More

    ಆರೋಗ್ಯ ಸಚಿವ ಶ್ರೀರಾಮುಲುಗೂ ಕರೊನಾ ಸೋಂಕು ದೃಢ

    ಬೆಂಗಳೂರು: ಆರೋಗ್ಯ ಸಚಿವ ಶ್ರೀರಾಮುಲುಗೆ ಕರೊನಾ ಸೋಂಕು ತಗುಲಿದೆ. ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಂದು ಪರೀಕ್ಷೆ ಮಾಡಿಸಿದಾಗ ಕರೊನಾ ಪಾಸಿಟಿವ್ ಎಂದು ವರದಿ ಬಂದಿದೆ ಎಂದು ಟ್ವಿಟರ್​ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

    ಕರೊನ ಕಾಣಿಸಿಕೊಂಡ ಸಮಯದಿಂದಲೂ 30 ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಜನರಿಗೆ ಸೂಕ್ತ ಚಿಕಿತ್ಸೆ ಸಿಗುವಂತೆ ಮಾಡುವ ಸರ್ಕಾರದ ಆಶಯಕ್ಕೆ ತಕ್ಕಂತೆ ಕೆಲಸ ಮಾಡುತ್ತಿರುವ ಈ ಸಂದರ್ಭದಲ್ಲಿ ನನಗೆ ಸತ್ವಪರೀಕ್ಷೆಯ ಸಮಯ ಎದುರಾಗಿದೆ ಎಂದು ಶ್ರೀರಾಮುಲು ತಿಳಿಸಿದ್ದಾರೆ. ಚಿಕಿತ್ಸೆಗಾಗಿ ಬೌರಿಂಗ್​ ಆಸ್ಪತ್ರೆಗೆ ದಾಖಲಾಗಿದ್ದಾರೆ.

    ಇದನ್ನೂ ಓದಿ; ಕರೊನಾ ಲಸಿಕೆ, ಖರೀದಿ, ವಿತರಣೆ ನಿರ್ಧರಿಸಲಿದೆ ಈ ಸಮಿತಿ; ಕೇಂದ್ರೀಯ ಟಾಸ್ಕ್​ಪೋರ್ಸ್​ ರಚನೆ 

    ಆದಷ್ಟೂ ಬೇಗ ಗುಣಮುಖನಾಗಿ ಸಂಕಷ್ಟ ಸಮಯದಲ್ಲಿ ಇನ್ನಷ್ಟು ಜನಸೇವೆ ಮಾಡಲು ಶಕ್ತಿ ಕೊಡುವಂತೆ ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಇತ್ತೀಚೆಗೆ ನನ್ನ ಸಂಪರ್ಕದಲ್ಲಿದ್ದ ಎಲ್ಲರೂ ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಮನವಿ ಮಾಡಿದ್ದಾರೆ.

    ಮಾನ್ಯ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನನ್ನ ಇಲಾಖೆ ಸೇರಿ ಎಲ್ಲ ಇಲಾಖೆಗಳು ಮಹಾಮಾರಿಯ ವಿರುದ್ಧ ಹಗಲಿರುಳೂ ಶ್ರಮಿಸುತ್ತಿವೆ ಎಂದು ಶ್ರೀರಾಮುಲು ಹೇಳಿದ್ದಾರೆ.

    ಮುಗಿಯುತ್ತ ಬಂತು ಅರ್ಧ ಶೈಕ್ಷಣಿಕ ವರ್ಷ; ನರ್ಸರಿ ಬಳಿಕ ಮುಚ್ಚುವ ಭೀತಿಯಲ್ಲಿವೆಯೇ ಖಾಸಗಿ ಶಾಲೆಗಳು?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts