದ) ತಾಲೂಕು ಸಂಚಾಲಕ ಕೂಡಗಿ ಗೋವಿಂದರಾಜು, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಕೆಂಡಗಣ್ಣಸ್ವಾಮಿ, ಎಪಿಎಂಸಿ ಕಾರ್ಯದರ್ಶಿ ವಸಂತಕುಮಾರ್, ಗ್ರಾಪಂ ಸದಸ್ಯ ಮಹದೇವ, ಮುಖಂಡರು ಸರಗೂರು ಹೋರಾಟ ಸಮಿತಿ ಸಂಚಾಲಕ ಸರಗೂರು ಕೃಷ್ಣ, ರಮೇಶ್, ಗ್ರಾಮೀಣ ಮಹೇಶ್, ರವೀಶ್, ಬೋಗಯ್ಯ, ಪುಟ್ಟಹನುಮಯ್ಯ, ಮಹೇಂದ್ರ, ಮಹೇಶ್, ಶಂಕರ್, ಚಿನ್ನಯ್ಯ, ಮಣಿಕಂಠ, ನಾಗೇಂದ್ರ ಮೊಳೆಯೂರು ಕಾವಲ್, ಅಣ್ಣಯ್ಯಸ್ವಾಮಿ, ರಾಜಸ್ವ ನಿರೀಕ್ಷಕ ಶ್ರೀನಿವಾಸ, ಸುಶ್ಮಿತಾ, ಸಮಾಜ ಕಲ್ಯಾಣ ಇಲಾಖೆ ಸಿಬ್ಬಂದಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts