More

    ಸಂಸತ್‌ನಲ್ಲಿ ಜಿಲ್ಲೆಯ ದನಿಯಾಗಲಿದ್ದಾರೆ

    ಚಿಕ್ಕಮಗಳೂರು: ಜಿಲ್ಲೆಯ ಸಮಸ್ಯೆ ಕುರಿತು ಸಂಸತ್‌ನಲ್ಲಿ ಗಮನ ಸೆಳೆಯುವ ವ್ಯಕ್ತಿ ಜಯಪ್ರಕಾಶ್ ಹೆಗ್ಡೆ ಅವರಾಗಿದ್ದು. ಜಿಲ್ಲೆಯ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಜಯಪ್ರಕಾಶ್ ಹೆಗ್ಡೆ ಅವರನ್ನು ಲೋಕಸಭಾ ಚುನಾವಣೆಯಲ್ಲಿ ಗೆಲ್ಲಿಸಬೇಕಿದೆ ಎಂದು ಕೆಪಿಸಿಸಿ ವಕ್ತಾರ ಐವಾನ್ ಡಿಸೋಜಾ ತಿಳಿಸಿದರು.
    ನಗರದ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಎಂದರೆ ಅಭಿವೃದ್ಧಿ, ಜನರಿಗೆ ರಕ್ಷಣೆ ನೀಡುವ ಪಕ್ಷವಾಗಿದೆ. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪರವಾಗಿ ಜನರ ಒಲವಿದೆ ಎಂದು ತಿಳಿಸಿದರು.
    ವಿಧಾನಸಭಾ ಚುನಾವಣೆಯಲ್ಲಿ ಜನರಿಗೆ ಕೊಟ್ಟಮಾತಿನಂತೆ ಕಾಂಗ್ರೆಸ್ ಸರ್ಕಾರ ನಡೆದುಕೊಂಡಿದೆ. ಐದು ಗ್ಯಾರಂಟಿಗಳನ್ನು ಜಾರಿಗೆ ತರುವ ಮೂಲಕ ಅವುಗಳನ್ನು ಜನರಿಗೆ ತಲುಪಿಸಿದೆ. ಈ ಲೋಕಸಭಾ ಚುನಾವಣೆಯಲ್ಲಿ 5 ನ್ಯಾಯಗಳನ್ನು ಜನರ ಮುಂದಿಟ್ಟಿದೆ. ದೇಶದಲ್ಲಿ ಅಧಿಕಾರಕ್ಕೆ ಬಂದರೆ ಅವುಗಳನ್ನು ಜಾರಿಗೆ ತರಲಾಗುತ್ತದೆ ಎಂದರು.
    ಎರಡು ಬಾರಿ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಶೋಭಾ ಕರಂದ್ಲಾಜೆ ಜನರ ಕಣ್ಣಿಗೆ ಕಾಣುವಂತಹ ಅಭಿವೃದ್ಧಿ ಕೆಲಸಗಳನ್ನು ಮಾಡಲಿಲ್ಲ, ಕೇಂದ್ರದಲ್ಲಿ ಕೃಷಿ ಮತ್ತು ರೈತ ಕಲ್ಯಾಣ ಸಚಿವೆಯಾಗಿದ್ದರೂ ಯಾವುದೇ ಯೋಜನೆಯನ್ನು ಕ್ಷೇತ್ರಕ್ಕೆ ತರಲಿಲ್ಲ. ಹಾಗಾಗಿ ಸ್ವಪಕ್ಷೀಯವರಿಂದಲೇ ಗೋ ಬ್ಯಾಕ್ ಹೇಳಿಸಿಕೊಳ್ಳಬೇಕಾಯಿತು ಎಂದು ಹೇಳಿದರು.
    ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ ಸಬ್‌ಕಾ ಸಾಥ್ ಸಬ್‌ಕಾ ವಿಕಾಸ್ ಆಗಲಿಲ್ಲ, ಅಲ್ಪಸಂಖ್ಯಾತರನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಕೇವಲ ಘೋಷಣೆಯಿಂದ ಜನರ ಹೊಟ್ಟೆ ತುಂಬುವುದಿಲ್ಲ ಎಂಬ ಸತ್ಯವನ್ನು ಅವರು ಮನಗಾಣಬೇಕಾಗಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲ ಸಮುದಾಯದವರನ್ನು ಒಟ್ಟಿಗೆ ಕೊಂಡೊಯ್ಯುವ ಕೆಲಸ ನಡೆಯಲಿದೆ ಎಂದು ತಿಳಿಸಿದರು.
    ಸಮಾಜದ ಎಲ್ಲ ವರ್ಗದ ಜನರ ಹಸಿವಿನ, ಮನೆಯ ಕಷ್ಟಗಳ ಬಗ್ಗೆ ತಿಳಿಯದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಹಿಳೆಯರ ಮನಸ್ಸಿಗೆ ನೋವಾಗುವ ಮಾತುಗಳನ್ನಾಡಿದ್ದಾರೆ. ಈ ರೀತಿಯ ಮಾತುಗಳನ್ನು ಸಹಿಸಲಾಗದು ಎಂದರು.
    ಮಾಜಿ ಶಾಸಕ ಲೋಬೊ ಮಾತನಾಡಿ, ರಾಷ್ಟ್ರಪತಿಯಾಗಿದ್ದ ಅಬ್ದುಲ್ ಕಲಾಂ ಅವರು ದೇಶ 2025ಕ್ಕೆ ವಿಶ್ವದಲ್ಲಿ ಎರಡನೇ ಸ್ಥಾನಕ್ಕೆ ಬರಲಿದೆ ಎಂದು ಹೇಳಿದ್ದರು. ಆದರೆ 5ನೇ ಸ್ಥಾನದಲ್ಲೇ ನಿಂತಿದೆ. ದೇಶದ ಯುವಕರು ಉದ್ಯೋಗ ಸಿಗದೆ ಒದ್ದಾಡುತ್ತಿದ್ದಾರೆ. ಬಿಜೆಪಿ ಆಡಳಿತದಲ್ಲಿ ದೇಶದ ಆಸ್ತಿಯನ್ನು ಖಾಸಗಿ ವ್ಯಕ್ತಿಗಳಿಗೆ ಮಾರಾಟ ಮಾಡಲಾಗುತ್ತಿದೆ ಎಂದು ದೂರಿದರು.
    ಕಾಂಗ್ರೆಸ್ ಮುಖಂಡರಾದ ಜೇಮ್ಸ್ ಡಿಸೋಜ, ನೆಲ್ವಿನ್, ಸಿಲ್ವಸ್ಟರ್, ರೂಬೆನ್‌ಮೊಸಸ್ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts