More

    ಆರೋಗ್ಯ ಶಿಬಿರಗಳು ಬಡವರಿಗೆ ಸಹಕಾರಿ

    ಕೋಲಾರ: ಗ್ರಾಮೀಣ ಜನರ ಆರೋಗ್ಯ ಜಾಗೃತಿಗೆ ಉಚಿತ ಆರೋಗ್ಯ ಶಿಬಿರಗಳು ಸಹಕಾರಿಯಾಗಿವೆ. ಬಡ ಜನತೆ ಆರೋಗ್ಯದ ಬಗ್ಗೆ ರ್ನಿಲಕ್ಷ$್ಯಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜೆಡಿಎಸ್​ ಮುಖಂಡ ಸಿಎಂಆರ್​ ಶ್ರೀನಾಥ್​ ಹೇಳಿದರು.

    ತಾಲೂಕಿನ ಕ್ಯಾಲನೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶನಿವಾರ ಸಿಎಂಆರ್​ ಶ್ರೀನಾಥ್​ ೌಂಡೇಷನ್​ ಹಾಗೂ ಆರ್​.ಎಲ್​.ಜಾಲಪ್ಪ ಆಸ್ಪತ್ರೆ ವತಿಯಿಂದ ಆಯೋಜಿಸಿದ್ದ ಉಚಿತ ವೈದ್ಯಕಿಯ ಶಿಬಿರದಲ್ಲಿ ಭಾಗವಹಿಸಿ ಮಾತನಾಡಿ, ಕಾಯಿಲೆ ಬರುವ ಮುನ್ನಾವೇ ಎಚ್ಚರ ವಹಿಸಿದರೆ ಮಾತ್ರ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ ಎಂದರು.
    ಚಿಕ್ಕಮಕ್ಕಳಿಂದ ಹಿರಿಯರೂ ಆರೋಗ್ಯವಾಗಿದ್ದರೆ ಸುಖವಾಗಿ ಜೀವನ ನಡೆಸಲು ಸಾಧ್ಯ. ಇಲ್ಲವಾದರೆ ದುಡಿದ ಹಣವನ್ನು ಆಸ್ಪತ್ರೆಗೆ ಖರ್ಚುಮಾಡಬೇಕಾಗುತ್ತದೆ. ಆದ್ದರಿಂದ ರೋಗದ ಲಣಗಳು ಬರುವ ಮುನ್ನವೇ ಆರೋಗ್ಯ ತಪಾಸಣೆ ಮಾಡಿಸಿಕೊಂಡು ವೈದ್ಯರು ನೀಡುವ ಸಲಹೆಗಳನ್ನು ಪಾಲಿಸಬೇಕು. ಆರೋಗ್ಯ ಶಿಬಿರಗಳಿಂದ ಬಡವರಿಗೆ ಸಾಕಷ್ಟು ಅನುಕೂಲವಾಗುತ್ತದೆ. ಇಂತಹ ಶಿಬಿರಗಳು ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಾಗಿ ಆಯೋಜಿಸಲಾಗುತ್ತಿದೆ. ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದರು.
    ಭಾರತ ಸೇವಾದಳ ಜಿಲ್ಲಾಧ್ಯ ಕೆ.ಎಸ್​.ಗಣೇಶ್​ ಮಾತನಾಡಿ, ಇಂದಿನ ಕಾಪೋರ್ರೆಟ್​ ಯುಗದಲ್ಲಿ ಮನುಷ್ಯನಿಗೆ ಆರೋಗ್ಯ ಮತ್ತು ಶಿಣ ಎಂಬುದು ಬಡವರಿಗೆ ದೂರದ ಮಾತಾಗಿದೆ. ಇಂತಹ ಸಂದರ್ಭದಲ್ಲಿ ಬಡವರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರಗಳನ್ನು ಹಮ್ಮಿಕೊಳ್ಳಲಾಗಿದೆ. ಇದರ ಸದುಪಯೋಗವನ್ನು ಪ್ರತಿಯೊಬ್ಬರೂ ಬಳಸಿಕೊಳ್ಳುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣ ಮಾಡಬೇಕಾಗಿದೆ ಎಂದರು. ಶಿಬಿರದಲ್ಲಿ ಸುಮಾರು 450ಕ್ಕೂ ಹೆಚ್ಚು ರೋಗಿಗಳು ಭಾಗವಹಿಸಿ, ಚಿಕಿತ್ಸೆ ಪಡೆದುಕೊಂಡರು.
    ಮುಖಂಡರಾದ ಅಮ್ಮನಲ್ಲೂರು ರಮೇಶ್​, ರಾಮಣ್ಣ, ನರಸಿಂಹಪ್ಪ, ಬೈರಾಂಡಹಳ್ಳಿ ವೆಂಕಟೇಶ್​, ಪ್ರಕಾಶ್​, ನಾಗೇಶ್​, ಬಾಬಾಸಾಬ್​, ಬಿಎಸ್​ಎನ್​ಎಲ್​ ವೆಂಕಟೇಶ್​, ವೈದ್ಯರಾದ ಪ್ರದಿಪ್​, ಸುನೀಲ್​, ಪ್ರಸನ್ನ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts