ಆರೋಗ್ಯದಲ್ಲಿ ಏರುಪೇರು; ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾದ ಹೆಚ್‌ಡಿ ದೇವೇಗೌಡ್ರು| Bangalore

Devegowda
Published on

ಬೆಂಗಳೂರು: ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಈ ಹಿನ್ನೆಲೆ ಅವರನ್ನು ಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರ ಚಿಕಿತ್ಸೆ ಬಳಿಕ ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ನಿನ್ನೆ ತಡರಾತ್ರಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಹೆಚ್​ಡಿಡಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೂ ದೇವೇಗೌಡರಿಗೆ ಏನಾಗಿದೆ ಎನ್ನುವ ಬಗ್ಗೆ ಶೀಘ್ರದಲ್ಲಿಯೇ ಆಸ್ಪತ್ರೆಯಿಂದ ಅಧಿಕೃತ ಮಾಹಿತಿ ಹೊರಬೀಳಲಿದೆ.

ಇದನ್ನೂ ಓದಿ: ರಾಯ್ ಬರೇಲಿಯಲ್ಲಿ ವ್ಯಕ್ತಿಯ ಭೀಕರ ಹತ್ಯೆ: ಸಂವಿಧಾನ ವಿರುದ್ಧದ ಅಪರಾಧ ಎಂದು ಖರ್ಗೆ, ರಾಹುಲ್​ ಖಂಡನೆ |Rae Bareli 92 ವರ್ಷದ ದೇವೇಗೌಡರ ಆರೋಗ್ಯದಲ್ಲಿ ಸ್ವಲ್ಪ ಮಟ್ಟದ ಬದಲಾವಣೆಯುಂಟಾಗಿದೆ. ಹೀಗಾಗಿ ಅವರನ್ನು ಹಳೇ ವಿಮಾನ ನಿಲ್ದಾಣ ರಸ್ತೆಯ ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ವೈದ್ಯರ ಚಿಕಿತ್ಸೆ ಬಳಿಕ ಅವರ ಆರೋಗ್ಯದಲ್ಲಿ ಚೇತರಿಗೆ ಕಂಡುಬಂದಿದೆ ಎನ್ನಲಾಗಿದೆ.

ಬಿಜೆಪಿ-ಜೆಡಿಎಸ್ ಮೈತ್ರಿ ಘೋಷಣೆ

ಅಕ್ಟೋಬರ್​ 3 ರಂದು ದೇವೇಗೌಡರವರು ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ, ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಮುಂದುವರೆಯುತ್ತದೆ. ಇದು ವಿಧಾನಸಭೆ, ಸಂಸತ್ತು, ಜಿಲ್ಲಾ ಪಂಚಾಯಿತಿ, ನಗರ ಸಂಸ್ಥೆಗಳು ಸೇರಿದಂತೆ ಎಲ್ಲಾ ಭವಿಷ್ಯದ ಚುನಾವಣೆಗಳಿಗೆ ವಿಸ್ತರಿಸುತ್ತದೆ ಎಂದರು. ಪ್ರಧಾನಮಂತ್ರಿ ನರೇಂದ್ರ ಮೋದಿಯೊಂದಿಗಿನ ಸಂಬಂಧವು ಬದಲಾಗುವುದಿಲ್ಲ. ಈ ಮೈತ್ರಿಯ ಮೂಲಕ ಜೆಡಿಎಸ್ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಬಲಪಡಿಸಿಕೊಳ್ಳುವ ಗುರಿ ಹೊಂದಿದೆ ಎಂದು ದೇವೇಗೌಡರು ಹೇಳಿದ್ದರು.

(ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net