

ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ
ನೀರು ಅತಿ ಅಮೂಲ್ಯವಾದ ಸಂಪತ್ತಾಗಿದ್ದು, ನಮ್ಮ ಆರೋಗ್ಯವನ್ನು ಕಾಪಾಡಲು ಪ್ರಕೃತಿಯು ನೀಡಿದ ಕೊಡುಗೆಯಾಗಿದೆ ಎಂದು ಶ್ರೀ ೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನವಿಕಾಸ ಕಾರ್ಯಕ್ರಮದ ಅಧ್ಯೆ ಹೇಮಾವತಿ ವೀ.ಹೆಗ್ಗಡೆ ಹೇಳಿದರು.
ರಾಜ್ಯಾದ್ಯಂತ ಶುದ್ಧ ಗಂಗಾ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೇಲ್ವಿಚಾರಕರೊಂದಿಗೆ ಮಾತನಾಡಿ, ಮಾನವ ಆಹಾರ ಇಲ್ಲದೆ 10 ದಿನವಾದರೂ ಬದುಕಬಹುದು. ನೀರಿಲ್ಲದೆ ಬದುಕಲು ಸಾಧ್ಯವಿಲ್ಲ. ನೀರು ಆರೋಗ್ಯದ ಮೇಲೆ ನೇರ ಪರಿಣಾಮ ಬೀರುತ್ತಿದೆ. ಅಶುದ್ಧ ನೀರನ್ನು ಕುಡಿಯುವುದರಿಂದ ಮುಖ್ಯವಾಗಿ ಮಹಿಳೆಯರ ಮತ್ತು ಮಕ್ಕಳು ಹಾಗೂ ಜನ ಸಾಮಾನ್ಯರ ಮೇಲೆ ಆಗುತ್ತಿರುವ ಅನಾರೋಗ್ಯ ಸಮಸ್ಯೆಯನ್ನು ಮನಗಂಡು ಎಲ್ಲಿ ನೋವಿದೆಯೋ ಅಲ್ಲಿ ಔಷಧ ನೀಡಬೇಕೆಂದು ಶುದ್ಧ ನೀರಿನ ಸಮಸ್ಯೆ ಇರುವಲ್ಲಿ ಯೋಜನೆ ಮೂಲಕ ಶುದ್ಧಕುಡಿಯುವ ನೀರಿನ ಟಕಗಳನ್ನು ಆರಂಭಿಸಲಾಗಿದೆ.
ಶುದ್ಧಗಂಗಾ ಟಕಗಳ ಶುದ್ಧ ನೀರನ್ನು ಬಳಸುವುದರಿಂದ ಅದೆಷ್ಟೋ ಜನರ ಆರೋಗ್ಯ ರಕ್ಷಣೆಯಾಗಿದೆ. ಮನೆಯಲ್ಲಿ ನೀರಿನ ವ್ಯವಸ್ಥೆಯ ಜವಾಬ್ದಾರಿ ಹೆಚ್ಚಾಗಿ ಮಹಿಳೆಯರಿಗೆ ಇದೆ. ಇಂದು ಶುದ್ಧ ನೀರು ಬಳಕೆಯಿಂದ ಮಹಿಳೆ ತನ್ನ ಹಾಗೂ ತನ್ನ ಕುಟುಂಬದ ಆರೋಗ್ಯ ರಸಿಕೊಳ್ಳುತ್ತಿದ್ದಾರೆ ಎಂದರು.
ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್ ಕುಮಾರ್ಎಸ್.ಎಸ್, ಸಮುದಾಯ ಮತ್ತು ಅಭಿವೃದ್ಧಿ ವಿಭಾಗದ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ, ವಿಭಾಗದ ನಿರ್ದೇಶಕ ಶಿವಾನಂದ ಆಚಾರ್ಯ, ಯೋಜನಾಧಿಕಾರಿಗಳಾದ ಯುವರಾಜ್ಜೈನ್, ಫಕ್ಕೀರಪ್ಪ ಬೆಲ್ಲಾಮುದ್ದಿ ಉಪಸ್ಥಿತರಿದ್ದರು.