More

    ಕ್ರೀಡೆಯಿಂದ ಆರೋಗ್ಯ ಸುಧಾರಣೆ

    ಬಾಗಲಕೋಟೆ: ಕ್ರೀಡೆಗೆ ಬಹಳಷ್ಟು ಮಹತ್ವ ಇದೆ. ಪ್ರಸ್ತುತ ಕ್ರೀಡಾಪಟುಗಳಿಗೆ ದೇಶದಲ್ಲಿ ಮಹತ್ವದ ಅವಕಾಶ ಕಲ್ಪಿಸಲಾಗುತ್ತಿದೆ. ಕ್ರೀಡೆಯಿಂದ ಮಾನಸಿಕ, ದೈಹಿಕ ಆರೋಗ್ಯ ಸುಧಾರಣೆಯಾಗುತ್ತದೆ ಎಂದು ವಿಪ ಸದಸ್ಯ ಹಣಮಂತ ನಿರಾಣಿ ಹೇಳಿದರು.

    ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಆಶ್ರಯದಲ್ಲಿ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ಹಮ್ಮಿಕೊಂಡ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ ನೀಡಿ ಅವರು ಮಾತನಾಡಿದರು.

    ಜಿಪಂ ಸಿಇಒ ಶಶಿಧರ ಕುರೇರ ಮಾತನಾಡಿ, ಕ್ರೀಡಾಕೂಟದಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಗಳನ್ನು ಪ್ರದರ್ಶಿಸುವ ಜತೆಗೆ ಪ್ರತಿನಿತ್ಯ ವ್ಯಾಯಾಮ ಹಾಗೂ ಕ್ರೀಡೆಗಳಲ್ಲಿ ತೊಡಗಿಕೊಳ್ಳುವ ಮೂಲಕ ದೈಹಿಕ ಹಾಗೂ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದರು.

    ಜಿಲ್ಲಾಧಿಕಾರಿ ಜಾನಕಿ ಕೆ.ಎಂ. ಮಾತನಾಡಿ, ಜಿಲ್ಲೆಯ ಕ್ರೀಡಾಪಟುಗಳಿಗೆ ಕ್ರೀಡೆಯ ಮಹತ್ವ ಹಾಗೂ ಕ್ರೀಡಾ ಮನೋಭಾವ ಬಗ್ಗೆ ನೌಕರರು ಮಾರ್ಗದರ್ಶನ ಮಾಡಬೇಕು ಎಂದರು.

    ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಎಂ.ಬಿ.ಬಳ್ಳಾರಿ ಮಾತನಾಡಿ, ಕಳೆದ 10 ವರ್ಷಗಳಲ್ಲಿ ಕ್ರೀಡೆಯಲ್ಲಿ ಭಾಗವಹಿಸುವ ನೌಕರರ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿರುವುದರ ಬಗ್ಗೆ ಹರ್ಷ ವ್ಯಕ್ತಪಡಿಸಿದರು. ಸರ್ಕಾರದ ವಿವಿಧ ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿಸುವಲ್ಲಿ ಜಿಲ್ಲೆಯ ಅಧಿಕಾರಿ ಹಾಗೂ ನೌಕರರ ವರ್ಗ ಶ್ರಮಿಸುತ್ತಿರುವುದು ಅಭಿನಂದನಾರ್ಹ ಎಂದು ತಿಳಿಸಿದರು.

    ಸಂಘದ ರಾಜ್ಯ ಕಾರ್ಯದರ್ಶಿ ಹಾಗೂ ರಾಜ್ಯ ಪರಿಷತ್ ಸದಸ್ಯ ಸಂಜೀವ ಸತ್ಯರೆಡ್ಡಿ, ಜಿಲ್ಲಾ ಖಜಾಂಚಿ ಗೋಪಾಲ ನೀಲನಾಯಕ, ಗೌರವಾಧ್ಯಕ್ಷ ಸುರೇಶ ಇಂಜಗನೇರಿ ಇತರರು ಇದ್ದರು. ವಿಠ್ಠಲ ಎಲ್. ವಾಲಿಕಾರ ಸ್ವಾಗತಿಸಿದರು. ಎಸ್. ಎ. ಸಾರಂಗಮಠ ನಿರ್ವಹಣೆ ಮಾಡಿದರು. ಹುಚ್ಚೇಶ ಲಾಯದಗುಂದಿ ವಂದಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts