ಮುಂಬೈ: ಈಚೆಗೆ ಮುಕ್ತಾಯಗೊಂಡ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿ ಭಾರತ ತಂಡ (Team India) ತನ್ನ ಕಳಪೆ ಪ್ರದರ್ಶನದಿಂದಾಗಿ ಸೋಲುಂಡಿದ್ದು, ಕ್ರೀಡಾಭಿಮಾನಿಗಳು ಟೀಮ್ ಇಂಡಿಯಾ ಪ್ರದರ್ಶನಕ್ಕೆ ಕಿಡಿಕಾರುತ್ತಿದ್ದಾರೆ. ಇತ್ತ ಸರಣಿ ಸೋಲಿಗೆ ಸಂಬಂಧಿಸಿದಂತೆ ಬಿಸಿಸಿಐ ಗೌತಮ್ ಗಂಭೀರ್ ಹಾಗೂ ನಾಯಕ ರೋಹಿತ್ ಶರ್ಮರ ಜತೆಗೆ ಪ್ರತ್ಯೇಕವಾಗಿ ಸಭೆ ನಡೆಸಲು ನಿರ್ಧಿರಿಸಿದ್ದು, ಸೋಲಿಗೆ ಕಾರಣವಾದ ಅಂಶಗಳ ಬಗ್ಗೆ ಚರ್ಚಿಸಲಾಗುತ್ತದೆ ಎಂದು ತಿಳಿದು ಬಂದಿದೆ.
![blank](https://www.vijayavani.net/wp-content/plugins/wp-fastest-cache-premium/pro/images/blank.gif)
ಇನ್ನೂ ರೋಹಿತ್ ನಾಯಕತ್ವದ ವಿಚಾರವಾಗಿ ಹಲವರು ಅಪಸ್ವರ ತೆಗೆದಿದ್ದು, ಹೊಸ ನಾಯಕತ್ವಕ್ಕೆ ಬೇಡಿಕೆಯನ್ನು ಇರಿಸಿದ್ದಾರೆ. ಗೌತಮ್ ಗಂಭೀರ್ ಜೊತೆಗೆ ಹಿಟ್ಮ್ಯಾನ್ರ ಬದಲಾವಣೆಗೆ ಕೂಗು ಕೇಳಿ ಬರುತ್ತಿದ್ದು, ಮಾಜಿ ಕ್ರಿಕೆಟಿಗರು ಹೊಸ ನಾಯಕನ ಅವಶ್ಯಕತೆ ಬಗ್ಗೆ ಒತ್ತಿ ಹೇಳಿದ್ದಾರೆ. ಇದೀಗ ಈ ಬಗ್ಗೆ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಕೂಡ ಮಾತನಾಡಿದ್ದು, ನಾಯಕತ್ವ ಬದಲಾವಣೆ ಕೂಗಿಗೆ ಧ್ವನಿಗೂಡಿಸಿದ್ದಾರೆ.
ಖಾಸಗಿ ಸುದ್ದಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಈ ಬಗ್ಗೆ ಮಾತನಾಡಿರುವ ಸುನಿಲ್ ಗವಾಸ್ಕರ್, ನಾನು ನೋಡಿದಂರೆ ಬುಮ್ರಾ ನಾಯಕತ್ವ ಗುಣಗಳನ್ನು ಹೊಂದಿದ್ದಾರೆ. ಮುಂದೆ ನಿಂತು ತಂಡವನ್ನು ಮುನ್ನಡೆಸುತ್ತಾರೆ. ಒತ್ತಡವನ್ನು ನಿಭಾಯಿಸಿ ಇತರೆ ಆಟಗಾರರು ತಮ್ಮ ಉತ್ತಮ ನಿರ್ವಹಣೆ ನೀಡುವಂತೆಯೂ ಪ್ರೇರೇಪಿಸುತ್ತಾರೆ. ಕಳೆದ ಕೆಲವು ವರ್ಷಗಳಲ್ಲಿ ಬುಮ್ರಾ ತಂಡದ ಅಗ್ರಮಾನ್ಯ ಬೌಲರ್ ಆಗಿ ಹೊರಹೊಮ್ಮಿದ್ದಾರೆ. ತಂಡದ ಸಹ ಬೌಲರ್‌ಗಳಿಗೂ ಉತ್ತಮ ಮಾರ್ಗದರ್ಶನ ನೀಡುತ್ತಾರೆ. ಭವಿಷ್ಯದಲ್ಲಿ ಅವರು ಟೀಮ್ ಇಂಡಿಯಾ (Team India) ನಾಯಕರಾದರೆ ಅಚ್ಚರಿಪಡಬೇಕಾಗಿಲ್ಲ ಎಂದು ಸುನಿಲ್ ಗವಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ.
![blank](https://www.vijayavani.net/wp-content/plugins/wp-fastest-cache-premium/pro/images/blank.gif)
ಬಾರ್ಡರ್-ಗವಾಸ್ಕರ್ ಟ್ರೋಫಿ ಸರಣಿ ವಿಚಾರಕ್ಕೆ ಬರುವುದಾದರೆ ಜಸ್ಪ್ರೀತ್ ಬುಮ್ರಾ 32 ವಿಕೆಟ್ಗಳನ್ನು ಪಡೆಯುವ ಮೂಲಕ ಸರಣಿಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಅಲ್ಲದೇ ಸರಣಿಯ ಮೊದಲ ಪಂದ್ಯದಲ್ಲಿ ತಂಡವನ್ನು (Team India) ಮುನ್ನಡೆಸಿದ ಬುಮ್ರಾ 295 ರನ್ಗಳ ಭರ್ಜರಿ ಜಯಕ್ಕೆ ಕಾರಣರಾಗಿದ್ದರು. ಇದಾದ ಬಳಿಕ ಸರಣಿಯಲ್ಲಿ ಹೀನಾಯ ಪ್ರದರ್ಶನ ತೋರುವ ಮೂಲಕ ಭಾರತ ತಂಡ 10 ವರ್ಷಗಳ ಬಳಿಕ ಆಸ್ಟ್ರೇಲಿಯಾದ ನೆಲದಲ್ಲಿ ಸೋಲನ್ನು ಒಪ್ಪಿಕೊಂಡಿತ್ತು.
Salary Hike ಮಾಡಲ್ಲವೆಂದ ಮಾಲೀಕನ ವಿರುದ್ಧ ಸೇಡು ತೀರಿಸಿಕೊಂಡ ಉದ್ಯೋಗಿ; ಕದ್ದ ಹಣ, ವಸ್ತುಗಳ ಮೌಲ್ಯ ಎಷ್ಟು ಗೊತ್ತಾ?
ರಾಜಕೀಯ ಕಾರಣಗಳಿಂದ ಮೇಕೆದಾಟುವಿಗೆ ಅನುಮತಿ ವಿಳಂಬ: DCM DK Shivakumar