More

    ಬಾಲ್ಯವಿವಾಹದಿಂದ ಆರೋಗ್ಯದ ಮೇಲೆ ಪರಿಣಾಮ

    ಬಂಗಾರಪೇಟೆ: ಎಲ್ಲ ಮಕ್ಕಳಿಗೂ ಸಮಗ್ರ ವ್ಯಕ್ತಿಯಾಗಿ ಬೆಳೆಯುವ ಹಕ್ಕು ಇದೆ. ಬಾಲ್ಯದಲ್ಲಿ ವಿವಾಹ ಮಾಡುವುದರಿಂದ ದೈಹಿಕ, ಮಾನಸಿಕ ಹಾಗೂ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಅಪ್ರಾಪ್ತ ವಯಸ್ಸಿನ ಹೆಣ್ಣು ಮಕ್ಕಳು ಬಲಾತ್ಕಾರವಾಗಿ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗುತ್ತಿದ್ದಾರೆ. ಈ ಹಿಂದೆ ಶೇ.೩೫ ಬಾಲ್ಯವಿವಾಹಗಳು ನಡೆಯುತ್ತಿದ್ದವು ಜಾಗೃತಿಯಿಂದಾಗಿ ಈ ಪ್ರಮಾಣದಲ್ಲಿ ಕಡಿಮೆಯಾಗಿದೆ ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶ ಬಿ. ಕೇಶವಮೂರ್ತಿ ಹೇಳಿದರು.

    ಪಟ್ಟಣದ ಸಂತೋಷ್ ಕಾಲೇಜಿನಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ಮತ್ತು ವಕೀಲರ ಸಂಘದ ಸಹಯೋಗದಲ್ಲಿ ಸೋಮವಾರ ಆಯೋಜಿಸಿದ್ದ ಬಾಲ್ಯವಿವಾಹಮುಕ್ತ ಕರ್ನಾಟಕ ಅಭಿಯಾನವನ್ನು ಉದ್ಘಾಟಿಸಿ ಮಾತನಾಡಿದರು.
    ಬಾಲ್ಯವಿವಾಹದಿಂದ ಅಪ್ರಾಪ್ತ ವಯಸ್ಸಿನಲ್ಲಿ ಗರ್ಭಿಣಿಯಾಗುವುದರಿಂದ ಹೆರಿಗೆ ಸಮಯದಲ್ಲಿ ಅಕಾಲಿ ಮರಣಕ್ಕೆ ತುತ್ತಾಗುವ ಸಾಧ್ಯತೆ ಹಾಗೂ ಲೈಂಗಿಕ ಕಾಯಿಲೆಗಳಿಗೆ ಗುರಿಯಾಗುವ ಸಾಧ್ಯತೆಗಳಿವೆ. ಮಕ್ಕಳ ಮೇಲೆ ವಯಸ್ಸಿಗೆ ಮೀರಿದ ಜವಾಬ್ದಾರಿ ಹೇರಿದಂತಾಗುತ್ತದೆ. ಈ ಕೃತ್ಯವನ್ನು ತಡೆಯಲು ನಮಗೆ ಜನಸಾಮಾನ್ಯರ ನೆರವು ಬೇಕಾಗುತ್ತದೆ. ಯಾರಿಗೇ ವಿಷಯ ತಿಳಿದರೂ ಆ ತಾಲೂಕಿನ ನ್ಯಾಯಾಲಯದಲ್ಲಿ ಕಾನೂನು ಸೇವಾ ಸಮಿತಿ ಸಂಪರ್ಕಿಸಿದರೆ ಕೂಡಲೇ ಸೂಕ್ತ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts