More

    ನರೇಗಾ ಕಾರ್ಮಿಕರಿಗೆ ಆರೋಗ್ಯ ತಪಾಸಣೆ

    ಚಾಮರಾಜನಗರ: ತಾಲೂಕಿನ ಗುಂಬಳ್ಳಿ ಗ್ರಾಮ ಪಂಚಾಯಿತಿ ವತಿಯಿಂದ ಉದ್ಯೋಗ ಖಾತ್ರಿ ಕೂಲಿ ಕಾರ್ಮಿಕರಿಗೆ ಆರೋಗ್ಯ ಅಮೃತ ಅಭಿಯಾನ ಯೋಜನೆಯಡಿಯಲ್ಲಿ ಆರೋಗ್ಯ ತಪಾಸಣೆ ನಡೆಸಲಾಯಿತು.


    ಗ್ರಾಮದ ಕೆರೆಯ ಏರಿ ಮೇಲೆ ಜಂಗಲ್ ಕಟಿಂಗ್ ಮಾಡುತ್ತಿದ್ದ ಕೂಲಿ ಕಾರ್ಮಿಕರಿಗೆ ಆರೋಗ್ಯ ತಪಾಸಣೆ ಮಾಡಲಾಯಿತು. ಈ ಸಂದರ್ಭ ಗ್ರಾಮ ಪಂಚಾಯಿತಿ ಆರೋಗ್ಯ ಅಮೃತ ಅಭಿಯಾನದ ತಾಲೂಕು ಸಂಯೋಜಕ ಬಿ. ಸಿದ್ದರಾಜು ಮಾತನಾಡಿ, ಪ್ರತಿ ಗ್ರಾಮ ಪಂಚಾಯಿತಿಯಲ್ಲೂ ಆರೋಗ್ಯ ಅಮೃತ ಅಭಿಯಾನ ಯೋಜನೆಯಡಿಯಲ್ಲಿ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣೆ ನಡೆಸಲಾಗುತ್ತದೆ. ಇಲ್ಲಿ ಸಾಮಾನ್ಯ ಕಾಯಿಲೆಗೆ ಔಷಧೋಪಚಾರ ನೀಡಲಾಗುತ್ತದೆ ಹೆಚ್ಚಿನ ಸಮಸ್ಯೆಗಳು ಇದ್ದಲ್ಲಿ ಇಂತಹವರಿಗೆ ಹೆಚ್ಚಿನ ಚಿಕಿತ್ಸೆಗೆ ಸಂಬಂಧಪಟ್ಟ ಆರೋಗ್ಯ ಆಸ್ಪತ್ರೆಗೆ ಕಳುಹಿಸಲು ಕ್ರಮ ವಹಿಸಲಾಗುತ್ತದೆ. ಗುಂಬಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಟ್ಟು 183 ಜನರಿಗೆ ಆರೋಗ್ಯ ತಪಾಸಣೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು. ಸಿಎಚ್‌ಒ ಪ್ರಿಯದರ್ಶಿನಿ, ಬಿಲ್ ಕಲೆಕ್ಟರ್ ಕಿಟ್ಟಿ ಸೇರಿದಂತೆ ಆರೋಗ್ಯ ಕಾರ್ಯಪಡೆಯ ಸಿಬ್ಬಂದಿ ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts