More

    ಕರ್ನಾಟಕದಲ್ಲಿ ಯುವಜನತೆಯಲ್ಲಿ ಹೆಚ್ಚುತ್ತಿರುವ ಸ್ತನ ಕ್ಯಾನ್ಸರ್; ಕಾರಣವೇನು?

    ಬೆಂಗಳೂರು: ಕರ್ನಾಟಕದಲ್ಲಿ ಸ್ತನ ಕ್ಯಾನ್ಸರ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಸ್ತನ ಕ್ಯಾನ್ಸರ್‌ನಿಂದ ಮರಣ ಹೊಂದುವವರ ಸಂಖ್ಯೆ ಎರಡರಷ್ಟು ಏರಿಕೆ ಆಗಿದೆ ಎಂದು ನ್ಯಾಷನಲ್ ಸೆಂಟರ್ ಫಾರ್ ಡಿಸೀಸ್ ಇನ್ನರ್ಮ್ಯಾಟಿಕ್ಸ್ ಅಂಡ್ ರಿಸರ್ಚ್ (NCDIR) ವರದಿ ಮಾಡಿದೆ.

    ವಿಶೇಷವಾಗಿ 25 ರಿಂದ 30 ವರ್ಷದವರಲ್ಲಿ ಸ್ತನ ಕ್ಯಾನ್ಸರ್ ಪ್ರಕರಣಗಳು ಕಾಣಿಸುತ್ತಿವೆ. ಮದ್ಯಪಾನ, ವಿಳಂಬ ಮದುವೆ, ಅಸಮರ್ಪಕ ಆಹಾರ ಪದ್ಧತಿ, ಆಧುನಿಕ ಜೀವನಶೈಲಿ ಮತ್ತು ಕೆಲವು ಸಂದರ್ಭಗಳಲ್ಲಿ ಅನುವಂಶಿಕ ಕಾರಣಗಳು ಈ ಕ್ಯಾನ್ಸ‌ರ್ ಬೆಳವಣಿಗೆಗೆ ಪ್ರಮುಖ ಕಾರಣ ಎನ್ನಲಾಗಿದೆ.

    ಕೇಂದ್ರ ಆರೋಗ್ಯ ಇಲಾಖೆಯ ಸಹಾಯಕ ಸಚಿವ ಸತ್ಯಪಾಲ್ ಸಿಂಗ್ ಬಾಫೇಲ್ ಇತ್ತೀಚೆಗೆ ಮುಕ್ತಾಯಗೊಂಡ ಲೋಕಸಭೆಯ ಅಧಿವೇಶನದಲ್ಲಿ ಕರ್ನಾಟಕದಲ್ಲಿ 2023ರಲ್ಲಿ ಅಂದಾಜು 14,484 ಸ್ತನ ಕ್ಯಾನ್ಸರ್ ಪ್ರಕರಣಗಳು ಪತ್ತೆಯಾಗಿವೆ. ಅದೇ ರೀತಿ, 5,388 ಸ್ತನ ಕ್ಯಾನ್ಸರ್ ಸಂಬಂಧಿತ ಸಾವುಗಳು ರಾಜ್ಯದಲ್ಲಿ ದಾಖಲಾಗಿವೆ ಎಂದು ಮಾಹಿತಿ ಹಂಚಿಕೊಂಡಿದ್ದರು‌.

    ಕೆಲವು ವರ್ಷಗಳ ಹಿಂದೆ ವೃದ್ಧೆಯರಲ್ಲಿ ಸ್ತನ ಕ್ಯಾನ್ಸರ್ ಪ್ರಕರಣಗಳು ಸಾಮಾನ್ಯವಾಗಿತ್ತು. ಆದರೆ ಈಗಿನ ಅಂಕಿ ಅಂಶಗಳು ಯುವ ಜನರಲ್ಲಿ ಪ್ರಕರಣ ಹೆಚ್ಚಾಗಿರುವುದನ್ನು ತೋರಿಸುತ್ತಿದೆ ಎಂದು ತಜ್ಞರು ವರದಿ ನೀಡಿದ್ದಾರೆ. 

    ಕಿರುತೆರೆಯ ಹಿರಿಯ ನಟ ರಿತುರಾಜ್ ಸಿಂಗ್ ಇನ್ನಿಲ್ಲ

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts