ಹೆಬ್ರಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ಹೆಬ್ರಿ ತಾಲೂಕು, ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮ ಲಯನ್ಸ್ ಕ್ಲಬ್ ಸಿಟಿ ಹೆಬ್ರಿ, ಪಾರ್ವತಿ ಚಾರಿಟೆಬಲ್ ಟ್ರಸ್ಟ್ ಶೀರೂರು ಮುದ್ದುಮನೆ ಹಾಗೂ ಗ್ರಾಪಂ ಚಾರ ಸಂಯುಕ್ತ ಆಶ್ರಯದಲ್ಲಿ ಆರೋಗ್ಯ ತಪಾಸಣಾ ಕಾರ್ಯಕ್ರಮ ಇತ್ತೀಚಿಗೆ ನಡೆಯಿತು.
ಹೆಬ್ರಿ ತಾಲೂಕಿನ ಜನಜಾಗೃತಿ ಅಧ್ಯಕ್ಷ ನೀರೆ ಕೃಷ್ಣ ಶೆಟ್ಟಿ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಎಲ್ಲ ಕಾರ್ಯಕ್ರಮಗಳು, ತಾಲೂಕಿನಲ್ಲಿ ಅತ್ಯುತ್ತಮವಾಗಿ ಜನರಿಗೆ ತಲುಪುತ್ತಿದೆ ಎಂದರು.
ಲಯನ್ಸ್ ಕ್ಲಬ್ ಸಿಟಿ ಹೆಬ್ರಿ ಅಧ್ಯಕ್ಷ ನಾಗೇಶ್ ನಾಯಕ್ ಕಾರ್ಯಕ್ರಮ ಉದ್ಘಾಟಿಸಿದರು. ಹೆಬ್ರಿ ತಾಲೂಕಿನ ಯೋಜನಾಧಿಕಾರಿ ಲೀಲಾವತಿ, ಪಾರ್ವತಿ ಮಹಾಬಲ ಶೆಟ್ಟಿ ಚಾರಿಟೆಬಲ್ ಟ್ರಸ್ಟ್ ನ ಶಂಕರ್ ಶೆಟ್ಟಿ, ಚಾರ ವಲಯದ ಜನಜಾಗೃತಿ ಅಧ್ಯಕ್ಷ ವಾದಿರಾಜ ಶೆಟ್ಟಿ, ಚಾರ ಗಣೇಶೋತ್ಸವ ಸಮಿತಿ ಅಧ್ಯಕ್ಷ ಸತೀಶ್ ಗಾಣಿಗ, ಒಕ್ಕೂಟದ ಅಧ್ಯಕ್ಷೆ ಜ್ಯೋತಿ ಎಂ., ಶೌರ್ಯ ವಿಪತ್ತು ಘಟಕ ಅಧ್ಯಕ್ಷ ಚಂದ್ರ ನಾಯ್ಕ, ಲಯನ್ಸ್ ಕ್ಲಬ್ ಹೆಬ್ರಿ ಸಿಟಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.