More

    ನಾಳೆಯಿಂದ ತೀವ್ರಗೊಳ್ಳಲಿದೆ ಆರೋಗ್ಯ ಇಲಾಖೆ ಒಳಗುತ್ತಿಗೆ ನೌಕರರ ಸಂಘದ ಅನಿರ್ದಿಷ್ಟಾವಧಿ ಮುಷ್ಕರ

    ಬೆಂಗಳೂರು: ಆರೋಗ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಒಳಗುತ್ತಿಗೆ ನೌಕರರನ್ನು ಕಾಯಂಗೊಳಿಸುವುದು ಸೇರಿ ಇತರೆ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಒಳಗುತ್ತಿಗೆ ನೌಕರರ ಸಂಘ, ಸೋಮವಾರದಿಂದ (ಮಾ.13) ಸ್ವಾತಂತ್ರ್ಯ ಉದ್ಯಾನದಲ್ಲಿ ಅನಿರ್ಧಿಷ್ಟಾವಧಿ ಮುಷ್ಕರ ತೀವ್ರಗೊಳಿಸಲು ಮುಂದಾಗಿದೆ.

    ಇದನ್ನೂ ಓದಿ: ಮಧುರೆ ದೇಗುಲದಲ್ಲಿ ‘ಮಾಂಸದ ಹಾರ’: ಪ್ರಕರಣದ ಹಿಂದಿರುವುದು ಬೇರಾರೂ ಅಲ್ಲ, ಜ್ಯೋತಿಷಿ!

    ಇಲಾಖೆಯಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ (ಎನ್‌ಎಚ್‌ಎಂ) 30 ಸಾವಿರಕ್ಕೂ ಹೆಚ್ಚು ಒಳಗುತ್ತಿಗೆ ನೌಕರರು 15-20 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರನ್ನು ಕಾಯಂಗೊಳಿಸುವಂತೆ ಸರ್ಕಾರಕ್ಕೆ ಹಲವು ಬಾರಿ ಮನವಿ ಮಾಡಿದ್ದರೂ ಪ್ರಯೋಜನವಾಗಿಲ್ಲ. ಫೆ.13ರಿಂದ ಸ್ವಾತಂತ್ರ್ಯ ಉದ್ಯಾನವದಲ್ಲಿ ಮುಷ್ಕರ ನಡೆಸಲಾಗುತ್ತಿದೆ. ಇದುವರೆಗೂ ನಮ್ಮ ಬೇಡಿಕೆ ಈಡೇರಿಸಲು ಸರ್ಕಾರ ಮುಂದಾಗಿಲ್ಲ. ಹಾಗಾಗಿ, ಇನ್ನಷ್ಟು ಪರಿಣಾಮಕಾರಿಯಾಗಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಎಸ್. ಕುಮಾರ್ ಹೇಳಿದ್ದಾರೆ.

    ಇದನ್ನೂ ಓದಿ: ಪ್ರಿಯಕರನ ಭೇಟಿಗೆಂದು ಬಂದ ಗಗನಸಖಿ ಮಹಡಿಯಿಂದ ಕೆಳಕ್ಕೆ ಬಿದ್ದು ಸಾವು; ಪರಿಚಯ-ಪ್ರೇಮವಾದ 6 ತಿಂಗಳಲ್ಲೇ ಮರಣ

    ಮಣಿಪುರ ಸರ್ಕಾರ ಅಲ್ಲಿನ ಎನ್‌ಎಚ್‌ಎಂ ಒಳಗುತ್ತಿಗೆ ನೌಕರರನ್ನು ಕಾಯಂ ಮಾಡಿದೆ. ಒಡಿಸ್ಸಾ, ರಾಜಸ್ಥಾನ, ಪಂಜಾಬ್ ಮತ್ತು ಹಿಮಾಚಲಪ್ರದೇಶ ರಾಜ್ಯಗಳಲ್ಲೂ ಅಲ್ಲಿನ ಸರ್ಕಾರಗಳು ಒಳಗುತ್ತಿಗೆ ನೌಕರರ ಸೇವೆ ಕಾಯಂಗೊಳಿಸುವ ಪ್ರಕ್ರಿಯೆ ಆರಂಭಿಸಿವೆ. ಅದೇ ಮಾದರಿಯಲ್ಲಿ ನಮ್ಮನ್ನು ಇಲ್ಲಿನ ಸರ್ಕಾರ ಕಾಯಂ ಮಾಡಬೇಕು. ಎನ್‌ಎಚ್‌ಎಂ ಕಾರ್ಯಕ್ರಮಗಳ ಕರ್ತವ್ಯದ ಜತೆಗೆ ಕೋವಿಡ್ ಸೋಂಕಿತರ ಆರೈಕೆ, ವ್ಯಾಕ್ಸಿನ್ ನೀಡಿ ಜನರ ಆರೋಗ್ಯ ಕಾಪಾಡುವ ಕೆಲಸ ಮಾಡುತ್ತಿದ್ದೇವೆ. ಕಡಿಮೆ ವೇತನದಲ್ಲಿ ನಾವು ಜೀವನ ಸಾಗಿಸುವುದು ದುಸ್ತರವಾಗಿದೆ. ಆದ್ದರಿಂದ, ನಮ್ಮ ಸೇವೆಯನ್ನು ಕಾಯಂಗೊಳಿಸಿ ವೇತನ ಹೆಚ್ಚಿಸಬೇಕೆಂದು ಸರ್ಕಾರಕ್ಕೆ ಕುಮಾರ್ ಒತ್ತಾಯಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts