More

    ಆರೋಗ್ಯ ವಿಮೆಗಾಗಿ ಆಯುಷ್ಮಾನ್ ಭಾರತ ಪಡೆಯಿರಿ

    ದೇವದುರ್ಗ: ಸಾರ್ವಜನಿಕರು ಆರೋಗ್ಯದ ಹಿತದೃಷ್ಟಿಯಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಹಯೋಗದ ಆಯುಷ್ಮಾನ್ ಭಾರತ ಪ್ರಧಾನಮಂತ್ರಿ ಜನ ಸುರಕ್ಷಾ ಯೋಜನೆ ಕಾರ್ಡ್ ಪಡೆಯಬೇಕು. ಇದರಿಂದ ಬಡವರಿಗೆ ಬಹಳ ಅನುಕೂಲವಾಗಲಿದೆ ಎಂದು ನಾಗಡದಿನ್ನಿ ಆರೋಗ್ಯ ಮತ್ತು ಕ್ಷೇಮ ಕೇಂದ್ರದ ಸಮುದಾಯ ಆರೋಗ್ಯಾಧಿಕಾರಿ ಪ್ರಶಾಂತ್ ಸೂರ್ಯವಂಶಿ ಹೇಳಿದರು.

    ನಾಗಡದಿನ್ನಿ ಆರೋಗ್ಯ ಕೇಂದ್ರದಲ್ಲಿ ಆಯುಷ್ಮಾನ್ ಭಾರತ್ ಕಾರ್ಡ್ ನೋಂದಣಿ ಹಾಗೂ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಶನಿವಾರ ಮಾತನಾಡಿದರು. ನಾಗಡದಿನ್ನಿ ಗ್ರಾಪಂ ವ್ಯಾಪ್ತಿಯ ಹೆಗ್ಗಡದಿನ್ನಿ, ಯರಮರಸ್, ತಿಪ್ಪಲದಿನ್ನಿ, ನೀಲಗಲ್ ಗ್ರಾಮಗಳಲ್ಲಿ ನೋಂದಣಿ ಕಾರ್ಯ ನಡೆಯುತ್ತಿದೆ ಎಂದರು.

    ಬಿಪಿಲ್ ಕಾರ್ಡ್‌ದಾರರಿಗೆ ವಾರ್ಷಿಕ 5 ಲಕ್ಷ ರೂ. ಹಾಗೂ ಎಪಿಎಲ್ ಕಾರ್ಡ್‌ದಾರರಿಗೆ 1.50ಲಕ್ಷ ರೂ. ಆರೋಗ್ಯ ವಿಮೆ ಸೌಲಭ್ಯ ದೊರೆಯಲಿದೆ. ಆರೋಗ್ಯ ಇಲಾಖೆ ಸಹಯೋಗದಲ್ಲಿ ಗ್ರಾಮ ಒನ್ ಕೇಂದ್ರದಲ್ಲಿ ಕಾರ್ಡ್ ನೀಡಲಾಗುತ್ತಿದೆ. ಸಾರ್ವಜನಿಕರು ಈ ಸೌಲಭ್ಯ ಪಡೆಯಲು ಆಧಾರ್ ಕಾರ್ಡ್, ರೇಷನ್ ಕಾರ್ಡ್ ಜತೆಗೆ ಮೊಬೈಲ್ ನಂಬರ್ ಲಿಂಕ್ ಮಾಡಬೇಕು ಎಂದು ಪ್ರಶಾಂತ್ ಸೂರ್ಯವಂಶಿ ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts