ಬಾಲರಾಮ ಮಂದಿರದ ಮುಖ್ಯ ಅರ್ಚಕ ಸತ್ಯೇಂದ್ರ ದಾಸ್​ರ ಸ್ಥಿತಿ ಗಂಭೀರ; ವೈದ್ಯರು ಹೇಳಿದಿಷ್ಟು.. | Ayodhya BalaRam Temple

Untitled design - 2025-02-03T152857.937
Published on

ಲಖನೌ: ಅಯೋಧ್ಯೆಯ ಬಾಲರಾಮ ಮಂದಿರದ(Ayodhya BalaRam Temple) ಪ್ರಧಾನ ಅರ್ಚಕ ಮಹಂತ್ ಸತ್ಯೇಂದ್ರ ದಾಸ್ ಅವರು ಬ್ರೈನ್ ಸ್ಟ್ರೋಕ್‌ಗೆ ಒಳಗಾಗಿದ್ದು ಅವರ ಸ್ಥಿತಿ ಗಂಭೀರವಾಗಿದೆ. ಪ್ರಸ್ತುತ ಸಂಜಯ್ ಗಾಂಧಿ ಪೋಸ್ಟ್ ಗ್ರಾಜುಯೇಟ್ ಇನ್​​​​ಸ್ಟಿಟ್ಯೂಟ್​ ಆಫ್ ಮೆಡಿಕಲ್ ಸೈನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 85 ವರ್ಷದ ಮಹಂತ್ ಸತ್ಯೇಂದ್ರ ದಾಸ್ ಅವರನ್ನು ಪ್ರಾಥಮಿಕ ಚಿಕಿತ್ಸೆಯ ನಂತರ ಎಸ್​ಜಿಪಿಜಿಐಗೆ ಸ್ಥಳಾಂತರಿಸಲಾಗಿದೆ.

ಶ್ರೀ ಸತ್ಯೇಂದ್ರದಾಸ್ ಅವರು ಪಾರ್ಶ್ವವಾಯುವಿಗೆ ಒಳಗಾಗಿದ್ದಾರೆ. ಅವರಿಗೆ ಮಧುಮೇಹ ಮತ್ತು ಅಧಿಕ ರಕ್ತದೊತ್ತಡವು ಇದೆ. ಸದ್ಯ ಅವರು ಎಸ್‌ಜಿಪಿಜಿಐ ಆಸ್ಪತ್ರೆಯ ನರರೋಗ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆಸ್ಪತ್ರೆ ಆಡಳಿತ ಮಂಡಳಿ ತಿಳಿಸಿದೆ. ಅವರ ಸ್ಥಿತಿ ಗಂಭೀರವಾಗಿದ್ದರೂ ಚಿಕಿತ್ಸೆಗೆ ಪ್ರತಿಕ್ರಿಯಿಸುತ್ತಿದ್ದಾರೆ ಮತ್ತು ಪ್ರಸ್ತುತ ಅವರು ಸ್ಥಿರ ಸ್ಥಿತಿಯಲ್ಲಿದ್ದಾರೆ. ವೈದ್ಯರು ಅವರ ಮೇಲೆ ನಿಗಾ ಇಟ್ಟಿದ್ದಾರೆ ಎಂದು ಆಸ್ಪತ್ರೆಯ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಇದಕ್ಕೂ ಮೊದಲು ಅಕ್ಟೋಬರ್ 15ರಂದು ಮುಖ್ಯ ಅರ್ಚಕ ಸತ್ಯೇಂದ್ರ ದಾಸ್ ಅವರ ಸ್ಥಿತಿ ಹದಗೆಟ್ಟಿದ್ದರಿಂದ ಪಿಜಿಐನ ನರವಿಜ್ಞಾನ ವಿಭಾಗಕ್ಕೆ ದಾಖಲಿಸಲಾಗಿತ್ತು. ಅವರನ್ನು ಅಯೋಧ್ಯೆಯಿಂದ ಕರೆತರಲಾಯಿತು. ನರವಿಜ್ಞಾನ ವೈದ್ಯರ ಮೇಲ್ವಿಚಾರಣೆಯಲ್ಲಿ ಅವರ ಚಿಕಿತ್ಸೆ ನಡೆಯಿತು. ಅವರ ನರವೈಜ್ಞಾನಿಕ ಪರೀಕ್ಷೆಗಳನ್ನು ಮಾಡಲಾಯಿತು. ಅವರ ಸ್ಥಿತಿ ಗಂಭೀರವಾಗಿತ್ತು. ಆಚಾರ್ಯ ಸತ್ಯೇಂದ್ರ ಅವರು ತಿನ್ನುವುದನ್ನು ನಿಲ್ಲಿಸಿದ್ದರಿಂದ ತುಂಬಾ ದುರ್ಬಲರಾಗಿದ್ದರು. ಹಲವು ದಿನಗಳ ಚಿಕಿತ್ಸೆ ಬಳಿಕ ಅವರನ್ನು ಮತ್ತೆ ಅಯೋಧ್ಯೆಗೆ ಕರೆದೊಯ್ಯಲಾಯಿತು. ಇದರ ನಂತರ ಕ್ರಮೇಣ ಸುಧಾರಣೆ ಕಂಡುಬಂದಿತ್ತು.

1992 ಡಿಸೆಂಬರ್ 6ರಂದು ಬಾಬರಿ ಮಸೀದಿಯನ್ನು ಕೆಡವಿದಾಗ ಸತ್ಯೇಂದ್ರ ದಾಸ್ ಅವರು ತಾತ್ಕಾಲಿಕ ರಾಮ ಮಂದಿರದ ಅರ್ಚಕರಾಗಿದ್ದರು.(ಏಜೆನ್ಸೀಸ್​​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net