More

  ಸ್ವಚ್ಛತೆಯಿಂದ ಆರೋಗ್ಯ ರಕ್ಷಣೆ

  ಕಡೂರು: ಮನುಷ್ಯನಿಗೆ ಆರೋಗ್ಯವೇ ಭಾಗ್ಯ ಎಂಬಂತೆ ಸ್ವಚ್ಛತೆಯಿಂದ ಮಾತ್ರ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ ಎಂದು ಜ್ಞಾನವಿಕಾಸ ಕೇಂದ್ರದ ಸಮನ್ವಯಾಧಿಕಾರಿ ಲಕ್ಷ್ಮೀ ಹೇಳಿದರು.

  ಪಟ್ಟಣಗೆರೆ ಗ್ರಾಮದಲ್ಲಿ ಶನಿವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನವಿಕಾಸ ಕೇಂದ್ರ ಹಮ್ಮಿಕೊಂಡಿದ್ದ ನೀರು, ನೈರ್ಮಲ್ಯ ಕುರಿತು ಬೀದಿ ನಾಟಕ ಕಾರ್ಯಕ್ರಮದಲ್ಲಿ ಮಾತನಾಡಿ, ಮನೆ ಮತ್ತು ಸುತ್ತಮುತ್ತಲ ಪರಿಸರ ಸ್ವಚ್ಛವಾಗಿಡುವುದು ಎಲ್ಲರ ಜವಾಬ್ದಾರಿ. ಮನೆ ಸುತ್ತಮುತ್ತ ನೀರು ಸಂಗ್ರಹವಾಗದಂತೆ ನೋಡಿಕೊಳ್ಳಬೇಕು. ಸಾಂಕ್ರಾಮಿಕ ಕಾಯಿಲೆಗಳು ಹರಡುವುದೇ ಸೊಳ್ಳೆಗಳಿಂದ. ಸೊಳ್ಳೆಗಳು ಉತ್ಪತ್ತಿಯಾಗದಂತೆ ಎಚ್ಚರಿಕೆ ವಹಿಸಿ. ಬೀದಿ ನಾಟಕಗಳ ಮೂಲಕ ಅರಿವು ಮೂಡಿಸಲಾಗುತ್ತಿದೆ ಎಂದರು.
  ಬಾಣೂರು ಗ್ರಾಮದಲ್ಲಿಯೂ ದಾವಣಗೆರೆ ಶ್ರುತಿ ಕಲಾತಂಡದ ಸದಸ್ಯರು ಬೀದಿ ನಾಟಕ ಪ್ರದರ್ಶನ ನಡೆಸಿಕೊಟ್ಟರು. ಬಾಣೂರು ಗ್ರಾಪಂ ಅಧ್ಯಕ್ಷೆ ಸುನಂದಮ್ಮ, ಪಿಡಿಒ ಜಗದೀಶ್, ಡಾ. ಪ್ರಿಯಾಂಕಾ, ಉಮಾ, ಜಗದೀಶ್, ಬಿ.ಎಂ.ಶಿವಮೂರ್ತಿ ಹಾಗೂ ಸೇವಾಪ್ರತಿನಿಧಿಗಳು ಇದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts