ಮನೆ ಮನೆಗೆ ತೆರಳಿ ಆರೋಗ್ಯ ಜಾಗೃತಿ ಕಾರ್ಯಕ್ರಮ

health
Published on

ಕುಶಾಲನಗರ:

ಆರೋಗ್ಯ ಇಲಾಖೆಯ ಆರ್‌ಆರ್‌ಟಿ ತಂಡದಿAದ ಕುಶಾಲನಗರ ಪುರಸಭೆ ವ್ಯಾಪ್ತಿಯಲ್ಲಿ ಸೋಮವಾರ ಆರೋಗ್ಯ ಜಾಗೃತಿ ಮೂಡಿಸಲಾಯಿತು.

ವಿವಿಧ ಬಡಾವಣೆಗಳ ಮನೆ ಮನೆಗಳಿಗೆ ತೆರಳಿದ ಈ ತಂಡ ಈಡಿಸ್ ಲಾರ್ವಾ ಸಮೀಕ್ಷೆ, ಜ್ವರ ಸಮೀಕ್ಷೆ ನಡೆಸಿದಲ್ಲದೆ ಡೆಂಗ್ಯೂ ಜ್ವರದ ಬಗ್ಗೆ ಹಾಗೂ ಮಲೇರಿಯಾ ಜ್ವರ, ಚಿಕೂನ್ ಗುನ್ಯಾ ಜ್ವರದ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ಕರಪತ್ರಗಳನ್ನು ನೀಡಿ ಅರಿವು ಮೂಡಿಸಿದರು.

ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟುವ ಕುರಿತು ಜಾಗೃತಿ ಕಾರ್ಯಕ್ರಮ ನಡೆಸಿದರು. ಎಲ್ಲಾ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಆರ್.ಆರ್.ಟಿ ತಂಡದಲ್ಲಿ ಆರೋಗ್ಯ ನಿರೀಕ್ಷಣಾಧಿಕಾರಿ ಲೋಕೇಶ್ ,ಚಂದ್ರೇಶ್, ಶಿವಪ್ಪ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು ಹಾಗೂ ಆಶಾ ಕಾರ್ಯಕರ್ತೆಯರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net