ಜಾತಿ, ಮತ-ಧರ್ಮ ಮರೆತು ರಕ್ತದಾನ : ಪ್ರಮೋದ್ ಕುಮಾರ್ ಹೇಳಿಕೆ

New Project (35)
Published on

ಗುರುಪುರ: ಜಾತಿ, ಮತ-ಧರ್ಮ ಮರೆತು ನಾವು ನೀಡುವ ರಕ್ತದಿಂದ ಎಷ್ಟೋ ಜೀವಗಳು ಉಳಿಯುತ್ತವೆ. ಸಂಘ-ಸಂಸ್ಥೆಗಳು ರಕ್ತದಾನ ಶಿಬಿರಗಳನ್ನು ನಡೆಸುತ್ತಿರಬೇಕು ಎಂದು ಸುರತ್ಕಲ್ ಠಾಣೆ ಪೊಲೀಸ್ ನಿರೀಕ್ಷಕ ಪ್ರಮೋದ್ ಕುಮಾರ್ ಹೇಳಿದರು.

ಸುರತ್ಕಲ್ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಸೇವಾ ಟ್ರಸ್ಟ್, ಮಂಗಳೂರು ವಿಶೇಷ ಆರ್ಥಿಕ ವಲಯ ಮತ್ತು ಲಯನ್ಸ್ ಕ್ಲಬ್ ಸುರತ್ಕಲ್ ಆಶ್ರಯದಲ್ಲಿ ಕೆಎಂಸಿ ಆಸ್ಪತ್ರೆ ಮಂಗಳೂರು ಮತ್ತು ಎಜೆ ಆಸ್ಪತ್ರೆ-ಸಂಶೋಧನಾ ಸೆಂಟರ್ ಮಂಗಳೂರು ಸಹಯೋಗದಲ್ಲಿ ಸುರತ್ಕಲ್ ವಿದ್ಯಾದಾಯಿನಿ ಪ್ರೌಢಶಾಲಾ ಸಭಾಂಗಣದಲ್ಲಿ ರಕ್ತದಾನ ಶಿಬಿರ ಮತ್ತು ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಮುಕ್ಕ ಮೆಡಿಸಿನ್ ಪ್ರೊ.ಡಾ.ಸುನೀಲ್ ಕುಮಾರ್, ಬಾಳ ಬಿಎಎಸ್‌ಎಫ್‌ನ ಸಂತೋಷ್ ಪೈ, ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಬಾಳ ಜಗನ್ನಾಥ ಶೆಟ್ಟಿ, ಉದ್ಯಮಿ ಶರತ್ಚಂದ್ರ ಭಟ್ ಕುಕ್ಕುಂಜೆ, ಸುರತ್ಕಲ್ ಲಯನ್ಸ್ ಕ್ಲಬ್ ಅಧ್ಯಕ್ಷೆ ಶಶಿಕಲಾ ಶೆಟ್ಟಿ, ಬಾಲಕೃಷ್ಣ ಶೆಟ್ಟಿ ಕೆಂಚನೂರು, ಸುರತ್ಕಲ್ ಹಿಂದು ವಿದ್ಯಾದಾಯಿನಿ ಸಂಘದ ಕಾರ್ಯದರ್ಶಿ ಎಚ್.ಶ್ರೀರಂಗ, ಟ್ರಸ್ಟ್ ಗೌರವಾಧ್ಯಕ್ಷ ಮಹಾಬಲ ಪೂಜಾರಿ ಕಡಂಬೋಡಿ, ಅಧ್ಯಕ್ಷ ಮನೋಹರ ಶೆಟ್ಟಿ ಸೂರಿಂಜೆ, ಉಪಾಧ್ಯಕ್ಷ ನಾಗರಾಜ ಕಡಂಬೋಡಿ, ಸಂಚಾಲಕ ಸಂತೋಷ್ ಬೇಕಲ್, ಅನಿಲ್ ಶೆಟ್ಟಿ ತೇವು ಸೂರಿಂಜೆ ಮತ್ತಿತರರು ಉಪಸ್ಥಿತರಿದ್ದರು.

ಮಂಗಳೂರು ವಿಶೇಷ ಆರ್ಥಿಕ ವಲಯದ ಅಧಿಕಾರಿ ಫಣಿಭೂಷಣ್ ಅಧ್ಯಕ್ಷತೆ ವಹಿಸಿದ್ದರು. ಟ್ರಸ್ಟ್ ಕಾರ್ಯದರ್ಶಿ ಕಿರಣ್ ಆಚಾರ್ಯ ಸ್ವಾಗತಿಸಿದರು. ಜಯಪ್ರಕಾಶ್ ಸೂರಿಂಜೆ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net