ಯುವಕರಿಂದ ಸಮಾಜದ ಸ್ವಾಸ್ಥ್ಯ ರಕ್ಷಣೆ

Kdb_Swasthya
Published on

ವಿಜಯವಾಣಿ ಸುದ್ದಿಜಾಲ ಕಡಬ

ಪ್ರತಿ ಮಗು ದೇಶದ ಬಹುದೊಡ್ಡ ಸಂಪತ್ತು. ಸಮಾಜದ ಸ್ವಾಸ್ಥ್ಯ ಪೋಷಿಸಿ ಬೆಳೆಸುವ ಜವಾಬ್ದಾರಿ ಯುವ ಪೀಳಿಗೆಯಿಂದ ಆಗಬೇಕು. ಈ ನೆಲೆಯಲ್ಲಿ ಮಕ್ಕಳ ಮನಸ್ಸಿಗೆ ದುಶ್ಚಟದ ದುಷ್ಪರಿಣಾಮದ ತಿಳುವಳಿಕೆ ನೀಡುವ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಜಾಗೃತಿ ವೇದಿಕೆಯ ಕಾರ್ಯ ಶ್ಲಾಘನೀಯ ಎಂದು ಶ್ರೀ ಸುಬ್ರಹ್ಮಣ್ಯ ಎಜುಕೇಶನ್ ಸೊಸೈಟಿಯ ಕಾರ್ಯದರ್ಶಿ ಕೃಷ್ಣಶರ್ಮ ಪಿ.ಹೇಳಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಳಿನೆಲೆ ವಲಯ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಡಬ ತಾಲೂಕು ಬಿಳಿನೆಲೆ ವಲಯದ ವತಿಯಿಂದ ಬಿಳಿನೆಲೆ ಶ್ರೀ ಗೊಪಾಲಕೃಷ್ಣ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ಉಧ್ಘಾಟಿಸಿ ಮಾತನಾಡಿದರು.
ಕಡಬ ಯುವಜನ ಒಕ್ಕೂಟದ ಅಧ್ಯಕ್ಷ ಮತ್ತು ಜನಜಾಗೃತಿ ವೇದಿಕೆ ಸದಸ್ಯ ಶಿವಪ್ರಸಾದ್ ರೈ ಮೈಲೇರಿ ಸಂಪನ್ಮೂಲ ವ್ಯಕ್ತಿಯಾಗಿದ್ದರು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಸದಸ್ಶ ಗೊಪಾಲಕೃಷ್ಣ ಭಟ್ ಅಧ್ಯಕ್ಷತೆ ವಹಿಸಿದ್ದರು.

ಭಜನಾ ಪರಿಷತ್ ಕಡಬ ತಾಲೂಕು ಅಧ್ಯಕ್ಷ ಸುಂದರ ಗೌಡ ಒಗ್ಗು, ಜನಜಾಗೃತಿ ಸದಸ್ಯೆ ಶಾರದಾ, ನಿಕಟಪೂರ್ವ ವಲಯಾಧ್ಯಕ್ಷ ಸತೀಶ್ ಎರ್ಕ, ಬಿಳಿನೆಲೆ ಒಕ್ಕೂಟದ ಅಧ್ಯಕ್ಷ ರಾಜೇಶ್ ಒಗ್ಗು, ಪ್ರೌಢಶಾಲೆ ಮುಖ್ಯಶಿಕ್ಷಕ ಸತ್ಯಶಂಕರ ಎಂ., ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕುಶಾಲಪ್ಪ ಗೌಡ ಸಣ್ಣಾರ ಶಾಲಾ ವಿದ್ಯಾರ್ಥಿ ನಾಯಕಿ ಸುಧೀಕ್ಷಾ ಕುಂದರ್ ಉಪಸ್ಥಿತರಿದ್ದರು. ಬಿಳಿನೆಲೆ ವಲಯ ಮೇಲ್ವಿಚಾರಕ ರವಿಪ್ರಸಾದ್ ಆಲಾಜೆ ಪ್ರಾಸ್ತಾವಿಸಿ ಸ್ವಾಗತಿಸಿದರು. ಶಿಕ್ಷಕ ದಿನೇಶ್ ಕುಂದರ್ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net